CBSE BOARD X, asked by nanduchandu2001, 7 months ago

೨. ಭಗತ್ ಸಿಂಗ್ ಮಹಾತ್ಮನಾದದ್ದು ಯಾವಾಗ ?​

Answers

Answered by Anonymous
12

Answer:

ಭಗತ್ ಸಿಂಗ್(೧೯೦೭–೧೯೩೧) ಭಾರತ ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿ ಮತ್ತು ಸ್ವಾತಂತ್ರ್ಯ ಹೋರಾಟಗಾರ

ಜನನ ಜರನವಾಲಾ ತಾಲೂಕಿನ ಬಂಗಾ ಎಂಬ ಹಳ್ಳಿಯಲ್ಲಿ. ಅವರ ತಾಯಿ ಶ್ರೀಮತಿ ವಿದ್ಯಾವತಿ ಮತ್ತು ಜೀವ ವಿಮಾ ಕಂಪನಿಯಲ್ಲಿ ಏಜೆಂಟರಾಗಿ ವೃತ್ತಿ ಮಾಡುತ್ತಿದ್ದ ತಂದೆ ಕಿಶನ್ ಸಿಂಗ್. ಭಗತ್ ಮೇಲೆ ಅತೀವ ಪ್ರಭಾವವನ್ನು ಬೀರಿದ್ದವರೆಂದರೆ ಅವರ ಚಿಕ್ಕಪ್ಪ ಅಜಿತ್ ಸಿಂಗ್.

ಈಗಾಗಲೇ ಅಜಿತ್ ಸಿಂಗರು ಉಗ್ರ ಭಾಷಣಕಾರರಾಗಿದ್ದು ರೈತರ ನಡುವೆ ಹಲವಾರು ಚಳುವಳಿಗಳನ್ನು ಸಂಘಟಿಸಿ ಬ್ರಿಟೀಷರು ಬಂಧನಕ್ಕೀಡು ಮಾಡಲು ಬಲೆ ನೇಯ್ದಿದ್ದರೂ ಸಿಗದೆ ಅವರಿಗೆ ಚಳ್ಳೆ ಹಣ್ಣು ತಿನ್ನಿಸುತ್ತಿದ್ದರು. ಇದರೊಂದಿಗೆ ಜಲಿಯನ್ ವಾಲಾಬಾಗ್‌ನಲ್ಲಿ ಬ್ರಿಟೀಷರು ನಡೆಸಿದ ಮಾರಣಹೋಮದಿಂದುಂಟಾದ ರಕ್ತದ ಕೆಂಪು ಕಲೆ ಅವರಲ್ಲಿ ಸ್ವಾತಂತ್ರ್ಯ ಹೋರಾಟದ ಕಿಚ್ಚನ್ನು ಹಬ್ಬಿಸಿ ಮನಸ್ಸಿನಲ್ಲಿ ಹೋರಾಟದ ಚಿತ್ತಾರ ಮೂಡಿಸಿತ್ತು.

ಪಂಜಾಬಿನ ಕ್ರಾಂತಿಕಾರಿ ಚಟುವಟಿಕೆಗಳಲ್ಲಿ ನಿರತರಾಗಿದ್ದು, ಲಾಹೋರ್ ಪಿತೂರಿ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಕರ್ತಾರ್ ಸಿಂಗ್ ಸರಭ್ ರವರನ್ನು 1915 ರಲ್ಲಿ ಅವರ 20 ನೇ ವಯಸ್ಸಿನಲ್ಲೇ ನೇಣಿಗೇರಿಸಲಾಗಿತ್ತು. "ರಾಷ್ಟ್ರ ವಿಮೋಚನೆಯೊಂದೇ ನನ್ನ ಗುರಿ. ಯಾವುದೇ ವ್ಯಕ್ತಿ, ರಾಷ್ಟ್ರ, ಧರ್ಮ ಅಥವಾ ಜನಾಂಗದ ಮೇಲೆ ದ್ವೇಷ ಸಾಧಿಸಲು ನಾನಾವುದನ್ನೂ ಮಾಡಿಲ್ಲ. ನನಗೆ ಬೇಕಾಗಿರುವುದೊಂದೆ - ಸ್ವಾತಂತ್ರ್ಯ. ಅದೊಂದೇ ನನ್ನ ಕನಸು" ಎಂಬ ಸರಭ್‌ರ ಕೊನೆಗಾಲದ ಮಾತುಗಳು ಅವರಲ್ಲಿ ಕ್ರಾಂತಿಯ ಉದ್ದೀಪನ ಹಚ್ಚಿದ್ದವು. ಇದು ಭಗತ್‌ರನ್ನು ಮೈನವಿರೇಳಿಸಿ ಸಾವಿಗೇ ಸವಾಲು ಹಾಕುವಂತಹ ಗುಣವನ್ನು ಮೈಗೂಡುವಂತೆ ಮಾಡಿತ್ತು.

Explanation:

ನಿಮ್ಮ ಉತ್ತರವು ಮೇಲ್ಭಾಗದಲ್ಲಿದೆ

Similar questions