Art, asked by ravikumars26061975, 3 months ago

ಡಿವಿಜಿಯವರ ವ್ಯಕ್ತಿತ್ವವನ್ನು ವಿವರಿಸಿ​

Answers

Answered by basavaraj5392
1

Answer:

ಅವರ ಈ ಮಾತುಗಳು: ‘ರಾಜದಂಡ ಹುಟ್ಟಿದ್ದು ಮನುಷ್ಯನಿಗೆ ಮನುಷ್ಯನ ವಿಷಯದಲ್ಲಿರುವ ಹೆದರಿಕೆಯಿಂದ. ರಾಜ್ಯನಿಬಂಧನೆಯಾದದ್ದೂ ಮನುಷ್ಯನಿಗೆ ಮನುಷ್ಯನಲ್ಲಿರುವ ಅಪನಂಬಿಕೆಯಿಂದ. ಮನುಷ್ಯರು ಅನ್ಯೋನ್ಯ ಸಹವಾಸದಲ್ಲಿರಬೇಕಾಗಿಬಂದ ಮೇಲೆ, ಒಬ್ಬನನ್ನೊಬ್ಬನು ನಂಬದಿದ್ದರೆ ಬದುಕು ಸಾಗದು; ಪೂರ್ತಿ ನಂಬುವುದೆಂದರೆ ವಂಚನೆಯ ಶಂಕೆ.

ಹೀಗೆ ನಂಬಿಕೆ–ಅಪನಂಬಿಕೆಗಳ ಬೆರಕೆಯೇ ರಾಜ್ಯಸಂಬಂಧಗಳ ಒಳತಿರುಳು... ಸಾರ್ವಜನಿಕ ಕಾರ್ಯಕ್ಕೆಂದು ಮುಂದೆ ಬರುವವರ ಮನಸ್ಸುಗಳಲ್ಲಿ ಪ್ರತ್ಯಕ್ಷವಾಗಲ್ಲದಿದ್ದರೆ ಪರೋಕ್ಷವಾಗಿಯಾದರೂ, ಸಮೀಪದಲ್ಲಿ ಅಲ್ಲದಿದ್ದರೆ ದೂರವಾಗಿಯಾದರೂ, ಸ್ವಪ್ರಯೋಜನದ ನಿರೀಕ್ಷೆ ಅಷ್ಟೋ ಇಷ್ಟೋ ಇರುವುದು ಅಸ್ವಾಭಾವಿಕವಲ್ಲ. ಆದರೆ ಎಲ್ಲಿ ಅವರು ನೂರಕ್ಕೆ ನೂರು ಮಂದಿಯೂ ಅಂಥವರೇ ಆಗಿದ್ದಾರೆಯೋ ಆ ದೇಶ ತೀರ ಬಡದೇಶವೆನ್ನಬೇಕು.

ಸ್ವಾಭಾವಿಕವಾದ ಆಶಾಪ್ರವೃತ್ತಿಯ ಮಟ್ಟದಿಂದ ಮೇಲೇರಿ ನಡೆಯಬಲ್ಲವನು ದೇಶದ ನೂರರಲ್ಲಿ ಹತ್ತು ಮಂದಿಯಾದರೂ ಎಲ್ಲಿ ದೊರೆಯುತ್ತಾರೆಯೋ ಅದೇ ಪ್ರಜಾರಾಜ್ಯವನ್ನು ಅನರ್ಥದಿಂದ ಉಳಿಸಿಕೊಳ್ಳಬಲ್ಲ ದೇಶ’.

ರಾಜಕೀಯ ಒಂದು ಉದ್ಯಮವಾಗಿ ಪರಿವರ್ತನೆಯಾಗುವುದರ ಅಪಾಯದ ಬಗ್ಗೆಯೂ ಡಿವಿಜಿ ಎಚ್ಚರಿಸಿದ್ದರು. ‘ಅನ್ನ ವಸ್ತು ಸಂಪಾದನೆಗಾಗಿ ಬೇರೆ ವೃತ್ತಿಯನ್ನಿರಿಸಿಕೊಂಡು, ಕೇವಲ ಸಾರ್ವಜನಿಕ ಹಿತದೃಷ್ಟಿಯಿಂದ ರಾಜಕೀಯಕ್ಕೆ ಕೈ ಹಚ್ಚುವವರೆಲ್ಲ ನಿಷ್ಪಾಕ್ಷಿತ ರಾಜ್ಯಸ್ಥರೇ. ಅಂಥವರ ಸ್ವತಂತ್ರ ಪೋಷಣೆಯಿಂದ ಬೆಳೆಯಬೇಕಾದದ್ದು ನಮ್ಮ ರಾಜಕೀಯ’ ಎಂದು ಆಶಿಸಿದರು

