ಸಾರಾಂಶವನ್ನು ಬರೆಯಿರಿ .
10.ಮತಗಳೆಲ್ಲವೂ ಪಥಗಳು ಎನ್ನುವ
ಹೊಸ ಎಚ್ಚರದೊಳು ಬದುಕೋಣ
ಭಯ-ಸಂಶಯದೊಳು ಕಂದಿದ ಕಷ್ಟೊಳು
ನಾಳಿನ ಕನಸನು ಬಿತ್ತೋಣ
Answers
Answer:
02 ಡಿಸೆಂಬರ್ 2020
10ನೇ ತರಗತಿ-ಕನ್ನಡ-ಪದ್ಯ-01-ಸಂಕಲ್ಪಗೀತೆ - ಸಾರಾಂಶ
ಸಂಕಲ್ಪಗೀತೆ ಪದ್ಯದ ಸಾರಾಂಶ
ಸಂಕಲ್ಪಗೀತೆ ಪದ್ಯವನ್ನು ಜಿ.ಎಸ್.ಶಿವರುದ್ರಪ್ಪನವರ 'ಎದೆತುಂಬಿ ಹಾಡಿದೆನು’ ಎಂಬ ಕವನ ಸಂಕಲನದಿಂದ ಆರಿಸಿಕೊಳ್ಳಲಾಗಿದೆ.
ಜೀವನದಲ್ಲಿ ಧನಾತ್ಮಕ ಭಾವನೆಯನ್ನು, ದೃಢಸಂಕಲ್ಪವನ್ನು ಹೊಂದಿರಬೇಕು. ಯಾವುದೇ ರೀತಿಯ ಸವಾಲುಗಳು ಎದುರಾದಾಗಲೂ ಆತ್ಮವಿಶ್ವಾಸದ ಸಂಕಲ್ಪ ನಿಷ್ಠೆಯಿಂದ ಕ್ರಿಯಾಶೀಲರಾದಾಗ ಯಶಸ್ಸು ಲಭಿಸುತ್ತದೆ. ಭೇದಭಾವಗಳನ್ನು ಹೋಗಲಾಡಿಸಿ ಐಕ್ಯದಿಂದ ಪ್ರಯತ್ನಶೀಲರಾದಾಗ ಬಲ ವರ್ಧಿಸುತ್ತದೆ. ಭಯ ಮತ್ತು ಅನುಮಾನ ಆವರಿಸಿರುವ ಸಮಾಜವನ್ನು ದೃಢನಿಷ್ಠೆಯಿಂದ ಸ್ವಾಸ್ಥ ದ ನೆಲೆಯಾಗಿಸುವ ಹಣತೆ ಹಚ್ಚಿದಾಗ ಕತ್ತಲೆ ದೂರವಾಗುತ್ತದೆ ಎಂಬುದನ್ನು ಭಾವಗೀತೆಯ ಮೂಲಕ ವ್ಯಕ್ತಗೊಳಿಸುವುದೇ ಈ ಕವನದ ಆಶಯವಾಗಿದೆ.
ಸುತ್ತಲು ಕವಿಯುವ ಕತ್ತಲೆಯೊಳಗೆ
ಪ್ರೀತಿಯ ಹಣತೆಯ ಹಚ್ಚೋಣ.
ಬಿರುಗಾಳಿಗೆ ಹೊಯ್ದಾಡುವ ಹಡಗನು
ಎಚ್ಚರದಲಿ ಮುನ್ನಡೆಸೋಣ.
ನಮ್ಮ ಸುತ್ತಲೂ ಹಬ್ಬಿರುವ ದ್ವೇಷ ಮತ್ತು ಅಂಧಕಾರದ ಕತ್ತಲೆಯನ್ನು ಕಳೆಯಲು, ಪ್ರೀತಿ ಮತ್ತು ಜ್ಞಾನದ ದೀಪವನ್ನು ಹಚ್ಚುವ ಮೂಲಕ ದ್ವೇಷರಹಿತ ಸಮಾಜ ನಿರ್ಮಾಣ ಮಾಡಬಹುದು. ಸಂಸಾರ ಸಾಗರದಲ್ಲಿ ಬಿರುಗಾಳಿಗೆ ಸಿಲುಕಿ ಹೊಯ್ದಾಡುತ್ತಿರುವ ಬದುಕೆಂಬ ಹಡಗನ್ನು ಎಚ್ಚರದಲ್ಲಿ ಮುನ್ನಡೆಸುವ ಸಂಕಲ್ಪ ಕೈಗೊಳ್ಳುವುದರಿಂದ ಎಂತಹ ಸವಾಲುಗಳನ್ನಾದರೂ ಧೈರ್ಯವಾಗಿ
Answer:
IS RRR IS RALISED
Explanation: