India Languages, asked by shettysujathashetty2, 3 months ago


ಕೆಳಗೆ ನೀಡಿರುವ ಪಟ್ಟಿಯಲ್ಲಿ ರಾಷ್ಟ್ರೀಯ/ನಾಡ ಹಬ್ಬಗಳ ಮಹತ್ವವನ್ನು ಐದು-ಆರು
ವಾಕ್ಯಗಳಲ್ಲಿ ತಿಳಿಸಿ.
೧. ಸ್ವಾತಂತ್ರ್ಯೋತ್ಸವ.
೨. ಗಣರಾಜ್ಯದಿನ.
೩. ಕನ್ನಡ ರಾಜ್ಯೋತ್ಸವ.​


shettysujathashetty2: how now this question
shettysujathashetty2: please answer this question

Answers

Answered by Anonymous
14

Answer:

ಸ್ವಾತಂತ್ರ್ಯೋತ್ಸವ

ಭಾರತದ ಸ್ವಾತಂತ್ರ್ಯ ದಿನಾಚರಣೆಯನ್ನು ಪ್ರತಿ ವರ್ಷ ಆಗಸ್ಟ್ ೧೫ ರಂದು ಆಚರಿಸಲಾಗುತ್ತದೆ. ಬ್ರಿಟೀಷರ ಆಡಳಿತದಿಂದ ಭಾರತ ದೇಶ ೧೯೪೭ ಆಗಸ್ಟ್ ೧೫ ರಂದು ಸ್ವತಂತ್ರವಾಯಿತು. ಪ್ರತಿ ವರ್ಷ ಭಾರತದಾದ್ಯಂತ ಈ ದಿನವನ್ನು ಸ್ವಾತಂತ್ರ್ಯ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ. ಈ ದಿನ ಇಡೀ ದೇಶದಲ್ಲಿ ರಾಷ್ಟ್ರೀಯ ರಜಾದಿನವನ್ನಾಗಿ ಆಚರಿಸಲಾಗುತ್ತದೆ. ದೇಶದ ಹಲವೆಡೆ |ತ್ರಿವರ್ಣ ಧ್ವಜವನ್ನು ಹಾರಿಸಿ ಸಿಹಿ ಹಂಚಲಾಗುತ್ತದೆ. ಈ ಆಚರಣೆಯ ಪ್ರಮುಖ ಸಮಾರಂಭ ದೆಹಲಿಯ ಕೆಂಪು ಕೋಟೆಯಲ್ಲಿ ನಡೆಯತ್ತದೆ. ಈ ಸಮಾರಂಭದಲ್ಲಿ, ಭಾರತದ ಪ್ರಧಾನ ಮಂತ್ರಿಗಳು ರಾಷ್ಟ್ರೀಯ ಧ್ವಜವನ್ನು ಹಾರಿಸಿ ಭಾರತದ ರಾಷ್ಟ್ರಗೀತೆ "ಜನ ಗಣ ಮನ"ವನ್ನು ಹಾಡಿ ನಂತರ ರಾಷ್ಟ್ರವನ್ನು ಉದ್ದೇಶಿಸಿ ಭಾಷಣ ಮಾಡುತ್ತಾರೆ. ಈ ಭಾಷಣದಲ್ಲಿ ದೇಶದ ಸಾಧನೆ, ದೇಶದ ಮುಂದಿರುವ ಪ್ರಮುಖ ಸವಾಲುಗಳ ಬಗ್ಗೆ ಮಾತನಾಡಿ, ಕೆಲವು ಪ್ರಗತಿ ಯೋಜನೆಗಳನ್ನು ಪ್ರಕಟಿಸಲಾಗುತ್ತದೆ. ಈ ದಿನದಂದು ದೇಶದ ಸ್ವಾತ್ರಂತ್ರ್ಯಕ್ಕೆ ಮಡಿದ ನಾಯಕರನ್ನು ಸ್ಮರಿಸಲಾಗುತ್ತದೆ

ಗಣರಾಜ್ಯೋತ್ಸವ

ಭಾರತೀಯ ಗಣರಾಜ್ಯೋತ್ಸವ ಪ್ರತಿ ವರ್ಷದ ಜನವರಿ 26 ರಂದು ಆಚರಿಸಲಾಗುವ ದಿನಾಚರಣೆ. ಭಾರತೀಯ ಸoವಿಧಾನ ಜಾರಿಗೆ ಬಂದು ಭಾರತವು ಗಣರಾಜ್ಯವಾದದ್ದು ಜನವರಿ 26, 1950 ರಂದು. ಇದರ ಪ್ರಯುಕ್ತ ಈ ದಿನವನ್ನು ಗಣರಾಜ್ಯೋತ್ಸವವಾಗಿ ಆಚರಿಸಲಾಗುತ್ತದೆ. ಜನವರಿ ೨೬ ಭಾರತದಾದ್ಯಂತ ಸರ್ಕಾರಿ ರಜಾ ದಿನ. ಸಾಮಾನ್ಯವಾಗಿ ಪ್ರಾಥಮಿಕ, ಪ್ರೌಢ ಶಾಲೆಗಳಲ್ಲಿ ಇದರ ಪ್ರಯುಕ್ತ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವುದುಂಟು. ಇದಲ್ಲದೆ ನವದೆಹಲಿಯಲ್ಲಿ ಭಾರತ ಸಶಸ್ತ್ರ ಪಡೆಗಳ ಪ್ರಭಾತಭೇರಿ ನಡೆಯುತ್ತದೆ.ಮತ್ತು ದೇಶದೆಲ್ಲೆಡೆ ಜನರು ಹೆಮ್ಮೆಯ ಜೊತೆಗೆ ಈ ದಿನವನ್ನು ಆಚರಿಸಲಾಗುತ್ತದೆ

ಕನ್ನಡ ರಾಜ್ಯೋತ್ಸವ

ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) ೧೯೫೬ರ ನವೆಂಬರ್ ೧ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ.[೩] ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ. ರಾಜ್ಯೋತ್ಸವ ದಿನವನ್ನು ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ರಜಾದಿನವೆಂದು ಪಟ್ಟಿ ಮಾಡಲಾಗಿದೆ ಮತ್ತು ವಿಶ್ವದಾದ್ಯಂತ ಕನ್ನಡಿಗರು ಇದನ್ನು ಆಚರಿಸುತ್ತಾರೆ. ಕರ್ನಾಟಕ ಸರ್ಕಾರದಿಂದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ

thanks..

Similar questions