India Languages, asked by malihasiddiqui649, 11 months ago

ಕಲ್ಪನೆಯ ಕಣ್ಣು ಹರಿವನಕ ಸಾಲು
ದೀಪಗಳ ಬೆಳಕ ಬೀರೇವು
ಹಚ್ಚಿರುವ ದೀಪದಲಿ ತಾಯ ರೂಪ
ಅಚ್ಚಳಿಯದಂತೆ ತೋರೇವು
ಒಡಲೊಡಲ ಕೆಚ್ಚಿನಾ ಕಿಡಿಗಳನ್ನು
ಗಡಿನಾಡಿನಾಚೆ ತೂರೇವು
ಹೊಮ್ಮಿರಲು ಪ್ರೀತಿ ಎಲ್ಲಿಯದು ಭೀತಿ?
ನಾಡೊಲವೆ ನೀತಿ ಹಿಡಿ ನೆನಪ
ಮನೆ ಮನೆಗಳಲ್ಲಿ ಮನಮನಗಳಲ್ಲಿ
ಹಚ್ಚೇವು ಕನ್ನಡದ ದೀಪ

ನಮ್ಮವರು ಗಳಿಸಿದಾ ಹೆಸರ ಉಳಿಸ-
ಲೆಲ್ಲಾರು ಒಂದುಗೂಡೇವು
ನಮ್ಮೆದೆಯ ಮಿಡಿಯುವೀ ಮಾತಿನಲ್ಲಿ
ಮಾತೆಯನು ಪೂಜೆ ಮಾಡೇವು
ನಮ್ಮುಸಿರು ತೀಡುವೀ ನಾಡಿನಲ್ಲಿ
ಮಾಂಗಲ್ಯಗೀತ ಹಾಡೇವು
ತೊರೆದೇವು ಮರುಳ, ಕಡೆದೇವು ಇರುಳ ಪಡೆದೇವು ತಿರುಳ ಹಿಡಿ ನೆನಪ
ಕರುಳೆಂಬ ಕುಡಿಗೆ ಮಿಂಚನ್ನೆ ಮುಡಿಸಿ ಹಚ್ಚೇವು ಕನ್ನಡದ ದೀಪ
please frame some questions for this in kannada​

Answers

Answered by gaanashreegaana18
1

Explanation:

೧.ಹಚ್ಚಿರುವ ದೀಪದಲಿ ಯಾರ ರೂಪ

ಅಚ್ಚಳಿಯದಂತೆ ತೋರೇವು?

೨.ನಮ್ಮುಸಿರು ತೀಡುವೀ ನಾಡಿನಲ್ಲಿ

ಯಾವ ಗೀತೆ ಹಾಡೇವು

೩.ನಮ್ಮವರು ಗಳಿಸಿದಾ ಹೆಸರ ಉಳಿಸ-

ಲು ಎಲ್ಲಾರು ಏನು ಮಾಡಬೇಕು?

Similar questions