India Languages, asked by navaneethap06, 2 months ago

ದುಡಿಮೆಯೇ ದುಡ್ಡೆನ ತಾಯಿ​

Answers

Answered by Anonymous
1

Answer:

ಪೀಠಿಕೆ :

ಗಾದೆಗಳು ವೇದಗಳಿಗೆ ಸಮ, ಗಾದೆಗಳು ಹಿರಿಯರ ಅನುಭವದ ನುಡಿಮುತ್ತುಗಳಾಗಿವೆ. ಇದು ಒಂದು ಜನಪ್ರಿಯ ಗಾದೆ ಮಾತಾಗಿದ್ದು, ದುಡಿಮೆ ಅಥವಾ ದೈಹಿಕ ಶ್ರಮ ಹಾಗೂ ಅದರ ಮಹತ್ತ್ವವೇನು ಎಂಬುದನ್ನು ತಿಳಿಸುತ್ತದೆ.

ಪ್ರತಿಯೊಬ್ಬರೂ ಕಷ್ಟಪಟ್ಟು ದುಡಿದರೆ ಸುಖವಾದ ಜೀವನವನ್ನು ನಡೆಸಬಹುದು. ರೈತ ಕಷ್ಟಪಟ್ಟು ಹೊಲದಲ್ಲಿ, ತೋಟದಲ್ಲಿ ದುಡಿದರೆ ಉತ್ತಮವಾದ ಬೆಳೆಯನ್ನು ಬೆಳೆಯಬಹುದು. ಹಾಗೆಯೇ ವಿದ್ಯಾರ್ಥಿಗಳು ಕಷ್ಟಪಟ್ಟು ವ್ಯಾಸಂಗ ಮಾಡಿದರೆ ಉತ್ತಮವಾದ ಭವಿಷ್ಯವನ್ನು ಕಂಡುಕೊಳ್ಳಬಹುದು. ಇದಕ್ಕೆ ಸಂಬಂಧಿಸಿದಂತೆಹನ್ನೆರಡನೆಯ ಶತಮಾನದಲ್ಲಿಯೇ ಶಿವಶರಣರು ಕಾಯಕದ ಮಹತ್ತ್ವವನ್ನು ಸಾರಿದರು.ಕಾಯಕ ಎಂದರೆ ಪ್ರತಿಯೊಬ್ಬ ವ್ಯಕ್ತಿಯು ಏನಾದರೊಂದು ದೈಹಿಕ ಶ್ರಮದ ಮೂಲಕ ಸಂಪಾದನೆ ಮಾಡಿ ಜೀವನ ನಡೆಸಬೇಕು' ಸೋಮಾರಿಯಾಗಿ ಕಾಲ ಕಳೆಯದೆ ಕಷ್ಟಪಟ್ಟು ದುಡಿದು ಬದುಕುವುದರಿಂದ ಹಣ ಸಂಪಾದನೆ ಸಾಧ್ಯ. “ಕೂತು ಉಣ್ಣುವವನಿಗೆ ಕುಡಿಕೆ ಹೊನ್ನೂ ಸಾಲದು' ಎಂಬಂತೆ ಇರುವ ಆಸ್ತಿ ಕರಗಿದ ಮೇಲೆ ಕಷ್ಟಪಡಬೇಕಾಗುತ್ತದೆ.ಆದ್ದರಿಂದ ಕಷ್ಟಪಟ್ಟರೆ ಸುಖವಿದೆ ಎಂಬುದು ಈ ಗಾದೆಯ ಆಶಯವಾಗಿದೆ

Similar questions