Art, asked by hmshareefanavar, 3 months ago

* ವಿವೇಕಾನಂದರು ಯಾವ ವ್ಯವಸ್ಥೆಯನ್ನು ವಿರೋಧಿಸುತ್ತಾರೆ?
೩. ಜಾತಿ ವ್ಯವಸ್ಥೆಯ ಕೌರ್ಯಕ್ಕೆ ತುತ್ತಾಗಿರುವವರು ಯಾರು?
೪, ಸರ್ವಧರ್ಮ ಸಮ್ಮೇಳನವು ಎಲ್ಲಿ ನಡೆಯಿತು?
೫. ವಿವೇಕಾನಂದರನ್ನು 'ಮಾನವತಾಮಿತ' ರೆಂದು ಕರೆದವರಾರು?
ಕೊಟ್ಟಿರುವ ಪ್ರಶ್ನೆಗಳಿಗೆ ಮೂರು-ನಾಲ್ಕು ವಾಕ್ಯಗಳಲ್ಲಿ ಉತ್ತರಿಸಿ,
ಬಿಪಾಯವೇನು?
Jಡುವ ಪ್ರಶ್ನೆಗಳಿಗೆ ಒಂದು ವಾಕ್ಯದಲ್ಲಿ ಉತ್ತರಿಸಿ,
ವಿವೇಕಾನಂದರೆಂದರೆ ಯಾವುದರ ರೂಪಕವಾಗಿದೆ?​

Answers

Answered by 2814234
0

Answer:

c

Explanation:

ವಿವೇಕಾನಂದರ ಪೂರ್ವದ ಹೆಸರು ನರೇಂದ್ರನಾಥ ದತ್ತ. ಇವರು 1863, ಜನವರಿ 12ರಂದು ಕೊಲ್ಕತ್ತದಲ್ಲಿ ಜನಿಸಿದರು. ತಂದೆ ವಿಶ್ವನಾಥ ದತ್ತ. ತಾಯಿ ಭುವನೇಶ್ವರಿ ದೇವಿ. ಶ್ರೀ ರಾಮಕೃಷ್ಣ ಪರಮಹಂಸರ ಶಿಷ್ಯರಾದ ಮೇಲೆ 'ವಿವೇಕಾನಂದ' ಎಂಬ ಹೆಸರನ್ನು ಪಡೆದರು. ಕಲ್ಕತ್ತೆಯ ಸ್ಕಾಟಿಷ್ ಚರ್ಚ್ ಕಾಲೇಜಿನಲ್ಲಿ ತತ್ತ್ವಶಾಸ್ತ್ರ ಅಧ್ಯಯನ ಮಾಡಿದರು. ‍ ರಾಮಕೃಷ್ಣರ ಒಡನಾಟ :

ನರೇಂದ್ರರಿಗೆ ರಾಮಕೃಷ್ಣರ ಮೊದಲ ಪರಿಚಯ ವಿಲಿಯಮ್ ಹೆಸ್ಟಿಯವರ ತರಗತಿಯಲ್ಲಿ. ಹೆಸ್ಟಿಯವರು ವಿಲಿಯಮ್ ವರ್ಡ್ಸ್ವವರ್ತ್ ಅವರ "ದ ಎ‍ಕ್ಸಕರ್ಶನ್" ಎಂಬ ಕವಿತೆಯಲ್ಲಿನ "ಸಮಾಧಿ" ಪದವನ್ನು ವಿವರಿಸುವಾಗ ಸಮಾಧಿಯ ನಿಜವಾದ ಅರ್ಥ ತಿಳಿಯಲು ದಕ್ಷಿಣೇಶ್ವರದ ರಾಮಕೃಷ್ಣರನ್ನೊಮ್ಮೆ ಭೇಟಿ ನೀಡಿ ಎಂದು ಸಲಹೆ ಇತ್ತರು. ಇವರ ಸಲಹೆಯ ಮೇರೆಗೆ ಹಲವಾರು ವಿದ್ಯಾರ್ಥಿಗಳು ರಾಮಕೃಷ್ಣರನ್ನು ನೋಡಲು ಉತ್ಸುಕರಾದರು. ಆವರಲ್ಲಿ ನರೇಂದ್ರರೂ ಒಬ್ಬರು.