ಜೀವನದಲ್ಲಿ ತೊಂದರೆಗಳಿದ್ದರೂ ಅವರಲ್ಲಿ ಹಾಸ್ಯ ಪ್ರವೃತ್ತಿಯೂ ಇತ್ತು. ವ್ಯಾಕರಣಕಲಿಯಲು ಗರಣಿಕೃಷ್ಣಾಚಾರ್ಯರಲ್ಲಿ ಹೋದಾಗ ಅವರಿಗೆ ಶಬ್ದಶಾಸ್ತ್ರ ಒಲಿಯದೆ ಸೂಪಶಾಸ್ತ್ರದಲ್ಲಿ ಪರಿಣತಿ ಪಡೆದುದಾಗಿ ಒಂದು ಹಾಸ್ಯ ಭರಿತ ಸಂಸ್ಕೃತ ಶ್ಲೋಕದಲ್ಲಿ ಹೇಳುತ್ತಾರೆ:

ನ ವೇದಾಂತೇ ಗಾಢಾ ನಚ ಪರಿಚಿತಂ ಶಬ್ದಶಾಸ್ತ್ರಂ|

ನ ವಾ ತರ್ಕೇ ವೇದೇ ನ ಚ ಸರಸತಾ ಕಾವ್ಯನಿಹವೇ|

ವಯಂ ಶ್ರೀಮದ್ಬ್ಯಾಳೀಹುಳಿ ಪಳದ್ಯ ಕೊಸುಂಂಬ್ರಿತೊವ್ವೀ|

ಹಯಗ್ರೀವಾಂಬೋಡೀ ಕರಿಗಡಬು ದಧ್ಯನ್ನ ರಸಿಕಾಃ||

ಅರ್ಥ: ನಾವು ವೇದಂತದಲ್ಲಿ ನುರಿತವರಲ್ಲ, ವ್ಯಾಕರಣವನ್ನೂ ಅರಿತವರಲ್ಲ, ತರ್ಕವೇದಗಳನ್ನೂ ತಿಳಿದವರಲ್ಲ, ಸಾಹಿತ್ಯದಲ್ಲಿ ಸರಸತೆಇಲ್ಲ, ಆದರೆ ಕೇವಲ ಶ್ರೀಮದ್ ಬೇಳೇಹುಳಿ,ಪಳದ್ಯ, ಕೋಸಂಬರಿ, ತೊವ್ವೆ,ಹಯಗ್ರೀವ, ಅಂಬೊಡೆ, ಕರಿಗಡಬು ಮತ್ತು ಮೊಸರನ್ನದಲ್ಲಿ ರಸಿಕರು

I HOPE YOU SATISFIED WITH MY ANSWER.

PLEASE MARK AS BRAINLIEST.

Answered by Sivangi482901
1

ನಾಯಿಗಳಲ್ಲಿ ಹಲವಾರು ಸಂಭಾವ್ಯ ವ್ಯಕ್ತಿತ್ವ ಲಕ್ಷಣಗಳನ್ನು ಗುರುತಿಸಲಾಗಿದೆ, ಉದಾಹರಣೆಗೆ "ತಮಾಷೆ", "ಕುತೂಹಲ / ನಿರ್ಭಯತೆ," ಚೇಸ್-ಉಚ್ಚಾರಣೆ "," ಸಾಮಾಜಿಕತೆ ಮತ್ತು ಆಕ್ರಮಣಶೀಲತೆ "ಮತ್ತು" ಸಂಕೋಚ-ಧೈರ್ಯ "ಆಕ್ರಮಣಶೀಲತೆ.

Similar questions