ಭಾರತ 1947 ರಲ್ಲಿ ಸ್ವಾತಂತ್ರ್ಯ ಹೊಂದಿತು. ಭಾರತದ ಸ್ವಾತಂತ್ರ್ಯ ಹೋರಾಟದ ಮೇಲೆ ಅನೇಕ ರಾಷ್ಟ್ರೀಯ ಚಳುವಳಿಗಳು ಪ್ರಭಾವ ಬೀರಿದೆ. ಅವು ಯಾವುವು?
Answers
Answer:
english plz its hard to understand
Answer:
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು. ಅಲ್ಪ ಕಾಲಾನಂತರ ಕಂಪನಿಯ ಅಧಿಕಾರಿ ರಾಬರ್ಟ್ ಕ್ಲೈವ್‍ನ ಉಪಾಯಗಳಿಂದ ವಂಗದ ಅಧಿಕಾರವನ್ನು ತನ್ನ ಕೈವಶಮಾಡಿಕೊಂಡಿತು. ಅಲ್ಲಿಂದ ಮುಂದೆ ಬಹುಬೇಗ ತಮ್ಮ ರಾಜಕೀಯ ನೀತಿಗಳಿಂದ ಭಾರತದ ಬಹುಭಾಗವನ್ನು ಅವರು ಕೈವಶ ಮಾಡಿಕೊಂಡರು. ಪ್ಲಾಸೀ ಕದನದಿಂದ ಸರಿಯಾಗಿ ನೂರು ವರ್ಷಗಳ ನಂತರ ಅಂದರೆ ೧೮೫೭ರಲ್ಲಿ ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ (ಅಥವ ೧೮೫೭ರ ಸಿಪಾಯಿ ದಂಗೆ) ಕಿಡಿಕಾರಿತು. ಆಂಗ್ಲರ ದಬ್ಬಾಳಿಕೆಯವಿರುದ್ಧ ಸಿಪಾಯಿಗಳೂ, ರಾಜ್ಯಗಳೂ ತಿರುಗಿಬಿದ್ದು ಪ್ರತಿಭಟಿಸಿದವಾದರೂ, ವ್ಯವಸ್ಥಿತವಾದ ಯೋಜನೆಯಿಲ್ಲದಿದ್ದರಿಂದ ದಂಗೆ ಹತ್ತಿಕ್ಕಲ್ಪಟ್ಟಿತು. ಸಿಪಾಯಿ ದಂಗೆ ವಿಫಲವಾದ ಮೇಲೆ, ಭಾರತದ ವಿದ್ಯಾವಂತರು ಎಚ್ಚೆತ್ತುಕೊಂಡರು ಹಾಗೂ ರಾಜಕೀಯವಾಗಿ ಸಂಘಟಿತರಾದರು. ೧೮೮೫ರಲ್ಲಿ ಸ್ಥಾಪಿತವಾದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಮೊದಲು ಬ್ರಿಟಿಷ್ ಸಾಮ್ರಾಜ್ಯದ ಅಧೀನತೆಯಲ್ಲಿಯೇ ಭಾರತೀಯರಿಗೆ ಹೆಚ್ಚು ಹಕ್ಕು-ಪ್ರಾತಿನಿಧ್ಯಗಳಿಗಾಗಿ ಹೋರಾಟ ಪ್ರಾರಂಭಿಸಿತು. ೨೦ನೇ ಶತಮಾನದ ಪ್ರಾರಂಭದ ವೇಳೆಗೆ ನಾಗರಿಕ ಸ್ವಾತಂತ್ರ್ಯ, ರಾಜಕೀಯ ಹಕ್ಕು, ಸಂಸ್ಕೃತಿ ಹಾಗೂ ದಿನನಿತ್ಯದ ಜೀವನದ ಮೇಲೆ ಬ್ರಿಟಿಷ್ ದಬ್ಬಾಳಿಕೆಯ ಆಡಳಿತದ ವಿರುದ್ಧ ಜನರ ದನಿ ಜೋರಾಗತೊಡಗಿ, ಬಾಲ ಗಂಗಾಂಧರ ತಿಲಕ ಮೊದಲಾದ ಕ್ರಾಂತಿಕಾರಿ ನೇತಾರರು ಸ್ವರಾಜ್ಯಕ್ಕೆ ಆಗ್ರಹಿಸತೊಡಗಿದರು. ೧೯೧೮ ಹಾಗೂ ೧೯೨೨ರ ನಡುವಿನ ಅವಧಿಯಲ್ಲಿ ಮೋಹನದಾಸ ಗಾಂಧಿಯವರ ನೇತೃತ್ವದಲ್ಲಿ ಅಹಿಂಸಾತ್ಮಕವಾದ ಅಸಹಕಾರ ಚಳವಳಿಯ ಮೊದಲ ಸರಣಿಯನ್ನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪ್ರಾರಂಭಿಸಿದೊಡನೆ ಸ್ವಾತಂತ್ರ್ಯ ಸಂಗ್ರಾಮಕ್ಕೆ ಮಹತ್ವದ ದಿಕ್ಕು ದೊರೆಯಿತು. ಭಾರತದ ಎಲ್ಲೆಡೆಯಿಂದ ಅನೇಕ ಜನ ಈ ಆಂದೋಲನದಲ್ಲಿ ಭಾಗಿಗಳಾದರು. ೧೯೩೦ರಲ್ಲಿ ಪೂರ್ಣ ಸ್ವರಾಜ್ಯಕ್ಕೆ ಬದ್ಧವಾದ ಕಾಂಗ್ರೆಸ್ ೧೯೪೨ರಲ್ಲಿ ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಎನ್ನುವ ಒತ್ತಾಯದ ಬೇಡಿಕೆಯನ್ನು ಮಾಡಿತು. ಬ್ರಿಟಿಷ ಆಡಳಿತವನ್ನು ಕೊನೆಗೊಳಿಸಲು ೧೯೪೨ರಲ್ಲಿ ಸುಭಾಷಚಂದ್ರ ಬೋಸ್ರು ಭಾರತೀಯ ರಾಷ್ಟ್ರೀಯ ಸೈನ್ಯವನ್ನು ಸಂಘಟಿಸಿದರೂ ಅವರ ಅಕಾಲ ಮರಣದಿಂದ ಈ ಪ್ರಯತ್ನ ವಿಫಲವಾಯಿತು. ಎರಡನೇ ಮಹಾಯುದ್ಧದ ನಂತರ ಈ ಎಲ್ಲಾ ಪ್ರಯತ್ನಗಳ ಪರಿಣಾಮವಾಗಿ ಭಾರತ ಹಾಗೂ ಪಾಕಿಸ್ತಾನವೆಂದು ಇಬ್ಭಾಗಿಸುವ ದೇಶವಿಭಜನೆಯ ಬೆಲೆ ತೆತ್ತ ಬಳಿಕ, ಭಾರತವು ೧೫ ಆಗಸ್ಟ ೧೯೪೭ ರಂದು ಬ್ರಿಟಿಷ್ ಆಡಳಿತದಿಂದ ಸ್ವಾತಂತ್ರ್ಯ ವನ್ನು ಪಡೆಯಿತು.
hope this helps u mate...
plz plz mark me as brainlist...
Gud afternoon hv a lovely day...
Naanu saha karnataka dinda ne... let's be frds???