ಡಾ. ಬೆಸಗರಹಳ್ಳಿ ರಾಮಣ್ಣ ಅವರ ಕಿರುಪರಿಚಯ ಬರೆಯಿರಿ.
Answers
Question:
ಡಾ. ಬೆಸಗರಹಳ್ಳಿ ರಾಮಣ್ಣ ಅವರ ಕಿರುಪರಿಚಯ ಬರೆಯಿರಿ.
Answer:
ಡಾ. ಬೆಸಗರಹಳ್ಳಿ ರಾಮಣ್ಣ ಇವರು ೧೯೩೮ ಮೇ ೧೮ರಂದು ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಬೆಸಗರಹಳ್ಳಿಯಲ್ಲಿ ಜನಿಸಿದರು. ಇವರ ತಾಯಿ ದೊಡ್ಡತಾಯಮ್ಮ ತಂದೆ ಚಿಕ್ಕಎಲ್ಲೇಗೌಡ.
ಬಾಲ್ಯ ಜೀವನ:
ತಮ್ಮಲ್ಲಿದ್ದ ಪ್ರತಿಭೆ, ಶಕ್ತಿ, ಚೈತನ್ಯಗಳನ್ನು ಗ್ರಾಮೀಣ ಸಮುದಾಯದ ನೋವು, ನಲಿವು , ಶೋಷಣೆಗೆ, ಅಜ್ಞಾನಕ್ಕೆ ಸ್ಪಂದಿಸುತ್ತಲೇ ಇದ್ದು, ಒಂದೆಡೆ ಸಮುದಾಯದ ದೇಹರೋಗ್ಯ, ಸ್ವಾಸ್ಥ್ಯದ ಕಡೆಗೆ ಗಮನಹರಿಸಿದರೆ ಮತ್ತೊಂದೆಡೆ ಪ್ರವೃತ್ತಿಯಿಂದ ಲೇಖಕರಾಗಿ ಮಾನಸಿಕ ಸ್ವಾಸ್ಥ್ಯವನ್ನು ಕಾಪಾಡುವ ಕಡೆಗೂ ಗಮನ ಹರಿಸಿ, ಗ್ರಾಮೀಣ ಬದುಕಿನ ನೈಜ ಚಿತ್ರಣವನ್ನೂ ತಮ್ಮ ಕಥೆಗಳ ಮೂಲಕ ಹೇಳುತ್ತಲೇ ಬಂದ ವೈದ್ಯರಾದ ಬೆಸಗರಹಳ್ಳಿಯ ರಾಮಣ್ಣನವರು ಹುಟ್ಟಿದ್ದು ೧೯೩೮ ರ ಆಗಸ್ಟ್ ತಿಂಗಳ ಸ್ವಾತಂತ್ರ್ಯ ದಿನಾಚರಣೆಯಂದು ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಬೆಸಗರ ಹಳ್ಳಿಯಲ್ಲಿ, ತಂದೆ ಕೃಷಿಕರಾದ ಎಲ್ಲೇಗೌಡ, ತಾಯಿ ದೊಡ್ಡತಾಯಮ್ಮ. ಪ್ರಾರಂಭಿಕ ಶಿಕ್ಷಣ ಬೆಸಗರಹಳ್ಳಿ ಮತ್ತು ಮದ್ದೂರಿನಲ್ಲಿ. ಇಂಟರ್ಮೀಡಿಯೇಟ್ ನಂತರ ಎಂ.ಬಿ.ಬಿ.