೧೮೮೧ನೇ ಇಸವಿ ನವೆಂಬರದಲ್ಲಿ ಎಫ್.ಎ(ಲಲಿತಕಲೆ)ಪರೀಕ್ಷೆ ಬರೆಯಲು ತಯಾರಿ ನಡೆಸುತ್ತಿದ್ದಾಗ, ರಾಮಚಂದ್ರದತ್ತರು ರಾಮಕೃಷ್ಣರು ಪ್ರವಚನ ನಡೆಸುತ್ತಿದ್ದರು ಸುರೇಂದ್ರನಾಥ ಮಿತ್ರರ ಮನೆಗೆ ಕರೆದರು. ಅಲ್ಲಿ ರಾಮಕೃಷ್ಣರು ನರೇಂದ್ರನಿಗೆ ಹಾಡಲು ಕೇಳಿಕೊಂಡರು. ಅವರ ಗಾಯನ ಪ್ರತಿಭೆಯನ್ನು ಮೆಚ್ಚಿ ರಾಮಕೃಷ್ಣರು ನರೆಂದ್ರನನ್ನು ದಕ್ಷಿಣೇಶ್ವರಕ್ಕೆ ಬರಲು ಆಮಂತ್ರಿಸಿದರು. ಆದರೆ ನರೇಂದ್ರರು ಅದರ ಬಗ್ಗೆ ಉತ್ಸಾಹ ತೊರಿಸಲಿಲ್ಲ.

೧೮೮೨ ರಲ್ಲಿ ನರೇಂದ್ರರು ತನ್ನ ಇಬ್ಬರು ಗೆಳೆಯರೊಂದಿಗೆ ರಾಮಕೃಷ್ಣರನ್ನು ಭೇಟಿ ಮಾಡಲು ದಕ್ಷಿಣೇಶ್ವರಕ್ಕೆ ಹೋದರು. ರಾಮಕೃಷ್ಣರ ಆ ಭೇಟಿ ಅವರ ಜೀವನಕ್ಕೆ ಮಹತ್ವದ ತಿರುವನ್ನು ಕೊಟ್ಟಿತು. ಆದರೂ ನರೇಂದ್ರರು ರಾಮಕೃಷ್ಣರನ್ನು ಗುರುಗಳನ್ನಾಗಿ ಒಪ್ಪಿಕೊಳ್ಳಲಿಲ್ಲ. ರಾಮಕೃಷ್ಣರ ಆಲೋಚನೆಗಳನ್ನು ಒಪ್ಪಿಕೊಳ್ಳದಿದ್ದರೂ, ಅವರ ಮಗುವಿನಂಥ ವ್ಯಕ್ತಿತ್ವ ಅವರನ್ನು ಪದೇ ಪದೇ ದಕ್ಷಿಣೀಶ್ವರಕ್ಕೆ ಭೇಟಿ ನೀಡಲು ಪ್ರೇರೇಪಿಸಿತು.

ಮೊದಮೊದಲಿಗೆ ರಾಮಕೃಷ್ಣರ ಭಾವಪರವಶತೆಯ ಮತ್ತು ದೂರದೃಷ್ಟಿಯನ್ನು ಕೇವಲ ಕಾಲ್ಪನಿಕ ಬರಿ ಭ್ರಮೆ ಎಂದು ಭಾವಿಸಿದ್ದರು. ೧೮೮೪ ಇಸವಿಯಲ್ಲಿ ಅನಿರೀಕ್ಷಿತವಾಗಿ ನರೇಂದ್ರರ ತಂದೆಯವರು ಇಹಲೋಕ ತ್ಯಜಿಸಿದರು. ಅವರ ಮರಣಾ ನಂತರ ಕುಟುಂಬ ದಿವಾಳಿಯಾಯಿತು, ಸಾಲಗಾರರ ಬಾಧೆ ಶುರುವಾಯಿತು.ಅವರ ಕುಟುಂಬದವರು ಪೂರ್ವಜರ ಮನೆಯಿಂದ ಹೊರಗೆ ಹಾಕಿದರು.

