World Languages, asked by varshini95, 1 year ago

10 sentence about teacher in kannada​

Answers

Answered by Anonymous
1

ಕಲಿಕೆಯಲ್ಲಿ ಆಸಕ್ತಿ ಇರುವ ಎಲ್ಲರಿಗೂ ಗುರುವೊಬ್ಬರು ಬೇಕೇ ಬೇಕು. ಜಗತ್ತಿನಲ್ಲಿ ಅಮ್ಮನ ಹೊರತಾಗಿ ಎಲ್ಲಾ ಸಮಸ್ಯೆಗಳಿಗೂ ದಾರಿದೀಪವಾಗಿ ನಿಲ್ಲಬಲ್ಲ ಸೃಷ್ಟಿ ಎಂದರೆ ಅದು ಶಿಕ್ಷಕರು ಮಾತ್ರ. ವಿದ್ಯೆ, ಜ್ಞಾನ, ಮಾಹಿತಿ ಪಡೆಯುವುದು ಈಗ ಸುಲಭವಾದರೂ ಯಾವುದು ಸರಿ ಯಾವುದು ತಪ್ಪು ಎಂಬುದನ್ನು ತಿಳಿ ಹೇಳಲು ಗುರುವೊಬ್ಬರ ಅಗತ್ಯ ಇದ್ದೇ ಇರುತ್ತದೆ. ಸರಳತೆ, ತಾಳ್ಮೆ, ಸಮಗ್ರತೆಯ ಪ್ರತಿರೂಪವಾಗಿ ಶಿಕ್ಷಕರನ್ನು ನಾನು ಕಾಣುತ್ತೇನೆ. ಶಿಕ್ಷಕರೇ ನಿಜವಾದ ಅನುಕರಣೀಯ ವ್ಯಕ್ತಿಗಳು. ನಮ್ಮ ಜೀವನದಲ್ಲಿ ಧನಾತ್ಮಕ ಚಿಂತನೆಯನ್ನು ಬೆಳೆಸಿ ಸರಿ ಮಾರ್ಗವನ್ನು ತೋರುವವರು ಅವರೇ. ಶಾಲಾ ದಿನಗಳಲ್ಲಿ ಶಿಕ್ಷಕರ ದಿನಾಚರಣೆ ತುಂಬಾ ಸಂಭ್ರಮ ದಿನವಾಗಿರುತ್ತಿತ್ತು. ವರ್ಷವಿಡಿ ಶಿಕ್ಷಕರ ಮಾತು ಕೇಳಿಸಿಕೊಳ್ಳುತ್ತಿದ್ದ ನಾವು, ಟೀಚರ್ಸ್ ಡೇ ದಿನ ಶಿಕ್ಷಕರನ್ನು ನಮ್ಮ ಪ್ರೀತಿಯಿಂದ ಕಟ್ಟಿ ಹಾಕುತ್ತಿದ್ದೆವು. ಕೇಕ್ ಕತ್ತರಿಸಿ, ಉಡುಗೊರೆಗಳನ್ನು ನೀಡುತ್ತಿದ್ದೆವು. ಟೀಚರ್ಸ್ ಜತೆ ಹಾಡಿ ನಲಿದು ಖುಷಿ ಪಡುತ್ತಿದ್ದೆವು.

ಮರ್ವಾಡಿ ಸಮುದಾಯದಿಂದ ಬಂದಿರುವ ನನಗೆ ಬೆಂಗಳೂರಿನಲ್ಲಿ ಕನ್ನಡ ಎಷ್ಟು ಮುಖ್ಯ ಎಂಬುದನ್ನು ಹೇಳಿಕೊಟ್ಟ ಗುರು ಮಿಸ್ ಶೀಲಾ. ನನ್ನ ಕನ್ನಡ ಟೀಚರ್. ನಾನು ಸದಾ ಕಾಲ ತಪ್ಪು ತಪ್ಪು ಕನ್ನಡ ಮಾತನಾಡುತ್ತಿದೆ. ಆದರೂ ಅದನ್ನು ತಿದ್ದಿ ಭಾಷೆ ಬಳಕೆ ಹೆಚ್ಚಿದರೆ ಮಾತ್ರ ಉಳಿಯಲು ಸಾಧ್ಯ. ನಿನ್ನ ಸುತ್ತಮುತ್ತಲಿನ ಜನರ ಜತೆ ಆತ್ಮೀಯವಾಗಿ ಬೆರೆಯಲು ಅವರ ಭಾಷೆಯಲ್ಲೇ ಮಾತನಾಡುವುದು ಒಳ್ಳೆ ವಿಧಾನ ಎಂದರು. ಹಾಗಾಗಿ ನಾನು ತಪ್ಪು ತಪ್ಪಾದರೂ ಕನ್ನಡ ಭಾಷೆ ಮಾತನಾಡಲು ಕಲಿತೆ. ಈಗ ಕನ್ನಡಿಗಳಾಗಿಬಿಟ್ಟಿದ್ದೇನೆ. ನನ್ನಲ್ಲಿ ಆತ್ಮವಿಶ್ವಾಸ ಹೆಚ್ಚಿಸಿದ ಶೀಲಾ ಟೀಚರ್ಸ್ ಗೆ ನಮನಗಳು. ಒಟ್ಟಾರೆ, ಶಾಲಾ ದಿನಗಳಲ್ಲಿ ಗುರುಗಳು ಕಲಿಸಿದ ಪಾಠಗಳು ನನಗೆ ಶಾಲಾ ಮಟ್ಟದಲ್ಲಷ್ಟೇ ಅಲ್ಲದೆ ನನ್ನ ಜೀವನದಲ್ಲಿ ಅಭಿವೃದ್ಧಿ ಕಾಣಲು ಕಾರಣವಾಗಿದೆ. ನನ್ನ ಎಲ್ಲಾ ಗುರುಗಳಿಗೆ ಅನಂತಾನಂತ ವಂದನೆಗಳು

