ಭಾರತದ ರಾಷ್ಟ್ರೀಯ ಗಣಿತ ದಿನಾಚರಣೆ ಯಾವ ದಿನದಂದು ಆಚರಿಸುತ್ತಾರೆ
Answers
Answered by
10
ಇಂದು ರಾಷ್ಟ್ರೀಯ ಗಣಿತ ದಿನ. ಭಾರತೀಯ ಗಣಿತಜ್ಞ ಶ್ರೀನಿವಾಸ ರಾಮಾನುಜನ್ ಅವರ ಜನ್ಮ ದಿನಾಚರಣೆ. ಗಣಿತ ಕ್ಷೇತ್ರಕ್ಕೆ ಅವರ ಕೊಡುಗೆಗಳನ್ನು ಗುರುತಿಸಿ ಪ್ರತೀ ವರ್ಷ ಡಿ. 22ರಂದು “ರಾಷ್ಟ್ರೀಯ ಗಣಿತ ದಿನ’ವನ್ನು ಆಚರಿಸಲಾಗುತ್ತದೆ. ಪ್ರಾಚೀನ ಕಾಲದಿಂದಲೂ ಆರ್ಯಭಟ, ಬ್ರಹ್ಮಗುಪ್ತ, ಮಹಾವೀರ ಸಹಿತ ವಿವಿಧ ವಿದ್ವಾಂಸರು ಗಣಿತ ಶಾಸ್ತ್ರಕ್ಕೆ ಮಹತ್ವದ ಕೊಡುಗೆಗಳನ್ನು ನೀಡಿದ್ದಾರೆ. ಆದರೆ ಶ್ರೀನಿವಾಸ ರಾಮಾನುಜನ್ ಅವರು ಚಿಕ್ಕ ವಯಸ್ಸಿನಲ್ಲಿಯೇ ಚಿಹ್ನೆ ಮತ್ತು ಭಿನ್ನರಾಶಿಗಳಿಗೆ ಸಂಬಂಧಿಸಿದಂತೆ ಕೆಲವು ಕೊಡುಗೆ ನೀಡಿದ್ದು, ಅನಂತ ಸರಣಿ, ಸಂಖ್ಯೆ ಸಿದ್ಧಾಂತ, ಗಣಿತ ವಿಶ್ಲೇಷಣೆ ಅವುಗಳಲ್ಲಿ ಪ್ರಮುಖವಾದವು.
Answered by
0
Answer:
ಹೈದರಾಬಾದ್: ಡಿಸೆಂಬರ್ 22 1887 ಜನಿಸಿದ ಭಾರತೀಯ ಗಣಿತಜ್ಞ ಶ್ರೀನಿವಾಸ ರಾಮಾನುಜನ್ ಅವರ ಸಾಧನೆಗಳನ್ನು ಗುರುತಿಸಲು ಪ್ರತಿ ವರ್ಷ ಡಿಸೆಂಬರ್ 22ರಂದು ರಾಷ್ಟ್ರೀಯ ಗಣಿತ ದಿನವನ್ನು ಆಚರಿಸಲಾಗುತ್ತದೆ. 2012ರಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಡಿಸೆಂಬರ್ 22ನ್ನು ರಾಷ್ಟ್ರೀಯ ಗಣಿತ ದಿನವೆಂದು ಘೋಷಿಸಿದ್ದರು.
Similar questions