ಎಸ್. ಪದವಿ ಪಡೆದದ್ದು ಮೈಸೂರಿನಲ್ಲಿ. ನಂತರ ಅರಿವಳಿಕೆ ಶಾಸ್ತ್ರದಲ್ಲಿ ಪಡೆದ ಡಿಪ್ಲೊಮ. ಅಮೆರಿಕ ಮುಂತಾದ ವಿದೇಶಗಳಿಂದ ಉದ್ಯೋಗಕ್ಕೆ ಆಹ್ವಾನ ಬಂದರೂ ಆಯ್ದುಕೊಂಡದ್ದು ಹಳ್ಳಿಯ ವೈದ್ಯಕೀಯ ಸೇವೆಯ ಬದುಕು. ಗ್ರಾಮೀಣ ಪ್ರದೇಶದಲ್ಲಿ ಸುಮಾರು ೨೦ ವರ್ಷಗಳ ಕಾಲ ವೈದ್ಯರಾಗಿ ಕಾರ್ಯನಿರತರಾಗಿದ್ದರು. ಸರಕಾರಿ ವೈದ್ಯರಾಗಿ ನೇಮಕಗೊಂಡು ಕೊಡಿಯಾಲ, ಬೆಳ್ಳೂರು, ಮೇಲುಕೋಟೆ, ಶ್ರೀರಂಗಪಟ್ಟಣ, ಹಳೇಬೀಡು ಮುಂತಾದ ಗ್ರಾಮಾಂತರ ಪ್ರದೇಶದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸೇವೆಸಲ್ಲಿಸಿ ೧೯೯೬ ರಲ್ಲಿ ನಿವೃತ್ತಿ ಹೊಂದಿದರು.ತಮ್ಮ ಹೆಸರಿನೊಡನೆ ಬೆಸಗರಹಳ್ಳಿ ಎಂಬೊಂದು ಭಾಗವನ್ನು ಅವರು ಸೇರಿಸಿಕೊಂಡಿದ್ದರು. ಹೀಗೆ ತಮ್ಮ ಊರಿನ ಹೆಸರನ್ನು ನಿಜ ಹೆಸರಿನ ಹಿಂದೆ ಇಲ್ಲವೆ ಮುಂದೆ ಸೇರಿಸಿಕೊಳ್ಳುತ್ತಿದ್ದ ತಲೆಮಾರಿಗೆ ರಾಮಣ್ಣ ಸೇರಿದ್ದವರು. ಶಾಲೆಗಳಲ್ಲಿ ಒಂದು ಇಂಗ್ಲಿಷ್ ಅಕ್ಷರವಾಗುತ್ತಿದ್ದ ಊರಿನ ಹೆಸರು, ಇಡಿಯಾಗಿ ತಮ್ಮ ಹೆಸರಿನ ಭಾಗವೇ ಆಗಬೇಕೆಂದು ಬಯಸಿದ್ದು ಕೇವಲ ಹೊಸತನಕ್ಕಾಗಿ ಮಾತ್ರ ಇರಲಾರದು. ಆ ಮೂಲಕ ಒಂದು ದೃಷ್ಟಿಕೋನವನ್ನು ತಮ್ಮದನ್ನಾಗಿಸಿಕೊಳ್ಳಲು ಯತ್ನಿಸಿದಂತೆ ತೋರುತ್ತದೆ. ರಾಮಣ್ಣನವರ ಜೊತೆಗಿನ ಬೆಸಗರಹಳ್ಳಿ ಅವರ ಕತೆಯ ಜಗತ್ತಿನಲ್ಲಿ ಆವರಣವಾಗಿ, ನುಡಿಗಟ್ಟಾಗಿ ಇಲ್ಲವೇ ನಿಲುವಾಗಿ ಸದಾ ನೆಲೆನಿಂತುಬಿಟ್ಟಿದೆ.
ಕಥಾ ಸಂಕಲನಗಳು
- ನೆಲದ ಒಡಲು,
- ‘ಗರ್ಜನೆ’, ‘
- ಹರಕೆಯ ಹಣ’,
- ‘ಒಂದು ಹುಡುಗನಿಗೆ ಬಿದ್ದ ಕನಸು’,
- ‘ನೆಲದ ಸಿರಿ’.
