ಅಭ್ಯಾಸ ಪತ್ರಿಕೆ - ೯
“ಗಣರಾಜ್ಯೋತ್ಸವವನ್ನು” ಕುರಿತು ವರದಿ ತಯಾರಿಸಿರಿ.
Answers
Explanation:
ರಾಷ್ಟ್ರೀಯ ಗಣರಾಜ್ಯೋತ್ಸವ ದಿನ
ಪ್ರತಿವರ್ಷ ಜನವರಿ 26ರಂದು ಭಾರತೀಯ ಗಣರಾಜ್ಯೋತ್ಸವವನ್ನು ದೇಶದಾದ್ಯಂತ ಸಂಭ್ರಮ ಸಡಗರದಿಂದ ಆಚರಿಸಲಾಗುತ್ತದೆ. ಭಾರತೀಯ ಸಂವಿಧಾನ ಜಾರಿಗೆ ಬಂದು ಭಾರತವು ಗಣರಾಜ್ಯವಾದದ್ದು ಜನವರಿ 26, 1950 ರಂದು. ಇದರ ಪ್ರಯುಕ್ತ ಈ ದಿನವನ್ನು ಗಣರಾಜ್ಯೋತ್ಸವವಾಗಿ ಆಚರಿಸಲಾಗುತ್ತದೆ. ಇಂದು ಭಾರತದಾದ್ಯಂತ ಸರ್ಕಾರಿ ರಜಾ ದಿನ.
ಆಗಸ್ಟ್ 15, 1947ರಂದು ಭಾರತ ಸ್ವತಂತ್ರವಾದ ನಂತರ ಆಗಸ್ಟ್ 29ರಂದು ಡಾ. ಅಂಬೇಡ್ಕರ್ ರವರ ನೇತೃತ್ವದಲ್ಲಿ ಎರಡು ಸಮಿತಿಯ ನೇಮಕಾತಿಯನ್ನು ಮಾಡಲಾಯಿತು. ಈ ಸಮಿತಿಯು ಸಂವಿಧಾನದ ಕರಡು ಪ್ರತಿಯನ್ನು ತಯಾರಿಸಿ ನವೆಂಬರ್ 4, 1947ರಂದು ಶಾಸನಸಭೆಯಲ್ಲಿ ಮಂಡಿಸಿತು. ನವೆಂಬರ್ 26,1949 ರಂದು ಅಂಗೀಕರಿಸಲ್ಪಟ್ಟು ಅನೇಕ ಪರಿಶೀಲನೆ ಮತ್ತು ತಿದ್ದುಪಡಿಗಳ ನಂತರ ಜನವರಿ 26 1950ರಂದು ಭಾರತದ ಸಂವಿಧಾನ ಜಾರಿಗೆ ಬಂದಿತು. ಭಾರತದ ಸ್ವಾತಂತ್ರ್ಯ ಚಳುವಳಿಯಲ್ಲಿ ಜನವರಿ 26, 1929 ರಂದು ಭಾರತ ರಾಷ್ಟ್ರೀಯ ಕಾಂಗ್ರೆಸ್ ಪೂರ್ಣ ಸ್ವರಾಜ್ಯದ ಧ್ಯೇಯವನ್ನು ಹಾಕಿಕೊಂಡಿತ್ತು. ಲಾಹೋರ್‌ನಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದಲ್ಲಿ ಈ ನಿರ್ಧಾರವನ್ನು ತೆಗೆದುಕೊಂಡು ಈ ದಿನವನ್ನು ಪೂರ್ಣ ಸ್ವರಾಜ್ಯ ದಿನ ಎಂದು ಘೋಷಿಸಲಾಗಿತ್ತು. ಇದೇ ಕಾರಣಕ್ಕಾಗಿಯೇ ಸ್ವಾತಂತ್ರ್ಯಾನಂತರ ಭಾರತದ ಸಂವಿಧಾನವನ್ನು ಈ ದಿನದಂದೇ ಜಾರಿಗೆ ತರಲಾಯಿತು.
ಗಣರಾಜ್ಯೋತ್ಸವ ದಿನಾಚರಣೆಯನ್ನು ಭಾರತದ ರಾಜಧಾನಿಯಾದ ದೆಹಲಿಯ ರಾಜ್‌ಪಥ್‌ನಲ್ಲಿ, ಭಾರತದ ರಾಷ್ಟ್ರಪತಿಯ ಸಮ್ಮುಖದಲ್ಲಿ ನಡೆಯುತ್ತದೆ. ಇಂದಿನ ದಿನ ಭಾರತಕ್ಕೆ ಗೌರವವನ್ನು ಸೂಚಿಸುವ ಮೆರವಣಿಗೆ ಅಲ್ಲಿ ನಡೆಯುತ್ತದೆ. ದೇಶದ ಎಲ್ಲಾ ರಾಜ್ಯಗಳಲ್ಲೂ ಗಣರಾಜ್ಯೋತ್ಸವ ಆಚರಿಸಲಾಗುತ್ತದೆ.