Answered by yamini515
2

ದೇಶಕ್ಕೆ ಉತ್ತಮ ನಾಗರಿಕರನ್ನು ರೂಪಿಸಿಕೊಡುವಲ್ಲಿ ಗುರುವಿನ ಪಾತ್ರ ಮಹತ್ವ ಅನನ್ಯವಾಗಿದೆ. ನಮ್ಮಲ್ಲಿರುವ ಅಜ್ಞಾನದಿಂದ ಹೊರಗೆ ಹಾಕಲು ಶಿಕ್ಷಕರು ಮಾರ್ಗದರ್ಶಿಯಾಗುತ್ತಾರೆ. ಗುರು ಎಂಬ ಶಬ್ದದ ಅರ್ಥವೂ ಇದನ್ನೇ ಹೇಳುತ್ತದೆ. ಅಂಧಃಕಾರವನ್ನು ದೂರಾಗಿಸುವವನು ಎಂದು. ಪ್ರತಿಯೊಬ್ಬರ ಜೀವನದ ಏಳು-ಬೀಳಿಗೆ ಗುರು ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಕಾರಣನಾಗುತ್ತಾನೆ. ಏಕೆಂದರೆ ಒಬ್ಬ ಶಿಕ್ಷಕನು ನಮ್ಮಲ್ಲಿರುವ ಪ್ರಜ್ಞೆಯನ್ನು ಜಾಗೃತಗೊಳಿಸುವ ಶಕ್ತಿಯಾಗಿರುತ್ತಾನೆ. ಶಿಕ್ಷಕರ ದಿನಾಚರಣೆ ನಿಮಿತ್ತ 'ನಮ್ಮ ಬದುಕಿನಲ್ಲಿ ಶಿಕ್ಷಕರ ಮಹತ್ವ' ಎಂಬ ವಿಷಯದ ಮೇಲೆ ಈ ಲೇಖನ ಕೇಂದ್ರಿಕೃತವಾಗಿದೆ

ವಿದ್ಯೆಯಂ ಕಲಿಸಿದಾತಂ ಗುರು' ಎನ್ನುವಾಗ ಜ್ಞಾನ ಬೋಧನೆ ಯಾರಿಂದಾದರೂ ಅದನ್ನು ಸ್ವೀಕರಿಸುವ ಮನೋಭಾವ ಎಲ್ಲರಲ್ಲೂ ಇದ್ದರೆ ಒಳಿತು. ಶಂಕರಾಚಾರ್ಯರಿಗೆ ಒಮ್ಮೆ ಚಂಡಾಲನೋರ್ವನಿಂದ ಉಪದೇಶವಾಯಿತಂತೆ (ಚಂಡಾಲ ರೂಪದಲ್ಲಿ ಶಿವನೇ ಬಂದಿದ್ದ ಎಂಬ ಮಾತು ಹಾಗಿರಲಿ) ಚಂಡಾಲನು ಮಾತುಗಳನ್ನು ನಾನೇಕೆ ಕೇಳಬೇಕು ಎಂದು ಶಂಕರರು ನಿರ್ಧರಿಸಬಹುದಾಗಿತ್ತು.[ಪ್ರಧಾನಿ ನರೇಂದ್ರ ಮೋದಿ ಭಾಷಣ]

ಆದರೆ ಚಂಡಾಲನ ಮಾತುಗಳನ್ನು ಆಲಿಸುವ ವ್ಯವಧಾನ ಹಾಗೂ ಪರರ ಬಗ್ಗೆ ಗೌರವ ನೀಡುವ ಸಂಸ್ಕಾರವಿತ್ತು ಅವರಲ್ಲಿ. ಹೌದು, ಇಂದು ನಮ್ಮಲ್ಲಿ ಕಮ್ಮಿಯಾಗಿರುವುದು ಇದೇ. ಗುರುಗಳ ಮಾತನ್ನು ಆಲಿಸದ ವಿದ್ಯಾರ್ಥಿವೃಂದ. ತಾನು ಹೇಳಿದ್ದೇ ಸರಿಯೆಂಬ ಗರ್ವದಿ ಮೆರೆವ ಕೆಲ ಶಿಕ್ಷಕರು. ಶಿಕ್ಷಕ ಹಾಗೂ ವಿದ್ಯಾರ್ಥಿಗಳ ನಡುವೆ ಪರಸ್ಪರ ಗೌರವ ಕಡಿಮೆಯಾಗಿದೆ ಎಂದರೆ ಅದರಲ್ಲಿ ಅತಿಶಯೋಕ್ತಿ ಇಲ್ಲವೆನ್ನಿಸುತ್ತದೆ. [ಪಾಠ ಹೇಳಿದವರು ನಂತರ ರಾಜಕಾರಣಕ್ಕೆ ಬಂದರು ]

Similar questions