CBSE BOARD XII, asked by rukhsanakhanum25, 10 months ago


37. ನಿಮ್ಮನ್ನು ಮಲ್ಲೇಶ್ವರದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ 'ನರಹರಿ' ಎಂದು
ಭಾವಿಸಿಕೊಂಡು ನಿಮ್ಮ ಶಾಲೆಯಲ್ಲಿ ನಡೆದ ವಿಜ್ಞಾನ ವಸ್ತು ಪ್ರದರ್ಶನದ ವರದಿಯನ್ನು
ಪ್ರಕಟಿಸುವಂತೆ ಕೋರಿ ಕನ್ನಡ ಪ್ರಭ ದಿನಪತ್ರಿಕೆಯ ಸಂಪಾದಕರಿಗೆ ಪತ್ರ ಬರೆಯಿರಿ.

Answers

Answered by dgsboro
6

Explanation:

ಯಲಬುರ್ಗಾ: ವಿದ್ಯಾರ್ಥಿಗಳಲ್ಲಿ ಹುಮ್ಮಸ್ಸು, ವಿಜ್ಞಾನ ಶಿಕ್ಷಕರಲ್ಲಿನ ಕುತೂಹಲ ಹಾಗೂ ಇತರೆ ವಿದ್ಯಾರ್ಥಿ ಹಾಗೂ ಶಿಕ್ಷಕರಲ್ಲಿ ಸಂಭ್ರಮಕ್ಕೆ ಸಾಕ್ಷಿಯಾಗಿತ್ತು ತಾಲ್ಲೂಕಿನ ಹೊಸಳ್ಳಿ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ನಡೆದ ವಿಜ್ಞಾನ ವಸ್ತುಪ್ರದರ್ಶನ.

ತಾಲ್ಲೂಕಿನ ವಿವಿಧ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಶಿಕ್ಷಕರು ಹಾಗೂ ಆಸಕ್ತಿರು ಹೊಸಳ್ಳಿಯಲ್ಲಿ ಸೇರಿ ವಿಜ್ಞಾನದ ಚಟುವಟಿಕೆಗಳ ಅನಾವರಣಗೊಳಿಸುವ ಪ್ರಯತ್ನ ನಡೆಸಿದ್ದು ಜನಮೆಚ್ಚುಗೆಗೆ ಪಾತ್ರವಾಗಿತ್ತು. ವಸ್ತುಪ್ರದರ್ಶನದಲ್ಲಿ ತಾಲ್ಲೂಕಿನ ಸುಮಾರು 22 ಶಾಲೆಗಳು ಭಾಗವಹಿಸಿದ್ದವು.

ಸುಸ್ಥಿರ ಕೃಷಿ ಪದ್ಧತಿ, ಸ್ವಚ್ಛತೆ ಮತ್ತು ಆರೋಗ್ಯ, ಸಂಪನ್ಮೂಲ ನಿರ್ವಹಣೆ, ಕೈಗಾರಿಕಾ ಅಭಿವೃದ್ಧಿ, ಸಾರಿಗೆ ಮತ್ತು ಸಂಪರ್ಕ ವ್ಯವಸ್ಥೆ, ಶೈಕ್ಷಣಿಕ ಆಟಿಕೆ ಮತ್ತು ಗಣತಿ ಮಾದರಿ ಹೀಗೆ ಆರು ವಿಭಾಗಗಳನ್ನಾಗಿ ಮಾಡಿ ಪರಸರ ಸಂರಕ್ಷಣೆ ಜತೆಗೆ ಲಭ್ಯವಿರುವ ವಿಜ್ಞಾನ ಮತ್ತು ತಂತ್ರಜ್ಞಾನದ ಸಹಾಯದಿಂದ ಹೇಗೆ ಅಭಿವೃದ್ಧಿ ಕಾರ್ಯ ನಡೆಸಬಹುದು ಎಂಬುದನ್ನು ವಸ್ತುಪ್ರದರ್ಶನದಲ್ಲಿ ವಿದ್ಯಾರ್ಥಿಗಳು ತಿಳಿಸಿಕೊಟ್ಟರು.

‘ಪಠ್ಯ ಪುಸ್ತಕಗಳನ್ನು ಓದಿ ಪರೀಕ್ಷೆ ಬರೆಯುವುದಕ್ಕೆ ಸೀಮಿತಗೊಳಿಸದೇ ಮಕ್ಕಳಲ್ಲಿನ ಪ್ರತಿಭೆಯನ್ನು ಪ್ರದರ್ಶಿಸಲು ವೇದಿಕೆ ಕಲ್ಪಿಸುವುದು ಮುಖ್ಯ. ರಚನಾತ್ಮಕ ಹಾಗೂ ಗುಣಾತ್ಮಕ ಶಿಕ್ಷಣ ದೊರೆಯಬೇಕಾದರೆ ಮಕ್ಕಳು ಪಠ್ಯೇತರ ಚಟುವಟಿಕೆಯಲ್ಲಿ ಪಾಲ್ಗೊಳ್ಳುವುದು ಅಗತ್ಯ. ಈ ಕಾರಣದಿಂದ ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸುವ ನಿಟ್ಟಿನಲ್ಲಿ ವಿಜ್ಞಾನ ವಸ್ತು ಪ್ರದರ್ಶನ ಏರ್ಪಡಿಸಲಾಗಿತ್ತು’ ಎಂದು ಪ್ರಾಚಾರ್ಯ ವಿ.ಬಿ.ಹನಮಶೆಟ್ಟಿ ತಿಳಿಸಿದರು.

NOW MARK ME AS BRAINLIEST!!!

Similar questions