India Languages, asked by brabhijith1, 9 months ago

ಸಮಾಸ ಎಂದರೇನು? ಉದಾಹರಣೆಯನ್ನು ತಿಳಿಸಿ?​

Answers

Answered by Anonymous
3

ಸಮಾಸವೆಂದರೆ ಸಮಸ್ತ ಪದವೆಂದರ್ಥ. ಅರ್ಥವನ್ನು ಅನುಸರಿಸಿ, ಎರಡು ಅಥವಾ ಅದಕ್ಕಿಂತ ಹೆಚ್ಚಿನ ಪದಗಳನ್ನು ಸಂಕ್ಷೇಪದಿಂದ ಹೇಳುವುದನ್ನು ಸಮಾಸ ಎನ್ನಲಾಗುತ್ತದೆ. ಅಕ್ಷರಗಳು ಒಂದಕ್ಕೊಂದು ಸೇರುವುದಕ್ಕೆ ಸಂಧಿ ಎನ್ನಲಾಗುತ್ತದೆ. ಅದೇ ರೀತಿ ಅರ್ಥಾನುಸಾರವಾಗಿ, ಪದಗಳು ಸೇರಿ, ಮಧ್ಯದಲ್ಲಿರುವ ವಿಭಕ್ತಿ ಪ್ರತ್ಯಯವನ್ನು ಲೋಪ ಮಾಡಿಕೊಂಡು, ಸಂಯುಕ್ತ ಪದಗಳಾಗುವದನ್ನು 'ಸಮಾಸ' ವೆನ್ನಲಾಗುತ್ತದೆ.[೧] ಉದಾ: 'ಕೆಂಪಾದ ತಾವರೆ' ಎಂಬಲ್ಲಿ, ಕೆಂಪು - ತಾವರೆ ಪದಗಳು ಕೂಡಿ, 'ಕೆಂದಾವರೆ' ಎಂಬ ಸಮಸ್ತ ಪದವಾಗುತ್ತದೆ.

Similar questions