India Languages, asked by yukthamohanswetha, 6 hours ago

5. "ಕೈ ಕೆಸರಾದರೆ ಬಾಯಿ ಮೊಸರು" ಈ ಗಾದೆ ಮಾತನ್ನು ವಿಸ್ತರಿಸಿ barahiri​

Answers

Answered by bhatanvita9
22

Answer:

ರೈತನು ಕೆಸರು ಗದ್ದೆಯಲ್ಲಿ ಇಡೀ ವರ್ಷ ಕಷ್ಟ ಪಟ್ಟು ದುಡಿದರೆ ಮಾತ್ರ ಬೆಳೆ ಬೆಳೆಯಲು ಸಾಧ್ಯ. ಇದೊಂದು ಉದಾಹರಣೆ ಅಷ್ಟೇ. ಹೀಗೆ ನಾವು ಯಾವುದೇ ಕೆಲಸ ಫಲ ಕೊಡಬೇಕೆಂದರೆ ಕಷ್ಟಪಟ್ಟು ಕೆಲಸ ಮಾಡಬೇಕು. ಮಾಡುವ ಕೆಲಸದಲ್ಲಿ ಶ್ರದ್ಧೆ ಇರಬೇಕು. ಹೇಗೆ ಒಬ್ಬ ಶಿಲ್ಪಿ ತನ್ನ ಪರಿಶ್ರಮದಿಂದ ಒಂದು ಬಂಡೆಗಲ್ಲನ್ನು ಕೆತ್ತಿ ಸುಂದರ ಶಿಲ್ಪ ಕಲಾಕೃತಿಯನ್ನಾಗಿ ಮಾಡುವನೋ ಹಾಗೆಯೇ ನಮ್ಮ ಕೆಲಸವನ್ನು ಗಮನವಿಟ್ಟು ಮಾಡಿದರೆ ಒಳ್ಳೆಯ ಫಲಿತಾಂಶ ಪಡೆಯಬಹುದು. ವಿದ್ಯಾರ್ಥಿಗಳಿಗೂ ಈ ಮಾತು ಅನ್ವಯಿಸುತ್ತದೆ. ಶಿಕ್ಷಕರು ಮಾಡಿದ ಪಾಠಗಳನ್ನು ಗಮನ ಇಟ್ಟು ಓದಿದರೆ ಒಂದು ಒಳ್ಳೆಯ ಗುರಿ ಸಾಧಿಸಬಹುದು. ಆಲಸಿಗಳಾಗದೆ ಶ್ರಮದಿಂದ ತಮ್ಮ ತಮ್ಮ ಕೆಲಸಗಳನ್ನು ಮಾಡಿಕೊಂಡರೆ ಗಮನೀಯ ಸಾಧನೆಗೆ ನಾಂದಿಯಾಗುತ್ತದೆ ಎಂಬುದು ಈ ಗಾದೆಯ ಅರ್ಥ.

Explanation:

kannadati

Anvita

Similar questions