ನಿಮ್ಮ ಶಾಲೆಯಲ್ಲಿ ಆಚರಿಸಿದ ಯೋಗ ದಿನಾಚರಣೆ ಕುರಿತು ನಿಮ್ಮ ತಂದೆಗೆ ಒಂದು ಪತ್ರ ಬರೆಯಿರಿ
Answers
ಅಮ್ಮಂದಿರು ಹೇಗೆ ಅಪೇಕ್ಷಿಸುತ್ತಾರೋ, ಅರಿವಿದ್ದೋ, ಅರಿವಿಲ್ಲದೆಯೋ ಎಡವಿ ಬಿದ್ದಾಗ ಮಕ್ಕಳು ಕೂಡ ಪ್ರೀತಿಯ ಅಪ್ಪ ಮತ್ತು ಅಮ್ಮ ತಮ್ಮ ಕಿರುಬೆರಳು ಹಿಡಿದು ಎಬ್ಬಿಸುತ್ತಾರೆಂದು ಅಪೇಕ್ಷಿಸುತ್ತವೆ. ಸೋತಾಗ ಕೈಹಿಡಿದು ಎಬ್ಬಿಸಿ, ಗೆದ್ದಾಗ ಬೆನ್ನುತಟ್ಟಿ ಪ್ರೋತ್ಸಾಹಿಸುವುದು ಪ್ರತಿ ಪಾಲಕರ ಕರ್ತವ್ಯ.
* ಎ.ಆರ್. ಮಣಿಕಾಂತ್
ಮಗಳ ವರ್ತನೆ ಯಾಕೋ ಸರಿಯಾಗಿಲ್ಲ. ಇಂಥದೊಂದು ಅನುಮಾನ ಗೋಪಾಲರಾವ್‌ನನ್ನು ಒಂದು ವಾರದಿಂದ ಬಿಡದೆ ಕಾಡುತ್ತಿತ್ತು. ಅದಕ್ಕೆ ಸರಿಯಾಗಿ, ಎಸ್ಸೆಸ್ಸೆಲ್ಸಿ ಓದುತ್ತಿದ್ದ ಅವನ ಮಗಳು ಶ್ವೇತಾ, ನೇರಾನೇರ ಮಾತಿಗೆ ಸಿಗದೆ ತಪ್ಪಿಸಿಕೊಳ್ಳುತ್ತಿದ್ದಳು. ಈತ ಆಫೀಸಿನಿಂದ ಬರುವ ವೇಳೆಗೆ ಹೋಂವರ್ಕ್ ಎಂದೋ; ಪ್ರಾಜೆಕ್ಟ್ ವರ್ಕ್ ಎಂದೋ ಬಿಜಿಯಾಗಿರುತ್ತಿದ್ದಳು. ಬೆಳಗ್ಗೆಯಂತೂ, ಟ್ಯೂಶನ್‌ನ ನೆಪದಲ್ಲಿ ಹೋಗಿಬಿಟ್ಟರೆ, ಆಕೆ ಮನೆಗೆ ಬರುವ ವೇಳೆಗೆ ಗೋಪಾಲರಾಯರು ಆಫೀಸಿಗೆ ಹೊರಟು ನಿಂತಿರುತ್ತಿದ್ದರು.
ತುಂಬ ವರ್ಷಗಳಿಂದಲೂ ಇದೇ ಪರಿಸ್ಥಿತಿಯಿತ್ತು ನಿಜ. ಆದರೆ, ಈ ಹಿಂದೆಲ್ಲಾ ಮಗಳ ಮಾತು-ವರ್ತನೆ, ಎರಡರಲ್ಲೂ ಗೋಪಾಲರಾವ್‌ಗೆ ಚಿಕ್ಕದೊಂದು ಅನುಮಾನವೂ ಬಂದಿರಲಿಲ್ಲ. ಮಗಳು ಹೀಗೆ ಮುಖ ಮರೆಸಿಕೊಂಡು ಓಡಾಡ್ತಾಳೆ ಅಂದರೆ, ಏನೋ ಅನಾಹುತ ನಡೆದಿದೆ ಅಂದುಕೊಂಡರು ಗೋಪಾಲರಾವ್. ಹೇಳಿ ಕೇಳಿ ಮಗಳಿಗೆ ಹದಿನೈದು ತುಂಬಿದೆ. ಯಾರಾದ್ರೂ ಹುಡುಗ ಇವಳಿಗೆ ಲವ್ ಲೆಟರ್ ಕೊಟ್ಟು ಬಿಟ್ನಾ? ವಯಸ್ಸಿನ ಹುಚ್ಚು ಆವೇಶದಲ್ಲಿ ಮಗಳೂ ಅದನ್ನು ಒಪ್ಪಿಬಿಟ್ಟಳಾ? ಅದೇ ಕಾರಣದಿಂದ ನಮಗೆ ಸಿಗದೇ ಓಡಾಡ್ತಾ ಇದಾಳಾ...? ಎಂದೆಲ್ಲ ಕಲ್ಪಿಸಿಕೊಂಡರು ಗೋಪಾಲರಾವ್. ಹೆಂಡತಿ ಕೂಡ ಕೆಲಸಕ್ಕೆ ಹೋಗ್ತಾ ಇದಾಳಲ್ಲ, ಅವಳಿಗೆ ಈ ವಿಷಯ ಗೊತ್ತಾದರೆ- ರಂಪ ರಾಮಾಯಣ ಆದೀತು. ಅವಳಿಗೆ ಬಿಪಿ, ಶುಗರ್ ಎರಡೂ ಇದೆ. ಏನಾದ್ರೂ ಫಜೀತಿ ಆದ್ರೆ ಕಷ್ಟ. ಅವಳಿಗೆ ಗೊತ್ತಾಗುವ ಮೊದಲು ನಾನೇ ಪರಿಸ್ಥಿತೀನ ಹ್ಯಾಂಡಲ್ ಮಾಡೋಣ ಎಂದುಕೊಂಡ ಗೋಪಾಲರಾವ್ ಅದೊಂದು ಶನಿವಾರ ಮಧ್ಯಾಹ್ನ ದಿಢೀರನೆ ಮನೆಗೆ ಬಂದೇಬಿಟ್ಟರು.
ಆಗಲೂ ಮಗಳು ಮನೆಯಲ್ಲಿರಲಿಲ್ಲ. ಸ್ಕೂಲಿಂದ ಬಂದವಳು ಎಲ್ಲಿಗೆ ಹೋದಳು? ಹಾಗೆ ಹೋಗುವ ಮುನ್ನ ಒಂದು ಪತ್ರ ಬರೆದಿಟ್ಟು- ಹೋಗಬಾರದಿತ್ತಾ? ಅಥವಾ ಅವರ ಅಮ್ಮನಿಗೇನಾದರೂ ಈ ವಿಷಯವಾಗಿ ಮೊದಲೇ ಹೇಳಿದ್ದಾಳಾ? ಇಂಥವೇ ಯೋಚನೆಯಲ್ಲಿ ಗೋಪಾಲರಾವ್ ಹಣ್ಣಾಗಿ ಹೋದ. ಉಹುಂ, ಅವನಿಗೆ ಖಡಕ್ ಉತ್ತರ ಹೊಳೆಯಲಿಲ್ಲ.