ಹಿಂದಿನ ಶಿಕ್ಷನ ವವಾಸಥ ವರದಿ
Answers
Question ⤵
ಹಿಂದಿನ ಶಿಕ್ಷನ ವವಾಸಥ ವರದಿ
Answer ⬇
➡ ಭಾರತದಲ್ಲಿ ಶಿಕ್ಷಣವನ್ನು ಸಾರ್ವಜನಿಕ ವಲಯವೂ ಹಾಗೆ ಖಾಸಗಿ ವಲಯವೂ ನೀಡುತ್ತಿದೆ.ಶಿಕ್ಷಣಕ್ಕೆ ಅನುದಾನವು ಮೂರು ಕಡೆಯಿಂದ ಬರುತ್ತದೆ.ಅವುಗಳೆಂದರೆ ಕೇಂದ್ರಸರ್ಕಾರ,ರಾಜ್ಯ ಸರ್ಕಾರ, ಮತ್ತು ಸ್ಥಳೀಯ ಸಂಸ್ಥೆಗಳು.ಭಾರತದ ಹಳೆಯ ಉನ್ನತ ಶಿಕ್ಷಣ ಕೇಂದ್ರವೆಂದರೆ ತಕ್ಷಶಿಲ.ಇಂದಿಗೂ ಇದನ್ನು ವಿಶ್ವವಿದ್ಯಾನಿಲಯವೆಂದು ಕರೆಯಬೇಕೆ /ಬೇಡವೇ ಎಂಬ ವಿವಾದಗಳಿವೆ.ಪ್ರಪಂಚದ ಅತ್ಯಂತ ಹಳೆಯ ವಿಶ್ವವಿದ್ಯಾನಿಲಯವೆಂದರೆ ನಳಂದ ವಿಶ್ವವಿದ್ಯಾನಿಲಯ.ಬ್ರಿಟಿಷ್ ಸಾಮ್ರಾಜ್ಯದ ಸ್ಥಾಪನೆಯೊಂದಿಗೆ ಭಾರತದಲ್ಲಿ ಪಾಶ್ಚಾತ್ಯ ಶಿಕ್ಷಣ ಆಳವಾಗಿ ಬೇರೂರಿತು.
ಭಾರತದಲ್ಲಿ ಶಿಕ್ಷಣವು ಕೇಂದ್ರಸರ್ಕಾರ ಮತ್ತು ರಾಜ್ಯಸರ್ಕಾರಗಳೆರಡರ ನಿಯಂತ್ರಣಕ್ಕೆ ಒಳಪಡುತ್ತದೆ.ಶಿಕ್ಷಣಕ್ಕೆ ಸಂಬಂದಿಸಿದಂತೆ ಕೆಲವೊಂದು ಜವಬ್ದಾರಿಗಳು ಕೇಂದ್ರಸರ್ಕಾರಕ್ಕೆ ಸ್ವಾಯತ್ತವಾದರೆ ಇನ್ನುಳಿದವು ರಾಜ್ಯಸರ್ಕಾರದ ಜವಬ್ದಾರಿಗಳಾಗುತ್ತವೆ.ಭಾರತ ಸಂವಿಧಾನದ ವಿವಿಧ ಅನುಚ್ಛೇದಗಳು ಶಿಕ್ಷಣವನ್ನು ಮೂಲಭೂತ ಹಕ್ಕನ್ನಾಗಿಸಿವೆ.ಭಾರತದಲ್ಲಿನ ಬಹುತೇಕ ವಿಶ್ವವಿದ್ಯಾನಿಲಯಗಳನ್ನು ಕೇಂದ್ರ ಸರ್ಕಾರ/ರಾಜ್ಯಸರ್ಕಾರ ನಿಯಂತ್ರಿಸುತ್ತದೆ.
Thank you!