India Languages, asked by Sidarth1312, 1 year ago

Basavannanavara vachanagalu in kannada with explanation

Answers

Answered by gitakumariara2
5
೧. ಉದಕದೊಳಗೆ ಬಚ್ಚಿಟ್ಟ ಬಯ್ಕೆಯ ಕಿಚ್ಚಿನಂತಿದ್ದಿತ್ತು, ಸಸಿಯೊಳಗಣ ರಸದ ರುಚಿಯಂತಿದ್ದಿತ್ತು, ನನೆಯೊಳಗಣ ಪರಿಮಳದಂತಿದ್ದಿತ್ತು, ನಿಮ್ಮ ನಿಲುವು ಕೂಡಲಸಂಗಮದೇವಾ, ಕನ್ಯೆಯ ಸ್ನೇಹದಂತಿದ್ದಿತ್ತು. ೨. ಕಾಳಿಯ ಕಣ್ ಕಾಣದಿಂದ ಮುನ್ನ, ತ್ರಿಪುರ ಸಂಹಾರದಿಂದ ಮುನ್ನ, ಹರಿವಿರಂಚಿಗಳಿಂದ ಮುನ್ನ, ಉಮೆಯ ಕಳ್ಯಾಣದಿಂದ ಮುನ್ನ, ಮುನ್ನ, ಮುನ್ನ, ಮುನ್ನ, - ಅಂದಿಂಗೆಳೆಯ ನೀನು, ಹಳೆಯ ನಾನು ಮಹಾದಾನಿ ಕೂಡಲಸಂಗಮದೇವಾ. ೩. ಅಯ್ಯಾ, ನೀನು ನಿರಾಕಾರವಾಗಿರ್ದಲ್ಲಿ ನಾನು ಜ್ನಾನವೆಂಬ ವಾಹನವಾಗಿರ್ದೆ, ಕಾಣಾ ಅಯ್ಯಾ, ನೀನು ನಾಟ್ಯಕ್ಕೆ ನಿಂದಲ್ಲಿ ನಾನು ಚೈತನ್ಯವೆಂಬ ವಾಹನವಾಗಿರ್ದೆ, ಕಾಣಾ ಅಯ್ಯಾ, ನೀನು ಆಕಾರವಾಗಿರ್ದಲ್ಲಿ ನಾನು ವೃಶ್ಹಭನೆಂಬ ವಾಹನವಾಗಿರ್ದೆ ಕಾಣಾ ಅಯ್ಯಾ; ನೀನೆನ್ನ ಭವದ ಕೊಂದಿಹೆನೆಂದು ಜಂಗಮ ಲಾಂಚ್ಹನನಾಗಿ ಬಂದಲ್ಲಿ ನಾನು ಭಕ್ತನೆಂಬ ವಾಹನವಾಗಿರ್ದೆ ಕಾಣಾ ಕೂಡಲಸಂಗಮದೇವಾ ೪. ಅಯ್ಯಾ, ಏಳೇಳು ಜನ್ಮದಲ್ಲಿ ಶಿವಭಕ್ತನಾಗಿ ಬಾರದಿರ್ದೊಡೆ ನಿಮ್ಮಾಣೆ, ನಿಮ್ಮ ಪ್ರಮಥರಾಣೆ! ನಿಮ್ಮ ಪ್ರಸಾದಕ್ಕಲ್ಲದೆ ಬಾಯ್ದೆರೆಯೆನಯ್ಯಾ, ಪ್ರಥಮ ಭವಾಂತರದಲ್ಲಿ ಶಿಲಾದನೆಂಬ ಗಣೇಶ್ವರನ ಮಾಡಿ ಹೆಸರಿಟ್ಟು ಕರೆದು ನಿಮ್ಮ ಭೃತ್ಯನ ಮಾಡಿಯೆನ್ನ ನಿರಿಸಿಕೊಂಡಿರ್ದಿರಯ್ಯಾ, ಎರಡನೆಯ ಭವಾಂತರದಲ್ಲಿ ಸ್ಕಂದನೆಂಬ ಗಣೇಶ್ವರನ ಮಾಡಿ ಹೆಸರಿಟ್ಟು ಕರೆದು ನಿಮ್ಮ ಕಾರುಣ್ಯವ ಮಾಡಿಸಿಕೊಂಡಿರ್ದಿರಯ್ಯಾ, ಮೂರನೆಯ ಭವಾಂತರದಲ್ಲಿ ನೀಲಲೋಹಿತನೆಂಬ ಗಣೇಶ್ವರನ ಮಾಡಿ ಹೆಸರಿಟ್ಟು ಕರೆದು ನಿಮ್ಮ ಲೀಲಾ ವಿನೋದದಿಂದಿರಿಸಿಕೊಂಡಿರ್ದಿರಯ್ಯಾ, ನಾಲ್ಕನೆಯ ಭವಾಂತರದಲ್ಲಿ ಮನೋಹರನೆಂಬ ಗಣೇಶ್ವರನ ಮಾಡಿ ಹೆಸರಿಟ್ಟು ಕರೆದು ನಿಮ್ಮ ಮನಃ ಪ್ರೇರಕನಾಗಲೆಂದಿರಿಸಿಕೊಂಡಿರ್ದಿರಯ್ಯಾ. ಐದನೆಯ ಭವಾಂತರದಲ್ಲಿ ಕಾಲಲೋಚನನೆಂಬ ಗಣೇಶ್ವರನ ಮಾಡಿ ಹೆಸರಿಟ್ಟು ಕರೆದು ಸರ್ವಕಾಲ ಸಂಹಾರವ ಮಾಡಿಸುತ್ತಿರ್ದಿರಯ್ಯಾ. ಆರನೆಯ ಭವಾಂತರದಲ್ಲಿ ವೃಶ್ಹಭನೆಂಬ ಗಣೇಶ್ವರನ ಮಾಡಿ ಹೆಸರಿಟ್ಟು ಕರೆದು ನಿಮಗೇರಲು ವಾಹನವಾಗಲೆಂದಿರಿಸಿಕೊಂಡಿರ್ದಿರಯ್ಯಾ. ಏಳನೆಯ ಭವಾಂತರದಲ್ಲಿ ಬಸವನೆಂಬ ಗಣೇಶ್ವರನ ಮಾಡಿ ಹೆಸರಿಟ್ಟು ಕರೆದು ನಿಮ್ಮೊಕ್ಕುದಮಿಕ್ಕುದಕ್ಕೆ ಯೋಗ್ಯನಾಗಲೆಂದಿರಿಸಿಕೊಂಡಿರ್ದಿರಯ್ಯಾ. ಇದು ಕಾರಣ ಕೂಡಲಸಂಗಮದೇವಾ, ನೀವು ಬರಿಸಿದ ಭವಾಂತರದಲ್ಲಿ ನಾನು ಬರುತಿರ್ದೆನಯ್ಯಾ. ೫. ಅಯ್ಯಾ, ನಿಮ್ಮ ಶರಣನ ಮರ್ತ್ಯಕ್ಕೆ ತಂದೆಯಾಗಿ ನೆನೆನೆನೆದು ಸುಖಿಯಾಗಿಯಾನು ಬದುಕಿದೆನಯ್ಯಾ. ಅದೇನು ಕಾರಣ ತಂದೆಯಿಂದರಿದೆನಯ್ಯಾ. ಅರಿದರಿದು ನಿಮ್ಮ ಶರಣನು ಆಚರಿಸುವಾಚರಣೆಯ ಕಂಡು ಕಣ್ದೆರೆದೆನಯ್ಯಾ ಕೂಡಲಸಂಗಮದೇವಾ. ೬. ’ಕರಿಘನ ಅಂಕುಶ ಕಿರಿದೆ’ನ್ನಬಹುದೆ? ಬಾರದಯ್ಯಾ. ’ಗಿರಿಘನ ವಜ್ರ ಕಿರಿದೆ’ನ್ನಬಹುದೆ? ಬಾರದಯ್ಯಾ. ತಮ್ಮಂಥ ಘನ ಜ್ಯೋತಿ ಕಿರಿದೆನ್ನಬಹುದೆ? ಬಾರದಯ್ಯ. ’ಮರಹು ಘನ ನಿಮ್ಮ ನೆನೆವ ಮನ ಕಿರಿದೆ’ನ್ನಬಹುದೆ? ಬಾರದಯ್ಯಾ ಕೂಡಲಸಂಗಮದೇವಾ. ೭. ಭವಬಂಧನ ಭವಪಾಶವಾದ ಕಾರಣವೇನಯ್ಯಾ? ಹಿಂದಣ ಜನ್ಮದಲಿ ಲಿಂಗವ ಮರೆದೆನಾಗಿ, ಹಿಂದಣ ಸಿರಿಯಲ್ಲಿ ಜಂಗಮನ ಮರೆದೆನಾಗಿ ಅರಿದೋಡೀ ಸಂಸಾರವ ಹೊದ್ದಲೀವನೆ ಕೂಡಲಸಂಗಮದೇವಾ. ೮. ಸಂಸಾರ ಸಾಗರನ ತೆರೆಕೊಬ್ಬಿ ಮುಖದ ಮೇಲೆ ಅಲೆಯುತ್ತಿದ್ದುದೇ ನೋಡಾ! ಸಂಸಾರಸಾಗರ ಉರದುದ್ದವೇ? ಹೇಳಾ! ಸಂಸಾರ ಸಾಗರ ಕೂರಲುದ್ದವೇ? ಹೇಳಾ? ಸಂಸಾರ ಸಾಗರ ಸಿರದುದ್ದವಾದ ಬಳಿಕ ಏನ ಹೇಳುವೆನಯ್ಯಾ? ಅಯ್ಯಾ, ಅಯ್ಯಾ, ಎನ್ನ ಹುಯ್ಯಲ ಕೇಳಯ್ಯ? ಕೂಡಲಸಂಗಮದೇವಾ ನಾನೇನೆನುವೆನಯ್ಯಾ? ೯. ಚಂದ್ರಮನಂತೆ ಕಳೆ ಸಮನಿಸಿತ್ತೆನಗೆ ಸಂಸಾರವೆಂಬ ರಾಹು ಸರ್ವಗ್ರಾಸಿಯಾಗಿ ನುಂಗಿತ್ತಯ್ಯಾ! ಇಂದೆನ್ನ ದೇಹಕ್ಕೆ ಗ್ರಹಣವಾಯಿತು, ಇನ್ನೆಂದಿಗೆ ಮೋಕ್ಶವಹುದೋ ಕೂಡಲಸಂಗಮದೇವಾ ೧೦. ಇಲಿ ಗಡಹನೊಡ್ಡಿದಲ್ಲಿರ್ಪಂತೆ ಎನ್ನ ಸಂಸಾರ ತನು ಕೆಡುವನ್ನಕ್ಕ ಮಾಣದು; ಹೆರರ ಬಾಧಿಸುವುದು ತನು ಕೆಡುವನ್ನಕ್ಕಮಾಣದು. ಹೆರರ ಚ್ಹಿದ್ರಿಸುವುದು ತನು ಕೆಡುವನ್ನಕ್ಕ ಮಾಣದು ಅಕಟಕಟಾ! ಸಂಸಾರಕ್ಕಾಸತ್ತೆ ಕೂಡಲಸಂಗಮದೇವಾ. ೧೧. ಕಪ್ಪೆ ಸರ್ಪನ ನೆಳಲಲ್ಲಿಪ್ಪಂತೆನಗಾಯಿತ್ತಯ್ಯಾ! ಅಕಟಕಟಾ ಸಂಸಾರ ವೃಥಾ ಹೋಯಿತಲ್ಲಾ! ಕರ್ತುವೇ ಕೂಡಲಸಂಗಮದೇವಾ ಇವ ತಪ್ಪಿಸಿ ಎನ್ನನು ರಕ್ಶಿಸಯ್ಯಾ. ೧೨. ಶೂಲದ ಮೇಲಣ ವಿಭೋಗವೇನಾದೊಡೇನೋ? ನಾನಾವರ್ಣದ ಸಂಸಾರ ಹಾವ-ಹಾವಡಿಗನ ಸ್ನೇಹದಂತೆ! ತನ್ನಾತ್ಮ ತನಗೆ ಹಗೆಯಾದ ಬಳಿಕ ಬಿನ್ನಾಣವುಂಟೆ! ಮಹಾದಾನಿ ಕೂಡಲಸಂಗಮದೇವಾ. ೧೩. ಸಂಸಾರವೆಂಬ ಬಲೆಯಲ್ಲಿ ಸಿಲುಕಿದೆನಯ್ಯಾ, ಎನ್ನನು ಕಾಯಯ್ಯಾ ಸಂಗಮದೇವಾ ಹುರುಳಿಲ್ಲ ಹುರುಳಿಲ್ಲ! ಶಿವಧೋ! ಶಿವಧೋ! ೧೪. ನಾನೊಂದು ನೆನೆದೊಡೆ ತಾನೊಂದು ನೆನೆವುದು, ನಾವಿತ್ತಲೆಳೆ ದೊಡೆ ತಾನತ್ತಲೆಳೆವುದು; ತಾ ಬೇರೆಯೆನ್ನನಳಲಿಸಿ ಕಾಡಿತ್ತು. ತಾ ಬೇರೆಯೆನ್ನ ಬಳಲಿಸಿ ಕಾಡಿತ್ತು. ಕೂಡಲಸಂಗನ ಕೂಡಿಹೆನೆಂದೊಡೆ ತಾನೆನ್ನ ಮುಂದುಗೆಡಿಸಿತ್ತು ಮಾಯೆ! ೧೫. ಜನಿತಕ್ಕೆ ತಾಯಾಗಿ ಹೆತ್ತಳು ಮಾಯೆ! ಮೋಹಕ್ಕೆ ಮಗಳಾಗಿ ಹುಟ್ಟಿದಳು ಮಾಯೆ! ಕೂಟಕ್ಕೆ ಸ್ತ್ರೀಯಾಗಿ ಕೂಡಿದಳು ಮಾಯೆ! ಇದಾವ ಪರಿಯಲ್ಲಿ ಕಾಡಿತ್ತು ಮಾಯೆ ಈ ಮಾಯೆಯ ಕಳೆವೊಡೆ ಯೆನ್ನಳವಲ್ಲ, ನೀವೇ ಬಲ್ಲಿರಿ ಕೂಡಲಸಂಗಮದೇವಾ. ೧೬. ಕೊಡೆವಿಡಿದು ಕುದುರೆಯ ದೃಢವುಳ್ಳ ರಾವುತನೇರಿ ಕೊಡೆ ಕೋಟಿ, ಶೂರರು, ಹನ್ನಿಬ್ಬರಯ್ಯಾ! ಚ.ದ್ರಕಾಂತ ಗಿರಿಯ ಗಜ ಬಂದು ಮೂದಲಿಸಿ ಅರಿದು ಕೊಲುವೊಡೆ ರಿಪುಗಳ ಕಲಿತನವನೋಡಾ! ಅವಿಗೆಯೊಳಡಗಿದ ಪುತ್ಥಳಿಯ ರೂಹಿನಂತಾಯಿತ್ತು, ಕೂಡಲಸಂಗಮದೇವಾ ನಿಮ್ಮ ಹೆಸರಿಲ್ಲದ ಹೆಸರು. ೧೭. ಇಂದಿಗೆಂತು ನಾಳಿಗೆಂತು ಎಂದು ಬೆಂದೊಡಲ ಹೊರೆಯ ಹೋಯಿತ್ತೆನ್ನ ಸಂಸಾರ! ಹಿಂದೆ ನಾನಾ ಯೋನಿಯಲ್ಲಿ ಬಂದೆನೆಂಬ ಹೇಯವಿಲ್ಲಾ; ಮುಂದೆ ಮುಕ್ತಿಯಾಗಬೇಕೆಂಬ ಯುಕ್ತಿಯಿಲ್ಲಾ! ಎಂದೆಂದೂ ಸದಾಶಿವನ ಕುಂದದೆ ನೆನೆಯಲೀಯದೆ ಕೊಂದುದಯ್ಯಾ ಈ ಮಾಯೆ ಕೂಡಲಸಂಗಮದೇವಾ. ೧೮. ದಿಟ ಪುಟ ಭಕುತಿ ಸಂಪುಟ ನೆಲೆಗೊಳ್ಳದಾಗಿ ಟಿಂಬಕನನಾಡಿಸುತ್ತಿದ್ದಿತಯ್ಯಾ ನಿನ್ನ ಮಾಯೆ; ಟೀಕವ ಟಿಂಬಕನಾಡಿಸುತ್ತಿದ್ದಿತಯ್ಯಾ ನಿನ್ನ ಮಾಯೆ; ಕೂಡಲಸಂಗಮದೇವಯ್ಯಾ, ಹೊನ್ನ ಹೆಣ್ಣ ಮಣ್ಣ ತೋರಿ.
Similar questions