ರಾಧಾಕೃಷ್ಣನ್ ಅವರ ಕಿರು ಪರಿಚಯ ಬರೆಯಿರಿ ಮತ್ತು ಅವರ ಆಡು ನೂಡಿಮುತ್ತು ಬರೆಯಿರಿ
Answers
Answer:
ಡಾ. ಸರ್ವೆಪಲ್ಲಿ ರಾಧಾಕೃಷ್ಣನ್ , (ಜನನ : ೫ ನೇ ಸೆಪ್ಟೆಂಬರ್, ೧೮೮೮./ 5 ಸೆಪ್ಟೆಂಬರ್ 1888 - 17 ಏಪ್ರಿಲ್ 1975) ಇವರು ಶಿಕ್ಷಣದ ಬಗ್ಗೆ ಅತ್ಯಂತ ಗೌರವ, ಪ್ರೀತಿ, ನಿಷ್ಠೆಯನ್ನು ಹೊಂದಿದ್ದರು. ಸ್ವತಃ ಶಿಕ್ಷಕರಾಗಿ ಹಲವಾರು ವರ್ಷಗಳ ಕಾಲ ಸೇವೆಗೈದಿರುವ ಡಾ.ರಾಧಾಕೃಷ್ಣನ್, ಭಾರತ ಕಂಡ ಅಗ್ರಗಣ್ಯ ಶಿಕ್ಷಕರಲ್ಲಿ ಪ್ರಮುಖರಾಗಿದ್ದಾರೆ. ಅವರು ಮದ್ರಾಸಿನ ಕ್ರಿಶ್ಚಿಯನ್ ಕಾಲೇಜಿನಲ್ಲಿ (೧೯೦೫-೧೯೦೬) ಶಿಕ್ಷಣ ಪಡೆದಿದ್ದರು. ಶಿಕ್ಷಕರಾಗಿದ್ದ 'ಡಾ. ಸರ್ವಪಲ್ಲಿ ರಾಧಾಕೃಷ್ಣನ್' ೧೯೬೨ ರಲ್ಲಿ ಭಾರತದ ರಾಷ್ಟ್ರಪತಿಯಾಗಿದ್ದರು. ಇವರು ಒಬ್ಬ ಶಿಕ್ಷಕರಾಗಿಯೂ ಸೇವೆಯನ್ನು ಸಲ್ಲಿಸಿದ್ದರು.
ಬಿರುದುಗಳು
ಬ್ರಿಟನ್ ಆಕ್ಸ್ ಫಾರ್ಡ್ ವಿ.ವಿ. ಗೌರವ ಡಾಕ್ಟರೇಟ್ (೧೯೫೨ ),
ಅಮೇರಿಕ ಹಾರ್ವರ್ಡ್ ವಿ.ವಿ. ಗೌರವ ಡಾಕ್ಟರೇಟ್ (೧೯೫೩ ),
ಲಂಡನ್ ಪ್ರವಾಸದಲ್ಲಿದ್ದಾಗ "ಆರ್ಡರ್ ಆಫ್ ಮೆರಿನ್"ಪ್ರಶಸ್ತಿ.
1951-52 ರಲ್ಲಿ ಭಾರತದ ಶಿಕ್ಷಕನೊಬ್ಬ ಮೊಟ್ಟಮೊದಲ ಉಪರಾಷ್ಟ್ರಪತಿಯಾಗಿ ನೇಮಕಗೊಂಡ 'ರಾಧಾಕೃಷ್ಣನ್', ರಾಜ್ಯಸಭೆಯಲ್ಲಿ ಸಂಸ್ಕೃತ ಶ್ಲೋಕಗಳ ಮೂಲಕ ಎಲ್ಲ ಸಂಸತ್ ಸದಸ್ಯರ ಗಮನ ಸೆಳೆಯುತ್ತಿದ್ದರು. 'ರಾಧಾಕೃಷ್ಣನ್' ಅವರ ಅಪಾರ ಸೇವೆಯನ್ನು ಗುರುತಿಸಿ ಗೌರವಿಸಿದ ಭಾರತ ಸರಕಾರ ಉಪರಾಷ್ಟ್ರಪತಿ ಹುದ್ದೆಯಲ್ಲಿದಾಗಲೇ ಅವರಿಗೆ ೧೯೫೪ ರಲ್ಲಿ ಪ್ರತಿಷ್ಠಿತ 'ಭಾರತ ರತ್ನ ಪ್ರಶಸ್ತಿ' ನೀಡಿ ಗೌರವಿಸಿತು.