adesha sandhi endarenu in Kannada
Answers
Answered by
4
Answer:
ಆದೇಶ ಸಂಧಿಯು ಪೂರ್ವಪದದ ಕೊನೆಯ ಅಕ್ಷರ ಮತ್ತು ಉತ್ತರಪದದ ಮೊದಲ ಅಕ್ಷರಗಳ ಸಂಧಿಸುವಿಕೆಯಲ್ಲಿ ನಡೆಯುತ್ತದೆ.
ಸಂಧಿ ಮಾಡುವಾಗ - ಪೂರ್ವಪದದಲ್ಲಿಯ ಒಂದು ಅಕ್ಷರವು ಸಂಧಿಪದದಲ್ಲಿ ಇಲ್ಲದಿದ್ದರೆ - ಲೋಪಸಂಧಿ. ಉದಾ: ಮಾತಿಲ್ಲ= ಮಾತು+ಇಲ್ಲ=ಇಲ್ಲಿ ‘ಉ’ ಸ್ವರ ಲೋಪ.
ಸಂಧಿ ಮಾಡುವಾಗ - ಪೂರ್ವಪದ ಮತ್ತು ಉತ್ತರ ಪದಗಳಲ್ಲಿಯ ಎಲ್ಲ ಅಕ್ಷರಗಳು ಸಂಧಿಪದದಲ್ಲಿ ಇದ್ದು ಹೊಸದಾಗಿ ಒಂದು ಅಕ್ಷರ ಸಂಧಿಪದದಲ್ಲಿ ಬಂದಿದ್ದರೆ-ಆಗಮ ಸಂಧಿ. ಉದಾ: ಮನೆ+ಅನ್ನು = ಮನೆಯನ್ನು = ‘ಯ್’ ವ್ಯಂಜನ ಆಗಮ.
ಸಂಧಿ ಮಾಡುವಾಗ - ಉತ್ತರ ಪದದ ಆದಿಯಲ್ಲಿಯ ಒಂದು ವ್ಯಂಜನವು ಸಂಧಿಪದದಲ್ಲಿ ಲೋಪವಾಗಿ ಆ ಸ್ಥಳದಲ್ಲಿ ಹೊಸದಾಗಿ ಮತ್ತೊಂದು ವ್ಯಂಜನವು ಆಗಮವಾಗಿ ಬಂದರೆ - ಆದೇಶ ಸಂಧಿ'. ಉದಾ: ಮಳೆ+ಕಾಲ=ಮಳೆಗಾಲ=‘ಕ್’ವ್ಯಂಜನ ಲೋಪ. ‘ಗ್’ ವ್ಯಂಜನ ಆದೇಶ.
ಎಲ್ಲಾ ಅಕ್ಷರಗಳು ಇದ್ದಷ್ಟೇ ಸಂಧಿಪದದಲ್ಲಿ ಇರುವುದು ಪ್ರಕೃತಿ ಭಾವ ಅಥವಾ ವಿಸಂಧಿ.
Explanation:
hope it helps you
follow me I'll help you in kannada
Similar questions