ಕೊರಳ ಸರೆ ಹಿಗ್ಗಿದವು ದೃಗುಜಲ
ಉರವಣಸಿ ಕಡು ನೊಂದನಕಟಾ
ಕುರುಪತಿಗೆ ಕೇಡಾದುದೆಂದನು ತನ್ನ ಮನದೊಳಗೆ
ಹರಿಯ ಹಗೆ ಹೊಗೆದೋರದುರುಹದೆ
ಬರಿದೆ ಹೋಹುದೆ ತನ್ನ ವಂಶವ ನರುಹಿ ಕೊಂದನು ಹಲವು ಮಾತೇನೆಂದು ಚಿಂತಿಸಿದ ಪ್ರಸ್ತಾರ ಹಾಕುದು
Answers
Answered by
0
Explanation:
ಕರ್ಣನ ಕೊರಳ ನರಗಳು ಹಿಗ್ಗಿದವು (ಗದ್ಗದ) ಕಣ್ಣಿರು ಧಾರೆಯಾಗಿ ಸುರಿಯಿತು. ಅವನು ಬಹಳವಾಗಿ ನೊಂದು ''ಅಯ್ಯೋ! ಕುರುಪತಿಗೆ ಕೇಡಾಯಿತು'' ಎಂದು ತನ್ನ ಮನದೊಳಗೆ ಅಂದುಕೊಂಡು ''ಕೃಷ್ಣನ ದ್ವೇಷದ ಬೆಂಕಿ ಹೊಗೆಯಾಡಿದ ಮೇಲೆ ಅದು ಪೂರ್ತಿಯಾಗಿ ಸುಡದೆ ಹಾಗೇ ಬಿಡುವುದೇ? ಬರಿದೆ ನನ್ನ ಜನ್ಮವೃತ್ತಾಂತವನ್ನು ಹೇಳಿ ಕೊಂದನು. ಹೆಚ್ಚು ಮಾತೇನು?'' ಎಂದು ಚಿಂತಿಸಿದನು .
Similar questions