India Languages, asked by dhananjaykedarji, 6 months ago

ಗೋಲ್ ಗುಂಬಜ್ ಎಲ್ಲಿದೆ​

Answers

Answered by Anonymous
276

ಗೋಲ ಗುಮ್ಮಟ ಆದಿಲ್ ಶಾ (ಆಳ್ವಿಕೆ: ೧೬೨೭-೧೬೫೭)ನ ಗೋರಿಯಾಗಿ ಕಟ್ಟಲಾದ ಸ್ಮಾರಕ. ಇದನ್ನು ೧೬೫೯ರಲ್ಲಿ ಪ್ರಸಿದ್ದ ವಾಸ್ತುಶಿಲ್ಪಿಗಳಾದ ಯಾಕುತ್ ಮತ್ತು ದಬೂಲ್ರವರು ನಿರ್ಮಿಸಿದ್ದಾರೆ. ಇದರ ಉದ್ದ ಮತ್ತು ಅಗಲ ೫೦ ಮೀ , ಹೊರಗಡೆ ಎತ್ತರ ೧೯೮ ಅಡಿ ಮತ್ತು ಒಳಗಡೆ ಎತ್ತರ ೧೭೫ ಅಡಿ ಇದ್ದು ಮೇಲಿನ ಗೋಲಾಕಾರದ ಗುಂಬಜ್ ೩೯ ಮೀ (೧೨೪ ಅಡಿ) ವ್ಯಾಸ ಹೊಂದಿದೆ.ಅದರಂತೆ ೮ ಅಂತಸ್ತುಗಳಿವೆ. ಇದು ವಿಶ್ವದ ಎರಡನೆ ಅತಿ ದೊಡ್ಡ ಮಾನವನಿರ್ಮಿತ ಗುಂಬಜ್ (ಇಟಲಿಯ ರೋಮ್ ನಗರದ ಬೆಸಿಲಿಕಾ ಚರ್ಚ್ - ವಿಶ್ವದ ಅತಿ ದೊಡ್ಡ ಮಾನವನಿರ್ಮಿತ ಗುಂಬಜ್). ಇದರ ವಿಶೇಷ ಆಕರ್ಷಣೆಯೆಂದರೆ ಇದರೊಳಗಿನ ಪ್ರಧಾನ ಕೊಠಡಿಯಲ್ಲಿ ಪ್ರತಿ ಶಬ್ದವೂ ಏಳು ಬಾರಿ ಪ್ರತಿಧ್ವನಿತವಾಗುತ್ತದೆ!ಹಾಗೆಯೆ ಇಲ್ಲಿರುವ "ಪಿಸುಗುಟ್ಟುವ ಶಾಲೆ"ಯಲ್ಲಿ ಅತಿ ಸಣ್ಣ ಶಬ್ದವೂ ೩೭ ಮಿ ದೂರದಲ್ಲಿ ಸ್ಪಷ್ಟವಾಗಿ ಕೇಳಿಬರುತ್ತದೆ. ಇದರ ಹತ್ತಿರ ಬಿಜಾಪುರ ಆದಿಲ್ ಶಾಹಿಗಳಿಗೆ ಸಂಭದಿಸಿದ ವಸ್ತು ಸಂಗ್ರಾಹಾಲಯವು ಇದೆ.

<marquee>♥️ItzSwagkinG♥️<marquee>

Answered by kumar87977
27

Answer:

ಗೋಲ್ ಗುಂಬಜ್ ಬಿಜಾಪೂರ ಜಿಲ್ಲೆಯಲ್ಲಿ ಇದೆ.

Similar questions