- ‘ಕನ್ನಂಬಾಡಿ’ ಎಂಬ ಸಮಗ್ರ ಕಥಾಸಂಕಲನವಲ್ಲದೆ ನಂತರ ಬರೆದ ೧೮ ಕಥೆಗಳ ಸಂಕಲನ ‘ಕೊಳಲು ಮತ್ತು
- ಖಡ್ಗ’ ಕಥಾಸಂಕಲನಗಳವೂ ಪ್ರಕಟವಾಗಿವೆ.
ಕಾದಂಬರಿಗಳು :
ರಕ್ತಕಣ್ಣೀರುು ಮತ್ತು ‘ತೋಳಗಳ ನಡುವೆ’ ಇವರು ಬರೆದ ಎರಡು ಕಾದಂಬರಿಗಳಾದರೆ ‘ಶೋಕಚಕ್ರ’ ಕವನ ಸಂಕಲನ. ಕಲ್ಲೇಶಿವೋತ್ತಮರಾವ್‌ರವರು ಜನ ಪ್ರಗತಿಯ ಸಂಪಾದಕರಾಗಿದ್ದ ಸಂದರ್ಭದಲ್ಲಿ ‘ರಕ್ತಕಣ್ಣೀರು’ ಕಾದಂಬರಿಯನ್ನೂ ಧಾರಾವಾಹಿಯಾಗಿ ಪ್ರಕಟಿಸಿದರು. ಎರಡು ಬಾರಿ ಕರ್ನಾಟಕ ಸಾಹಿತ್ಯ ಅಕಾಡಮಿಯ ಸದಸ್ಯರಾಗಿದಷ್ಟೇ ಅಲ್ಲದೆ ಕೇಂದ್ರ ಸಾಹಿತ್ಯ ಅಕಾಡಮಿಯ ಕನ್ನಡ ವಿಭಾಗದ ಸದಸ್ಯರಾಗಿಯೂ ಆಯ್ಕೆಯಾಗಿದ್ದರು.
ಪ್ರಶಸ್ತಿ:
ಇವರು ಬರೆದ ‘ಜಾಡಮಾಲಿ’ ಮತ್ತು ‘ನೂರುರೂಪಾಯಿ ನೋಟು’ ಕಥೆಗಳು ಜ್ಞಾನಪೀಠ ಪ್ರಶಸ್ತಿ ಸಮಿತಿಯ ಆಯ್ಕೆಮಾಡಿ ಪ್ರಕಟಿಸುವ ‘ಭಾರತೀಯ ಕಹಾನಿಯಾ’ ಸಂಕಲನದಲ್ಲಿ ಸ್ಥಾನ ಪಡೆದಿವೆ. ರಾಮಣ್ಣನವರ ಆಯ್ದ ಕಥಾಸಂಕಲನವನ್ನೂ ಬೆಂಗಳೂರು ವಿಶ್ವವಿದ್ಯಾಲಯದ ಪದವಿ ತರಗತಿಗಳಿಗೆ ಪಠ್ಯವಾಗಿಯೂ ಆಯ್ಕೆಮಾಡಲಾಗಿತ್ತು. ೧೯೬೮ ಮತ್ತು ೭೨ ರಲ್ಲಿ ಕರ್ನಾಟಕ ಸಾಹಿತ್ಯ ಅಕಾಡಮಿಯ ಕಥಾ ಸಾಹಿತ್ಯ ವಿಭಾಗದ ಬಹುಮಾನಗಳು, ‘ಒಂದು ಹುಡುಗನಿಗೆ ಬಿದ್ದ ಕನಸು’ ಕಥಾ ಸಂಕಲನಕ್ಕೆ ವರ್ಧಮಾನ ಉದಯೋನ್ಮುಖ ಪ್ರಶಸ್ತಿಯಲ್ಲದೆ ೧೯೯೦ ರಲ್ಲಿ ಕರ್ನಾಟಕ ಸಾಹಿತ್ಯ ಅಕಾಡಮಿಯ ಗೌರವ ಪ್ರಶಸ್ತಿಯು ದೊರೆತಿದೆ.