, ನಿಮ್ಮ ಊರಿನಲ್ಲಿ ಬೀದಿ ನಾಯಿಗಳಿಂದ ಸಮಸ್ಯೆಯಿಂದ ಆದ ತೊಂದರೆಯನ್ನು ಕುರಿತು ವರದಿ ಬರೆಯಿರಿ .
Answers
Answered by
5
Explanation:
ಗಲ್ಲಿ ಗಲ್ಲಿಗಳಲ್ಲಿ ತಿರುಗಾಡುತ್ತಿರುವ ಬೀದಿ ನಾಯಿಗಳ ಹಿಂಡು ವಾಹನ ಸವಾರರ ಮೇಲೆ ದಾಳಿ ಮಾಡುತ್ತವೆ. ಕೆಲ ನಾಯಿಗಳು ಬೈಕ್, ಕಾರುಗಳ ಹಿಂದೆ ಓಡಿ ಬರುತ್ತಿರುವ ಪರಿಣಾಮ ವಾಹನ ಸವಾರರು ಆತಂಕ ಪಡಬೇಕಾಗಿದೆ. ರಸ್ತೆಯಲ್ಲಿ ಚಿಕ್ಕ ಮಕ್ಕಳು, ವಯೋವೃದ್ಧರು ಸಂಚಾರ ಮಾಡಲು ಹಿಂದೇಟು ಹಾಕುವಂತಾಗಿದೆ. ರಾತ್ರಿ ವೇಳೆ ವಾರ್ಡ್, ಕಾಲೊನಿ ನಿವಾಸಿಗಳ ನಿದ್ದೆಗೆಡಿಸುತ್ತಿರುವ ಬಿಡಾಡಿ ನಾಯಿಗಳು ಉಪಟಳ ಹೆಚ್ಚಾಗಿದೆ.
ಹಿಡಿಶಾಪ: ಬೀದಿ ನಾಯಿಗಳ ಹಾವಳಿ ತಪ್ಪಿಸುವಂತೆ ಪುರಸಭೆಗೆ ಸ್ಥಳೀಯರು ಮನವಿ ಸಲ್ಲಿಸಿದ್ದಾರೆ. ಆದರೆ, ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದ ಪರಿಣಾಮ ಸಾರ್ವಜನರು ಪುರಸಭೆಗೆ ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದಾರೆ
Similar questions