ಜಲಯನ್ ವಾಲಭಾಗ್ ನಲ್ಲಿರುವ ಒಕ್ಕಣೆ ಏನು ಹೇಳುತ್ತದೆ?
Answers
Answer:
Hello guru nanu kannadiga
Explanation:
ಪುಟ ೧೬೯
ಪಠ್ಯಪೂರಕ ಅಧ್ಯಯನ ೩
ಭಗತ್ ಸಿಂಗ್
ಲೇಖಕರು: ಡಾಕ್ಟರ್ ಜಿ. ರಾಮಕೃಷ್ಣ
ಪಠ್ಯಚೌಕ ಪ್ರಾರಂಭ
ಪ್ರವೇಶ: ಭಾರತ ಸ್ವತಂತ್ರಗೊಂಡು ಸ್ವಾತಂತ್ರ್ಯದ ಸವಿಯನ್ನು ನಾವಿಂದು ಅನುಭವಿಸುತ್ತಿದ್ದೇವೆ. ಆದರೆ ಆ ಸ್ವಾತಂತ್ರ್ಯಕ್ಕೋಸ್ಕರ ಹೋರಾಡಿ ಮಡಿದವರು ಅಸಂಖ್ಯಾತ ದೇಶಭಕ್ತರು. ಸ್ವಾತಂತ್ರ್ಯ, ತ್ಯಾಗ ಬಲಿದಾನದ ಫಲ. ವೀರ ಸ್ವಾತಂತ್ರ್ಯಯೋಧರ ಬಲಿದಾನವನ್ನು ಸ್ಮರಿಸುವುದು ಭಾರತೀಯರೆಲ್ಲರ ಜವಾಬ್ದಾರಿ.
ಪಠ್ಯಚೌಕ ಮುಕ್ತಾಯ
ಹನ್ನೆರಡು ವರ್ಷದ ಒಬ್ಬ ಬಾಲಕ ಅಮೃತಸರದ ಜಲಿಯನ್ ವಾಲಾಬಾಗ್‍ನಲ್ಲಿ ಮೂಕನಂತೆ ಅತ್ತಿಂದಿತ್ತ ಓಡಾಡುತ್ತಿದ್ದ. ಶಾಲೆಗೆ ಹೋಗಬೇಕಾಗಿದ್ದ ಆ ಬಾಲಕ ಅಂದು ತನ್ನ ಹಳ್ಳಿಯಿಂದ ರೈಲಿನಲ್ಲಿ ಅಮೃತಸರದಲ್ಲಿ ಬಂದಿಳಿದಿದ್ದ. ಒಂದೆರೆಡು ಪುಸ್ತಕಗಳು ಹಾಗೂ ಒಂದು ಪುಟ್ಟ ಡಬ್ಬಿಯಿದ್ದ ಕೈಚೀಲ ಅವನ ಬಳಿಯೇ ಇತ್ತು. ತುಸು ಹೊತ್ತಿನ ನಂತರ ಹುಡುಗ ಜಲಿಯನ್ ವಾಲಾಭಾಗ್‍ನಲ್ಲಿ ಒಂದೆಡೆ ಅಂತರ್ಮುಖಿಯಾಗಿ ಬಹುಕಾಲ ನಿಂತ. ನಂತರ ಅಲ್ಲಿದ್ದ ಸ್ವಲ್ಪ ಮಣ್ಣನ್ನು ತೆಗೆದುಕೊಂಡು ಹಣೆಗಿಟ್ಟುಕೊಂಡ. ಇನ್ನಷ್ಟನ್ನು ತನ್ನಲ್ಲಿದ್ದ ಡಬ್ಬಿಯಲ್ಲಿ ಶೇಖರಿಸಿಕೊಂಡು ಹಿಂತಿರುಗಿದ. ರಾತ್ರಿ ಮನೆಗೆ ಹಿಂತಿರುಗಿದಾಗ ಅವನ ಸಹೋದರಿ ಎಂದಿನಂತೆ ಅವನನ್ನು ಊಟಕ್ಕೆಬ್ಬಿಸಿದರೆ ಒಲ್ಲೆನೆಂದು ಮುಖ ತಿರುಗಿಸಿದ. ಅವನಿಗೆ ಪ್ರಿಯವಾದ ಮಾವಿನ ಹಣ್ಣೊಂದನ್ನು ಕೂಡ ನಿರಾಕರಿಸಿ, ಅವಳನ್ನು ಮನೆಯ ಹಿಂಭಾಗಕ್ಕೆ ಕರೆದೊಯ್ದು, ತನ್ನ ಡಬ್ಬಿಯಲ್ಲಿದ್ದ ಮಣ್ಣನ್ನು ತೋರಿಸಿದ. ರಕ್ತದಲ್ಲಿ ಕಲೆಸಿದಂತಿದ್ದ ಆ ಮಣ್ಣು ಎಲ್ಲಿಯದೆಂದು ತಿಳಿದಾಗ ಅವನ ಉಪವಾಸಕ್ಕೆ ಕಾರಣ ಅವಳಿಗೆ ಗೊತ್ತಾಯಿತು. ‘ತ್ಯಾಗದ ಪ್ರತೀಕ ಆ ಮಣ್ಣು’ ಎಂದವಳಿಗೆ ತಿಳಿಯ ಹೇಳಿದ.
ಜಲಿಯನ್ ವಾಲಭಾಗ್ ನಲ್ಲಿರುವ ಒಕ್ಕಣೆ "ಏಪ್ರಿಲ್ ೧೩ ,೧೯೧೯ ರಂದು ಬ್ರಿಟಿಷರ ಗುಂಡುಗಳಿಗೆ ಆಹುತಿಯಾದ ಸುಮಾರು ಎರಡು ಸಾವಿರ ಮುಗ್ಧ ಹಿಂದೂ, ಸಿಖ್ ಹಾಗೂ ಮುಸಲ್ಮಾನರ ಸಮ್ಮಿಳಿತ ರಕ್ತದಿಂದ ಈ ಪ್ರದೇಶ ಪಾವನವಾಗಿದೆ" ಎಂದು ಬರೆಯಲಾಗಿದೆ.
ನಿಮಗೆ ಈ ಉತ್ತರ ಸಹಾಯ ಮಾಡಿದೆ
ಎಂದುಕೊಳ್ಳುತ್ತೇನೆ. ✔️