India Languages, asked by srinikalyanapura, 5 months ago

80 words essay on kuvenpu in Kannada​

Answers

Answered by 66Nehal
0

Answer:

hope it helps you

Explanation:

ಜಯ ಭಾರತ ಜನನಿಯ ತನುಜಾತೆ', 'ಎಲ್ಲಾದರು ಇರು ಎಂತಾದರೂ ಇರು ಎಂದೆಂದಿಗೂ ನೀ ಕನ್ನಡವಾಗಿರು', 'ಓ ನನ್ನ ಚೇತನ ಆಗುವ ನೀ ಅನಿಕೇತನ' ಹೀಗೆ ರಾಷ್ಟ್ರಕವಿ ಕುವೆಂಪು ಅವರ ಹಲವಾರು ಕವನಗಳು ಕನ್ನಡಿಗರ ಮನದಾಳದಲ್ಲಿ ಹಾಸುಹೊಕ್ಕಾಗಿದೆ.

ರಾಷ್ಟ್ರಕವಿ ಕುವೆಂಪು ಅವರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕುಪ್ಪಳಿಯಲ್ಲಿ 1904 ಡಿಸೆಂಬರ್ 29 ರಂದು ಜನಿಸಿದರು. ತಮ್ಮ ಪ್ರಾಥಮಿಕ ಶಿಕ್ಷಣ ತೀರ್ಥಹಳ್ಳಿಯಲ್ಲಿ ಪೂರೈಸಿ ಪ್ರೌಢಶಾಲಾ ಶಿಕ್ಷಣದಿಂದ ಹಿಡಿದು ಎಂಎ ಪದವಿಯವರೆಗೂ ಮೈಸೂರಿನಲ್ಲಿ ಓದಿದರು. ಕುವೆಂಪು ಅವರು ಕನ್ನಡದ ಅಗ್ರಮಾನ್ಯ ಕಾದಂಬರಿಕಾರ ನಾಟಕಕಾರ, ವಿಮರ್ಷಕ ಮತ್ತು ಚಿಂತಕ, ಇಪ್ಪತ್ತನೆಯ ಶತಮಾನದಲ್ಲಿ ಕಂಡ ದೈತ್ಯ ಪ್ರತಿಭೆ.

ವರಕವಿ ಬೇಂದ್ರೆ ಯವರಿಂದ 'ಯುಗದ ಕವಿ ಜಗದ ಕವಿ' ಎನಿಸಿಕೊಂಡವರು.ವಿಶ್ವಮಾನವ ಸಂದೇಶ ನೀಡಿದವರು. ಕನ್ನಡದ ಎರಡನೆಯ ರಾಷ್ಟ್ರಕವಿ , ಜ್ಞಾನಪೀಠ ಪ್ರಶಸ್ತಿಯನ್ನು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಮೊದಲ ಬಾರಿಗೆ ಕನ್ನಡಕ್ಕೆ ತಂದುಕೊಟ್ಟವರು. ಕರ್ನಾಟಕ ಕೊಡಮಾಡುವ ಕರ್ನಾಟಕ ರತ್ನ, ಹಾಗೂ ಪಂಪ ಪ್ರಶಸ್ತಿಯನ್ನು ಮೊದಲ ಬಾರಿಗೆ ಪಡೆದವರು.ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಓದಿದ ಇವರು ಮೈಸೂರು ವಿಶ್ವವಿದ್ಯಾಲಯದಲ್ಲಿ ಸೇವೆ ಸಲ್ಲಿಸಿ ಉಪಕುಲಪತಿಯಾಗಿ ನಿವೃತ್ತರಾವರು.

ಕಥನ ಕವನಗಳು, ಕಲಾ ಸುಂದರಿ, ನವಿಲು, ಪಕ್ಷಿಕಾಶಿ, ಶ್ರೀರಾಮಾಯಣ ದರ್ಶನಂ ಮಹಾಕಾವ್ಯವೂ ಸೇರಿ 30ಕ್ಕೂ ಹೆಚ್ಚು ಕಾವ್ಯ ಕೃತಿಗಳು. ಜಲಗಾರ, ಯಮನಸೋಲು, ಬೊಮ್ಮನಹಳ್ಳಿ ಕಿಂದರಿ ಜೋಗಿ, ವಾಲ್ಮೀಕಿ ಭಾಗ್ಯ ಸ್ಮಶಾನ ಕುರುಕ್ಷೇತ್ರ, ಮಹಾರಾತ್ರಿ, ರಕ್ತಾಕ್ಷಿ, ಬಿರುಗಾಳಿ, ಬೆರಳ್‌ಗೆ ಕೊರಳ್, ಶೂದ್ರ ತಪಸ್ವಿ, ಇತರೆ ನಾಟಕಗಳು, ಕಾನೂರು ಹೆಗ್ಗಡತಿ, ಮಲೆಗಳಲ್ಲಿ ಮದುಮಗಳು ಕಾದಂಬರಿಗಳು, ವಿಮರ್ಶೆ, ಕಾವ್ಯ ಮೀಮಾಂಸೆ-ಕಾವ್ಯ ,ಶಿಶುಸಾಹಿತ್ಯ ಹೀಗೆ ಸಾಹಿತ್ಯ ಲೋಕಕ್ಕೆ ನೀಡಿರುವ ಕೊಡುಗೆ ಅಪಾರ.

1937 ಎಪ್ರಿಲ್ 30 ರಂದು ಹೇಮಾವತಿಯವರನ್ನು ಕೈ ಹಿಡಿದರು..ಪೂರ್ಣಚಂದ್ರ ತೇಜಸ್ವಿ ಮತ್ತು ಕೋಕಿಲೋದಯ ಚೈತ್ರ ಎಂಬ ಪುತ್ರರು, ಇಂದುಕಲಾ ಮತ್ತು ತರಿಣಿ ಎಂಬ ಇಬ್ಬ ಪುತ್ರಿಯರಿದ್ದಾರೆ. ರಾಮಕೃಷ್ಣ ಪರಮಹಂಸರ ಜೀವನದಿಂದ ಪ್ರಭಾವಿತರಾದ ಕುವೆಂಪುರವರು ಸ್ವಾಮಿ ಶಿವಾನಂದರಿಂದ ದೀಕ್ಷೆ ಪಡೆದಿದ್ದಾರೆ.

ಕುವೆಂಪು ರಾಷ್ಟೀಯ ಪ್ರತಿಷ್ಠಾನ ಇವರು ಜನಿಸಿದ ಮನೆಯನ್ನು ಕವಿಮನೆ ಹೆಸರಿನ ಮ್ಯೂಸಿಯಂ ಮಾಡಿದ್ದಾರೆ.1987 ರಲ್ಲಿ ಶಿವಮೊಗ್ಗದಲ್ಲಿ ಕುವೆಂಪುರವ ಗೌರವಾರ್ಥವಾಗಿ ಕುವೆಂಪು ವಿಶ್ವವಿದ್ಯಾಲಯ ಸ್ಥಾಪಿಸಲಾಯಿತು.

Similar questions