ಅವರು ಕೆಲಸ ಹುಡುಕುವುದರಲ್ಲಿ ವಿಫಲರಾದಾಗ, ದೇವರ ಅಸ್ತಿತ್ವದ ಬಗ್ಗೆಯೇ ಸಂದೇಹಪಟ್ಟರು. ಆದರೆ ರಾಮಕೃಷ್ಣರ ಸಾನಿಧ್ಯ ಅವರಿಗೆ ಸಾಂತ್ವನ ನೀಡುತಿತ್ತು. ಒಂದು ದಿನ ನರೇಂದ್ರರು ಅವರ ಕುಟುಂಬದ ಅಭ್ಯುದಯಕ್ಕೋಸ್ಕರ ಕಾಳಿ ದೇವಿಯನ್ನು ಪ್ರಾರ್ಥಿಸುವಂತೆ ರಾಮಕೃಷ್ಣರನ್ನು ಕೇಳಿಕೊಂಡರು. ಅದಕ್ಕೆ ಅವರು ನೀನೊಬ್ಬನೇ ದೇವಸ್ಥಾನಕ್ಕೆ ಹೋಗಿ ಭಕ್ತಿಯಿಂದ ಪ್ರಾರ್ಥಿಸು ಎಂದು ಸಲಹೆ ನೀಡಿದರು. ಅವರ ಸಲಹೆಯಂತೆ ಎರಡು, ಮೂರು ಸಲ ದೇವಸ್ಥಾನಕ್ಕೆ ಹೋದರು.

ಆದರೆ ಅವರು ಯಾವುದೇ ರೀತಿಯ ಲೌಕಿಕ ಅವಶ್ಯಕತೆಗಳನ್ನು ಪೂರೈಸಲು ದೇವಸ್ಥಾನಕ್ಕೆ ಹೋಗಿ ಪ್ರಾರ್ಥಿಸುವುದರಲ್ಲಿ ವಿಫಲರಾದರು. ಆದರೆ ಪ್ರತಿ ಬಾರಿಯು ಮುಕ್ತಿಗಾಗಿ ಕೇಳಿಕೊಳ್ಳಲಷ್ಟೇ ಶಕ್ತರಾದರು. ಕೊನೆಗೆ ಅವರು ಸರ್ವಸಂಗ ಪರಿತ್ಯಾಗ ಮಾಡಿ ರಾಮಕೃಷ್ಣರನ್ನು ಗುರುಗಳನ್ನಾಗಿ ಸ್ವೀಕಾರ ಮಾಡಿದರು. ೧೮೮೫ ರಲ್ಲಿ ರಾಮಕೃಷ್ಣರು ಕಲ್ಕತ್ತಾದ ಕೊಸ್ಸಿಪುರದಲ್ಲಿ ಇರುವ ಅವರ ತೋಟದ ಮನೆಯಲ್ಲಿ ಗಂಟಲಿನ ಹುಣ್ಣಿನಿಂದ ಬಳಲುತಿದ್ದರು.

ನರೇಂದ್ರರು ತಮ್ಮ ಆಧ್ಯಾತ್ಮಿಕ ವಿಧ್ಯಾಭ್ಯಾಸವನ್ನು ಮುಂದುವರಿಸಿದರು. ಅವರು ಕೊಸ್ಸಿಪುರದಲ್ಲಿ ನಿರ್ವಿಕಲ್ಪ ಸಮಾಧಿಯನ್ನು ಅನುಭವಿಸಿದರು. ನರೇಂದ್ರ ಮತ್ತು ರಾಮಕೃಷ್ಣರ ಇತರ ಶಿಷ್ಯರು ಗುರುಗಳ ಅದೇಶದಂತೆ ಅವರಂತೆ ನಿಲುವಂಗಿ ಮತ್ತು ಕಾವಿ ತೊಟ್ಟುಕೊಂಡರು. ಜನ ಸೇವೆಯೇ ಜನಾರ್ದನನ ಸೇವೆ ಎಂದರು. ರಾಮಕೃಷ್ಣರು ನರೇಂದ್ರರನ್ನು ತಮ್ಮ ಶಿಷ್ಯವೃಂದದ ನಾಯಕರನ್ನಾಗಿ ನೇಮಿಸಿದರು. ರಾಮಕೃಷ್ಣರು ೧೮೮೬, ಆಗಸ್ಟ ೧೬ ರಂದು ನಿಧನ ಹೊಂದಿದರು.

Similar questions