ಮತದಾರರ ನೋಂದಣಿಯನ್ನು ಸುಧಾರಿಸುವಲ್ಲಿ ಮತದಾರರ ಸಕ್ಷರತ ಸಂಘಗಳ ಪಾತ್ರ ಪ್ರಬಂಧ ರೈಟಿಂಗ್ ಟು ಕನ್ನಡ
Answers
Answer:
ಮತದಾರರ ಪಟ್ಟಿಯ ಪರಿಶೀಲನಾ ಕಾರ್ಯಕ್ರಮದಲ್ಲಿ ಜಿಪಂ ಸಿಇಒ ಹೇಳಿಕೆ
Explanation:
ಸಮಗ್ರ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ-2020 ಪ್ರಯುಕ್ತ ಜಿಲ್ಲಾದ್ಯಂತ ಈಗಾಗಲೇ ಸೆ.1 ರಿಂದ ಹಮ್ಮಿಕೊಂಡಿರುವ ವಿಶೇಷ ಆಂದೋಲನ ಕಾರ್ಯಕ್ರಮವು ಅ. 15ರವರೆಗೆ ನಡೆಯಲಿದೆ. ಈ ಪರಿಷ್ಕರಣೆ ಕಾರ್ಯದಲ್ಲಿಮತದಾರರ ಸಾಕ್ಷರತಾ ಸಂಘಗಳ ಪಾತ್ರ ಪ್ರಮುಖವಾದುದು ಎಂದು ಜಿಲ್ಲಾಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಾ ಕಲ್ಯಾಣ್ ತಿಳಿಸಿದರು.
ಮತದಾರರ ಸಾಕ್ಷರತಾ ಸಂಘಗಳ ಉದ್ಘಾಟನೆ ಮತ್ತು ಸಮಗ್ರ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ 2020ರ ಅಂಗವಾಗಿ ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾಸ್ವೀಪ್ ಸಮಿತಿ ಹಾಗೂ ಸರಕಾರಿ ಮತ್ತು ಖಾಸಗಿ ಅನುದಾನಿತ ಪ್ರಥಮ ದರ್ಜೆ ಕಾಲೇಜುಗಳ ಸಹಯೋಗದಲ್ಲಿನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿಸೋಮವಾರ ಆಯೋಜಿಸಿದ್ದ ಮತದಾರರ ಪಟ್ಟಿಯ ಪರಿಶೀಲನಾ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿರುವ ಎಲ್ಲಾಸರಕಾರಿ ಹಾಗೂ ಖಾಸಗಿ ಅನುದಾನಿತ ಪ್ರಥಮ ದರ್ಜೆ ಕಾಲೇಜುಗಳಲ್ಲಿಕಡ್ಡಾಯವಾಗಿ ಮತದಾರರ ಸಾಕ್ಷರತಾ ಸಂಘಗಳನ್ನು ಸ್ಥಾಪಿಸಿ ಎಲ್ಲಾವಿದ್ಯಾರ್ಥಿಗಳು ಸಂಘಕ್ಕೆ ನೋಂದಣಿಯಾಗಬೇಕು. ಈ ಸಂಘಗಳ ಸದಸ್ಯರು ಮತ ಪಟ್ಟಿಯ ವಿಶೇಷ ಪರಿಷ್ಕರಣೆ ಕಾರ್ಯದಲ್ಲಿಪಾಲ್ಗೊಂಡು 1950ಕ್ಕೆ ಉಚಿತ ಸಂಖ್ಯೆಗೆ ಕರೆ ಮಾಡುವ ಮೂಲಕ ಮತಪಟ್ಟಿಯ ಮಾಹಿತಿ ಪಡೆಯುವ, ಹೊಸದಾಗಿ ಮತದಾರರ ಪಟ್ಟಿ ಸೇರ್ಪಡೆ ಹಾಗೂ ಮತದಾರರ ಪಟ್ಟಿ ಪರಿಶೀಲನೆ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಎಂದರು.
ಈ ಪರಿಷ್ಕರಣೆಯಲ್ಲಿ01.01.2020ಕ್ಕೆ 18 ವರ್ಷ ತುಂಬಿದ ಅರ್ಹ ಮತದಾರರು ಹೊಸದಾಗಿ ಮತದಾರರ ಪಟ್ಟಿಗೆ ತಮ್ಮ ಹೆಸರು ಸೇರಿಸಲು ಅವಕಾಶವಿದೆ. ಮತಪಟ್ಟಿ ಪರಿಶೀಲನೆಗಾಗಿ ಸಾರ್ವಜನಿಕರು ಆಯಾ ಮತಗಟ್ಟೆ ಅಧಿಕಾರಿಗಳನ್ನು ಸಂಪರ್ಕಿಸಿ ಸರಿಪಡಿಸಿಕೊಳ್ಳಬೇಕು. ಕಾಲೇಜು ವಿದ್ಯಾರ್ಥಿಗಳು ಪ್ರಥಮವಾಗಿ ತಾವು ನಂತರ ತಮ್ಮ ಕುಟುಂಬ, ಸುತ್ತಮುತ್ತಲಿನ ಸಾರ್ವಜನಿಕರಿಗೆ ಮಾಹಿತಿ ನೀಡಿ ವಿಶೇಷ ಪರಿಷ್ಕರಣೆಯ ಬಗ್ಗೆ ಅರಿವು ಮೂಡಿಸಬೇಕೆಂದರು.
ಪದವಿ ಕಾಲೇಜುಗಳ ವಿಶೇಷ ಅಧಿಕಾರಿ ಗೌರಿನಾಯ್ಡು ಮಾತನಾಡಿ, ಮತದಾರರ ಸಾಕ್ಷರತಾ ಸಂಘ (ಇಎಲ್‌ಸಿ)ಗಳ ಪಾತ್ರದ ಬಗ್ಗೆ ವಿವರಿಸಿದರು. ಡಯಟ್ ಉಪನ್ಯಾಸಕ ಜಿಲ್ಲಾಮಟ್ಟದ ಮಾಸ್ಟರ್ ತರಬೇತಿದಾರ ಶ್ರೀಧರ್ ಮಾತನಾಡಿ, ಸಂಕ್ಷಿಪ್ತ ವಿಶೇಷ ಪರಿಷ್ಕರಣೆ-2020 ಹಾಗೂ ಮತದಾರರ ಪಟ್ಟಿಯ ಪರಿಷ್ಕರಣೆ ಬಗ್ಗೆ ತಾಂತ್ರಿಕ ವಿಷಯಗಳನ್ನು ವಿವರಿಸಿದರು.
ಇದಕ್ಕೂ ಮುನ್ನ ಏರ್ಪಡಿಸಿದ್ದ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2020ರ ಬಗ್ಗೆ ವಿದ್ಯಾರ್ಥಿಗಳು ಮತ್ತು ವಿವಿಧ ಕಾಲೇಜುಗಳ ಮತದಾರರ ಸಾಕ್ಷರತಾ ಸಂಘಗಳ ಸಂಚಾಲಕರ (ಇಎಲ್‌ಸಿ) ಜಾಥಾ ಕಾರ್ಯಕ್ರಮಕ್ಕೆ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಜಗದೀಶ್ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ನಂತರ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಪದವಿ ಪೂರ್ವ ಕಾಲೇಜಿನ ಇಎಲ್‌ಸಿ ಸಂಚಾಲಕ ಡಾ.ತಿಪ್ಪೇಸ್ವಾಮಿ ಇದ್ದರು.