9. UDRUN ONWR winog ser own
IN
ಕವಿಗಳ ಸ್ಥಳ, ಶಾಲ, ಕೃತಿ ಮತ್ತು ಪ್ರಶಸ್ತಿಗಳ ಕುರಿತು ವಾಕ ರೂಪದಲ್ಲಿ ಬರೆಯಿರಿ.1x3=3
1. ಸಾರಾ ಅಬೂಹರ್
Answers
ಸಾರಾ ಅಬೂಬಕ್ಕರ್ (ಜೂನ್ ೩೦, ೧೯೩೬) ಕನ್ನಡದ ಪ್ರಮುಖ ಕಥೆ, ಕಾದಂಬರಿಗಾರ್ತಿಯಾಗಿ ಪ್ರಸಿದ್ಧರಾಗಿದ್ದಾರೆ.
ಸಾರಾ ಅಬೂಬಕ್ಕರ್
ಜನನ
ಸಾರಾ
ಜೂನ್ ೩೦, ೧೯೩೬
ಕಾಸರಗೋಡಿನ ಚಂದ್ರಗಿರಿ ತೀರ
ವೃತ್ತಿ
ಬರಹಗಾರರು
ರಾಷ್ಟ್ರೀಯತೆ
ಭಾರತೀಯರು
ವಿಷಯ
ಕನ್ನಡ ಸಾಹಿತ್ಯಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ,
ದಾನ ಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ,
ಕನ್ನಡ ಸಾಹಿತ್ಯ ಪರಿಷತ್ತಿನ ಬಿ. ಸರೋಜಾದೇವಿ ಪ್ರಶಸ್ತಿ,
‘ಸಹನಾ’ ಕಾದಂಬರಿಗೆ ವರ್ಧಮಾನ ಪ್ರಶಸ್ತಿ,
‘ಸುಳಿಯಲ್ಲಿ ಸಿಕ್ಕವರು’ ಕೃತಿಗೆ ಮಾತೋಶ್ರೀ ರತ್ನಮ್ಮ ಹೆಗ್ಗಡೆ ಪ್ರಶಸ್ತಿ ಮತ್ತು
ಸಂದೇಶ ಪ್ರಶಸ್ತಿ,
ಅನುಪಮ ಪ್ರಶಸ್ತಿ,
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ,
ಹಂಪಿ ವಿಶ್ವವಿದ್ಯಾಲಯದ ನಾಡೋಜ ಪ್ರಶಸ್ತಿ,
ಮಾಸ್ತಿ ಪ್ರಶಸ್ತಿ,
ನೃಪತುಂಗ ಪ್ರಶಸ್ತಿ
ಮುಂತಾದ ಹಲವಾರು ಕನ್ನಡದ ಪ್ರಖ್ಯಾತ ಲೇಖಕಿ ಸಾರಾ ಅಬೂಬಕ್ಕರ್ ಅವರು ಜೂನ್ ೩೦, ೧೯೩೬ರಂದು ಕಾಸರಗೋಡಿನ ಚಂದ್ರಗಿರಿ ತೀರದ ಕುಗ್ರಾಮವೊಂದರಲ್ಲಿ ಜನಿಸಿದರು. ತಂದೆ ನ್ಯಾಯವಾದಿಗಳಾಗಿದ್ದ ಪಿ. ಅಹಮದ್ ಅವರು ಮತ್ತು ತಾಯಿ ಚೈನಾಬಿ ಅವರು. ಸಾರಾ ಅವರ ಪ್ರಾಥಮಿಕ ವಿದ್ಯಾಭ್ಯಾಸ ಹುಟ್ಟಿದೂರಿನಲ್ಲಿ ನೆರವೇರಿತು. ಮುಂದೆ ಅವರು ಹೈಸ್ಕೂಲುವರೆಗೆ ಕಲಿತದ್ದು ಕಾಸರಗೋಡಿನಲ್ಲಿ. ಅರೆಬಿಕ್ ಕಲಿತಿದ್ದ ಅಜ್ಜಿ ಹೇಳುತ್ತಿದ್ದ ಕಥೆಗಳಿಂದ ಆಕರ್ಷಿತರಾಗಿ ಸಾಹಿತ್ಯದಲ್ಲಿ ಏನಾದರೂ ಸಾಧಿಸಬೇಕೆಂಬ ಆಶಯ ಅವರ ಬಾಲ್ಯದಲ್ಲೇ ಮೂಡಿಬಂದಿತ್ತು. ಎಂಜಿನಿಯರ್ ಆಗಿದ್ದ ಅಬೂಬಕ್ಕರ್ ಅವರೊಡನೆ ಸಾರಾ ಅವರ ವಿವಾಹ ಏರ್ಪಟ್ಟು ವಿದ್ಯಾಭ್ಯಾಸಕ್ಕೆ ವಿದಾಯ ಹೇಳುವಂತಾಯಿತು. ಆದರೆ ಓದಿನಲ್ಲಿ ನಿರಂತರ ಆಸಕ್ತರಾಗಿದ್ದ ಸಾರಾ ಅವರು ಶಿವರಾಮಕಾರಂತರು, ಇನಾಂದಾರ್, ಭೈರಪ್ಪ, ಅನಂತಮೂರ್ತಿ ಇವರೆಲ್ಲರ ಬರವಣಿಗೆಗೆ ಮಾರುಹೋಗಿ ಸದಾ ಓದಿನಲ್ಲಿ ಮಗ್ನರಾಗಿರುತ್ತಿದ್ದರು. ಮನೋವಿಜ್ಞಾನದ ಬಗ್ಗೆ ತ್ರಿವೇಣಿಯವರು ಬರೆದ ಕಾದಂಬರಿಗಳು ಸಾರಾ ಅವರಲ್ಲಿ ಆಕರ್ಷಣೆ ಹುಟ್ಟಿಸಿದವು. ಬದುಕುತ್ತಿದ್ದ ಸುತ್ತಮುತ್ತಲಿನ ಪರಿಸರದಲ್ಲಿ ಮನೋವ್ಯಾಕುಲತೆಗೊಳಗಾಗುತ್ತಿದ್ದ ಬಹಳಷ್ಟು ಸಹ ಧರ್ಮೀಯರ ಕುರಿತು ಅವರ ಮನ ನಿರಂತರವಾಗಿ ಮಿಡಿಯುತ್ತಿತ್ತು. ತಲಾಕ್ ಸಂಪ್ರದಾಯ, ಮಕ್ಕಳಾದ ನಂತರದ ಅಸಹನೀಯ ಬದುಕು ಇವೆಲ್ಲಾ ಅವರನ್ನು ಕಾಡುತ್ತಿದ್ದವು.