ಭಾರತ ಉಷ್ಣ ವಲಯದ ಕಾಡು ಆದರ ಬಗ್ಗೆ ತಿಳಿಸಿ
Answers
Answer:
ಉಷ್ಣ ಮತ್ತು ಸಮಶೀತೋಷ್ಣವಲಯಗಳನ್ನು ಬೇರ್ಪಡಿಸುವ ಮಕರ ಸಂಕ್ರಾಂತಿವೃತ್ತವು ದೇಶದ ಮಧ್ಯಭಾಗದಿಂದ ಹಾದುಹೋಗುತ್ತದಾದರೂ, ಬಹುತೇಕ ಭಾರತದ ವಾಯುಗುಣ ಉಷ್ಣವಲಯದ ಮಾನ್ಸೂನ್ ವಾಯುಗುಣವಾಗಿದೆ. ಭಾರತದ ವಾರ್ಷಿಕ ವಾಯುಗುಣವನ್ನು ನಾಲ್ಕು ಋತುಗಳನ್ನಾಗಿ ವಿಂಗಡಿಸಬಹುದು. ಅವೇನೆಂದರೆ (ಕ)ಚಳಿಗಾಲ : ಜನವರಿ-ಫೆಬ್ರವರಿ (ಖ) ಬೇಸಿಗೆಕಾಲ : ಮಾರ್ಚ - ಮೇ (ಗ) ನೈಋತ್ಯ ಮಾನ್ಸೂನ್ ಅಥವಾ ಮಳೆಗಾಲ (ಘ) ಈಶಾನ್ಯ ಮಾನ್ಸೂನ್ ಅಥವಾ ನಿರ್ಗಮನ ಮಾನ್ಸೂನ್ ಕಾಲ.
ಕೋಪೆನ್ ಪದ್ಧತಿಯ ಪ್ರಕಾರ ಭಾರತದ ವಾಯುಗುಣವನ್ನು ಆರು ಮುಖ್ಯ ವಲಯಗಳಾಗಿ ವಿಂಗಡಿಸಬಹುದು. ಅವೆಂದರೆ (ಕ) ಉಷ್ಣವಲಯದ ತೇವಾಂಶಭರಿತ ವಾಯುಗುಣ (ಖ) ಉಷ್ಣವಲಯದ ತೇವಾಂಶಭರಿತ ಮತ್ತು ಶುಷ್ಕ ವಾಯುಗುಣ (ಗ) ಉಷ್ಣವಲಯದ ಅರೆ ಶುಷ್ಕ ವಾಯುಗುಣ (ಘ) ಮರುಬೂಮಿ (ಶುಷ್ಕ) ವಾಯುಗುಣ (ಙ)ಉಪ ಉಷ್ಣವಲಯದ ಮಳೆಬೀಳುವ ವಾಯುಗುಣ (ಚ) ಆಲ್ಪೈನ್ (ಪರ್ವತ ಮಾದರಿ) ವಾಯುಗುಣ.
ಬಹುತೇಕ ಉಷ್ಣವಲಯದ ಪ್ರದೇಶಗಳಂತೆ ಭಾರತದ ವಾಯುಗುಣವೂ ಕೂಡ ಅತ್ಯಂತ ಅಸ್ಠಿರವಾಗಿದ್ದು, ಆಗಾಗ್ಗೆ ಬರ, ಪ್ರವಾಹ, ಚಂಡಮಾರುತದಂಥ ಪ್ರಾಕೃತಿಕ ವಿಕೋಪಗಳು ಸಂಭವಿಸುತ್ತಿರುತ್ತವೆ. ಒಂದು ವ್ಯಾಪಕವಾದ ಒಮ್ಮತಾಭಿಪ್ರಾಯದಂತೆ ಜಾಗತಿಕ ತಾಪಮಾನದ ಹೆಚ್ಚಳ ಮತ್ತು ಬದಲಾಗುತ್ತಿರುವ ಸಸ್ಯವಲಯಗಳಿಂದಾಗಿ ಪ್ರಾಕೃತಿಕ ವಿಕೋಪಗಳ ಆವರ್ತನ ಬದಲಾಗುತ್ತಿದ್ದು ಅವು ಮತ್ತಷ್ಟು ಹಾನಿಕಾರಕವಾಗುವ ಸಂಭವವಿದೆ.
Explanation:
Nimige ithu Google alli sa sigathe✨️☺️✨️