ಮರುಳ ಮಾಧವ ಮಹಿಯ ರಾಜ್ಯದ
ಹಿಂಗ ನೋವು ಕಂತೆ
ಶಿರವನರಿದೂಷಿಸುವೆನೆಂce
ಭರತದೊಳೆದೇನು ಕೌರವೇಂದ್ರನ ಕೊಂದೆ ನೀನೆಂದ.
Answers
Answered by
0
Answer:
ಕುಮಾರವ್ಯಾಸನ ಕಾಲ: ಕ್ರಿ.ಶ. ೧೩೫೦-೧೪೦೦
ಸ್ಥಳ : ಗದುಗಿನ ಕೋಳಿವಾಡ (ಈಗಿನ ಧಾರವಾಡ ಜಿಲ್ಲೆ, ಹುಬ್ಬಳ್ಳಿ ತಾಲೂಕಿನ ಕೋಳಿವಾಡ)
ಆರಾಧ್ಯದೈವ: ಗದುಗಿನ ವೀರನಾರಾಯಣ
ಕೃತಿ: ‘ಕರ್ಣಾಟಭಾರತ ಕಥಾಮಂಜರಿ’ ಇದಕ್ಕೆ ಕನ್ನಡಭಾರತ, ಗದುಗಿನ ಭಾರತ ಎಂಬ ಹೆಸರುಗಳೂ ಇವೆ.
ಕುಮಾರವ್ಯಾಸ ಕನ್ನಡದ ಅತ್ಯುನ್ನತ ಕವಿಗಳಲ್ಲಿ ಒಬ್ಬ. ಕನ್ನಡ ಸಾಹಿತ್ಯದ ದಿಗ್ಗಜರಲ್ಲಿ ಒಬ್ಬ ಎಂದರೆ ತಪ್ಪಾಗಲಾರದು. ಕುಮಾರವ್ಯಾಸನ ಮೂಲ ಹೆಸರು ನಾರಣಪ್ಪ. “ಗದುಗಿನ ನಾರಣಪ್ಪ” ಎಂದು ಸಾಮಾನ್ಯವಾಗಿ ಕುಮಾರವ್ಯಾಸ ನನ್ನು ಗುರುತಿಸಲಾಗುತ್ತದೆ. ಈತನ ಕಾವ್ಯ ನಾಮ ಕುಮಾರವ್ಯಾಸ. ವ್ಯಾಸ ಮಹಾಕವಿಯ ಸಂಸ್ಕೃತ ಮಹಾಭಾರತದ ಅತ್ಯದ್ಭುತ ಕನ್ನಡ ರೂಪವನ್ನು ರಚಿಸಿದ್ದರಿಂದ, ವ್ಯಾಸ ಮಹಾಕವಿಯ ಮಾನಸಪುತ್ರ ತಾನೆನ್ನುವ ವಿನೀತ ಭಾವದಿಂದ ನಾರಣಪ್ಪ ಕುಮಾರ ವ್ಯಾಸನಾಗಿದ್ದಾನೆ. ಈ ಹೆಸರು ಕುಮಾರವ್ಯಾಸನಿಗೆ ಅನ್ವರ್ಥವಾಗಿದೆ. ಕುಮಾರವ್ಯಾಸ ಗದುಗಿನ ವೀರನಾರಾಯಣ ದೇಗುಲದಲ್ಲಿನ ಕಂಬದ ಅಡಿಯಲ್ಲೇ ಗದುಗಿನ ಭಾರತವನ್ನು ರಚಿಸಿ ಓದುತ್ತಿದ್ದ ಎಂಬ ಪ್ರತೀತಿ ಸಹ ಇದೆ.
Similar questions