about national flag in kannada (paragraph)
Answers
Answer:
this is the paragraph of national flag in kannada
Answer:
Explanation:
ತ್ರಿವರ್ಣ ಧ್ವಜದ ವೈಶಿಷ್ಟ್ಯ
ತ್ರಿವರ್ಣ ಧ್ವಜ ಅಗಲದುದ್ದಕ್ಕೂ ಮೇಲೆ ಕೇಸರಿ ಬಣ್ಣ, ಮಧ್ಯದಲ್ಲಿ ಬಿಳಿ ಬಣ್ಣ, ಕೊನೆಯಲ್ಲಿ ಹಸಿರು ಬಣ್ಣದ ಪಟ್ಟಿಗಳಿಂದ ಕೂಡಿದೆ. ಬಾವುಟದ ಮಧ್ಯದಲ್ಲಿ ಇಪ್ಪತ್ತುನಾಲ್ಕು ರೇಖೆಗಳುಳ್ಳ ನೀಲಿಯ ಅಶೋಕ ಚಕ್ರವಿದೆ. ದೇಶದ ವಿಭಿನ್ನ ಜಾತಿ, ಮತ, ಪಂಗಡ ಮತ್ತು ಸಂಸ್ಕೃತಿಯ ಜನರನ್ನು ಒಂದೇ ದ್ವಜದಡಿ ನಿಲ್ಲಿಸಿ ದೇಶದ ಏಕತೆಯನ್ನು ಸಾರುವ ದಿವ್ಯ ಸಾಧನವೇ ನಮ್ಮ ರಾಷ್ಟ್ರದ್ವಜ. ಈ ನಮ್ಮ ಸ್ವಾತಂತ್ರ್ಯ ದೇಶದ ಸಂಕೇತವಾಗಿರುವ ರಾಷ್ಟ್ರದ್ವಜದ ಅವಹೇಳನ ರಾಷ್ಟ್ರದ್ರೋಹವಾಗಿರುತ್ತದೆ.
ಅದರ ಉಳಿವಿಗಾಗಿ ಬಲಿದಾನವಾಗಲು ಸದಾ ಸಿದ್ದವಾಗಿರುವ ನಾವುಗಳು ಅದರ ಮೇಲಿರುವ ಭಕ್ತಿಯನ್ನೇ ದೇಶಭಕ್ತಿ ಎನ್ನುತ್ತೇವೆ. ಅಂದಿನ ಪ್ರಧಾನಿಯಾಗಿದ್ದ ಪಂಡಿತ್ ಜವಾಹರ್ ಲಾಲ್ ನೆಹರು ೧೯೪೭ ಜುಲೈ ೨೨ ರಂದು ಅಸೆಂಬ್ಲಿಯಲ್ಲಿ ನಮ್ಮ ರಾಷ್ಟ್ರ ದ್ವಜವನ್ನು ದೇಶಕ್ಕೆ ಅರ್ಪಿಸಿದರು. ನಮ್ಮ ಸರಕಾರವು ದ್ವಜ ಕೇವಲ ಕೈ ನೇಯ್ಗೆಯಿಂದಲೇ ಸಿದ್ದವಾದ ಶುದ್ಧ ಖಾದಿಯಿಂದಲೇ ಮಾಡಲ್ಪಟ್ಟಿರಬೇಕು. ಅದು ಉಣ್ಣೆಯ ಅಥವಾ ರೇಷ್ಮೆಯ ಇಲ್ಲವೇ ಹತ್ತಿಯದಾದರೂ ಅಡ್ಡಿಯಿಲ್ಲ.
ಆದರೆ ಅದು ಕೈ ನೂಲು ಮತ್ತು ಕೈ ನೇಯ್ಗೆಯದೇ ಆಗಿರಬೇಕು. ಕೇಸರಿ- ಬಿಳಿ -ಹಸಿರು ಬಣ್ಣಗಳ ಅಳತೆ ಸಮ ಪ್ರಮಾಣದಲ್ಲಿ ಇದ್ದು ನೀಲಿಚಕ್ರವು ಹೆಚ್ಚು ಕಡಿಮೆ ಬಿಳಿ ಬಣ್ಣದ ಅಡ್ಡ ಗೆರೆಗಳಷ್ಟಿದ್ದು, ಅದರಲ್ಲಿ ಇಪ್ಪತ್ತ ನಾಲ್ಕು ರೇಖೆಗಳಿವೆ. ದ್ವಜದ ಉದ್ದ ಮತ್ತು ಅಗಲ ೩:೨ ಪ್ರಮಾಣದಲ್ಲಿರ ತಕ್ಕದ್ದು ಎಂದು ತಿಳಿಸಿದೆ.
ರಾಷ್ಟ್ರಧ್ವಜ ತಯಾರಿಸುವ ಹಕ್ಕು ಕರ್ನಾಟಕದ ಧಾರವಾಡ ಜಿಲ್ಲೆಯ ಗರಗ ಗ್ರಾಮದಲ್ಲಿ ತಯಾರಿಸಲಾಗುತ್ತದೆ. ಉತ್ತರ ಕರ್ನಾಟಕದಾದ್ಯಂತ ಒಟ್ಟು ೫೨ ಇಂತಹ ಘಟಕಗಳು ರಾಷ್ಟ್ರಧ್ವಜ ನಿರ್ಮಾಣದಲ್ಲಿ ತೊಡಗಿವೆ. ಭಾರತದ ಸಂವಿಧಾನದಲ್ಲಿ ಉಲ್ಲೇಖದಂತೆ ಮತ್ತು ಭಾರತೀಯ ಸ್ಟಾಂಡರ್ಡ್ಸ್ ಬ್ಯೂರೋದ ನಿಯಮಗಳಿಗೆ ತಕ್ಕಂತೆ ರಾಷ್ಟ್ರಧ್ವಜವನ್ನು ಉತ್ಪಾದಿಸಬೇಕು. ಬ್ಯೂರೋದ ಮಾನದಂಡಕ್ಕೆ ತಕ್ಕಂತೆ ಇಲ್ಲದಿದ್ದರೆ ಉತ್ಪನ್ನವೇ ತಿರಸ್ಕೃತವಾಗುತ್ತದೆ.
ನಮ್ಮ ಪವಿತ್ರ ಭಾರತಾಂಬೆಯ ಕೀರ್ತಿಯು ಮುಗಿಲೆತ್ತರಕ್ಕೆ ಏರಲಿ, ಎಲ್ಲಕ್ಕಿಂತ ಶ್ರೇಷ್ಠವಾದ ನಮ್ಮ ರಾಷ್ಟ್ರದ ಧ್ಯೇಯೋದ್ದೇಶಗಳು ಎಲ್ಲಕ್ಕಿಂತ ಎತ್ತರದಲ್ಲಿ ರಾರಾಜಿಸಲಿ, ಎಂಬ ಸಂಕೇತವನ್ನು ನಾಲ್ಕು ದಿಕ್ಕುಗಳಿಗೂ ತಿಳಿಯಪಡಿಸುವುದೇ ನಮ್ಮ ರಾಷ್ಟ್ರ ಧ್ವಜವನ್ನು ಮೇಲಕ್ಕೆ ಹಾರಿಸುವ ಉದ್ದೇಶ.