ಪರಿಸರ ಮಾಲಿನ್ಯಕ್ಕೆ ತಡೆಗಟ್ಟುವ ಮಾರ್ಗಗಳು ಯಾವುವು
Answers
Answer:
ಪರಿಸರ ಮಾಲಿನ್ಯ ತಡೆಗಟ್ಟುವ ಮೂಲಕ ನೈಸರ್ಗಿಕ ಸಂಪತ್ತನ್ನು ರಕ್ಷಿಸಿ ಮುಂದಿನ ಪೀಳಿಗೆಗೆ ಕೊಡುಗೆಯಾಗಿ ನೀಡಬೇಕಾದುದು ನಮ್ಮೆಲ್ಲರ ಕರ್ತವ್ಯ ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಜಿ.ಆರ್.ಬಸವರಾಜು ಸಲಹೆ ನೀಡಿದರು.
ಕೊಡಗು ಜಿಲ್ಲಾ ಪಂಚಾಯಿತಿ, ಅರಣ್ಯ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಗಳ ವತಿಯಿಂದ ಬುಧವಾರ ಕಾವೇರಿ ನಿಸರ್ಗಧಾಮದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಏರ್ಪಡಿಸಿದ್ದ ಜಿಲ್ಲಾಮಟ್ಟದ ಪರಿಸರ ಅಧ್ಯಯನ ಶಿಬಿರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಶಾಲೆಗಳಲ್ಲಿ ಪರಿಸರ ಸ್ನೇಹಿ ಚಟುವಟಿಕೆಗಳನ್ನು ನಡೆಸುವ ಮೂಲಕ ಮಕ್ಕಳಲ್ಲಿ ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸಲಾಗುತ್ತಿದೆಎಂದರು. ನವೀಕರಿಸಬಹುದಾದ ಮತ್ತು ಪರ್ಯಾಯ ಇಂಧನ ಶಕ್ತಿ ಮೂಲಗಳಿಗೆ ಹೆಚ್ಚಿನ ಒತ್ತು ನೀಡುವ ಮೂಲಕ ಪರಿಸರ ಅಸಮತೋಲನವನ್ನು ಹೋಗಲಾಡಿಸ ಬೇಕು ಎಂದು ಅವರು ಹೇಳಿದರು.
ಕಾರ್ಯಾಗಾರವನ್ನು ಉದ್ಘಾಟಿಸಿದ ಡಿಎಫ್ಒ ಏಡುಕೊಂಡಲು ಮಾತನಾಡಿ, ಹೆಚ್ಚುತ್ತಿರುವ ಜನಸಂಖ್ಯೆ ನೈಸರ್ಗಿಕ ಸಂಪನ್ಮೂಲಗಳ ಅವನತಿಗೆ ಕಾರಣವಾಗಿದೆ. ಹೆಚ್ಚುತ್ತಿರುವ ಬೇಡಿಕೆ, ಅವೈಜ್ಞಾನಿಕ ವಿಧಾನಗಳ ಬಳಕೆ, ಸುಸ್ಥಿರವಲ್ಲದ ಕ್ರಮಗಳಿಂದಾಗಿ ಅರಣ್ಯಗಳು ಒತ್ತಡಕ್ಕೆ ಒಳಗಾಗಿವೆ.
ಅರಣ್ಯನಾಶದಿಂದ ಮಣ್ಣಿನ ಸವಕಳಿ, ಭೂಕುಸಿತ, ಫಲವತ್ತತೆಯ ನಾಶ, ಜಲಾಶಯಗಳಲ್ಲಿ ಹೂಳು ತುಂಬುವಿಕೆ, ವನ್ಯಜೀವಿಗಳು ಮತ್ತು ಜೀವ ವೈವಿಧ್ಯ ನಾಶವಾಗುತ್ತಿದೆ.
ಮಳೆಯ ಕೊರತೆಯಿಂದಾಗಿ ಬರಗಾಲ ಪರಿಸ್ಥಿತಿ, ಜಾಗತಿಕ ತಾಪಮಾನ ಏರಿಕೆ, ಪರಿಸರ ಅಸಮತೋಲನ, ಜೀವಸಂಕುಲಗಳು ವಿನಾಶದ ಅಂಚಿಗೆ ಸಾಗುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದರು. ಸುಂಟಿಕೊಪ್ಪ ಸರ್ಕಾರಿ ಪ್ರೌಢಶಾಲಾ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಬೆಂಗಳೂರು ಪರಿಸರ ಶಿಕ್ಷಣ ಕೇಂದ್ರದ ಸಂಪನ್ಮೂಲಕ ವ್ಯಕ್ತಿಗಳಾದ ಸಂತೋಷ್ ಆರ್.ಸುತಾರ್, ಕೆ.ಎಸ್.ಮಂಜುನಾಥ್ ಅವರು ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ವಿವಿಧ ಚಟುವಟಿಕೆಗಳ ಮೂಲಕ ಪರಿಸರ ಸಂರಕ್ಷಣೆ ಕುರಿತು ಅರಿವು ಮೂಡಿಸಿದರು.
ಹೆಚ್ಚುವರಿ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಹರಿಕುಮಾರ್, ಹಿರಿಯ ಅರಣ್ಯಾಧಿಕಾರಿ ಬ್ರಿಜೇಶ್ ಕುಮಾರ್, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಾರುಲತಾ ಸೋಮಲ್, ಬಿಇಒ ಮಲ್ಲೇಸ್ವಾಮಿ, ಆರ್ಎಫ್ಒ ಎಂ.ಎಸ್.ಚಿಣ್ಣಪ್ಪ, ತರಬೇತುದಾರರಾದ ಸತೀಶ್ ಬಲ್ಲಾಳ್, ಕೆ.ಎಸ್.ಪೂಜಾ, ಲಕ್ಷ್ಮಿಕಾಂತ್ ಇದ್ದರು. ಶಿಕ್ಷಕ ಟಿ.ಬಿ.ಮಂಜುನಾಥ್ ಕಾರ್ಯಕ್ರಮ ನಿರೂಪಿಸಿದರು. ಕೆ.ಮೂರ್ತಿ ವಂದಿಸಿದರು.
ಕನ್ನಡತಿ❣️