India Languages, asked by ndharmayat, 2 months ago

ಸ್ವಚ್ಛಭಾರತ ಅಭಿಯಾನ eassy writing upto 150 words​

Answers

Answered by BrainlyTwinklingstar
6

ಸ್ವಚ್ಛಭಾರತ ಅಭಿಯಾನ :

\bigstar ನಮ್ಮ ಆರೋಗ್ಯದ ದೃಷ್ಟಿಯಿಂದ ನಾವು ವಾಸಿಸುವ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ನಮ್ಮ ಆದ್ಯ ಕರ್ತವ್ಯವಾಗಿದೆ. ಈ ದಿಸೆಯಲ್ಲಿ ಪ್ರತಿಯೊಬ್ಬರೂ ಸ್ವಯಂ ಪ್ರೇರಿತರಾಗಿ ಸ್ವಚ್ಛತೆಯ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು.ಇದು ನಮ್ಮ ಮನೆ ಪರಿಸರದಿಂದಲೇ ಪ್ರಾರಂಭಿಸಬೇಕು.

\bigstar 'ಆರೋಗ್ಯವೇ ಭಾಗ್ಯ' ಎಂಬ ನಾಣ್ಣುಡಿ ನಮ್ಮಲ್ಲಿದೆ ಉತ್ತಮ ಆರೋಗ್ಯಕ್ಕೆ ಉತ್ತಮ ಹಾಗೂ ಸ್ವಚ್ಛವಾದ ಪರಿಸರ ಅಗತ್ಯ. ಇದಕ್ಕಾಗಿಯೇ ನಮ್ಮ ಇಂದಿನ ಪ್ರಧಾನ ಮಂತ್ರಿಗಳು ಗಾಂಧೀಜಿಯವರ ಜನ್ಮದಿನವಾದ 2.10.2014ರಂದು ಸ್ವಚ್ಛ ಭಾರತ ಅಭಿಯಾನವನ್ನು ಪ್ರಾರಂಭಿಸಿದರು.

\bigstar ಗಾಂಧೀಜಿಯವರು ಹುಟ್ಟಿ 150 ವರ್ಷ ಪೂರ್ಣಗೊಳ್ಳುವ 2.10.2019ಕ್ಕೆ ಈ ಯೋಜನೆಯ ಗುರಿಯನ್ನು ಇಟ್ಟುಕೊಳ್ಳಲಾಗಿದೆ.ಈ ಅವಧಿಯಲ್ಲಿ ಸಂಪೂರ್ಣವಾಗಿ ಸ್ವಚ್ಛಭಾರತ ನಿರ್ಮಾಣವಾಗಬೇಕು ಈ ದಿಸೆಯಲ್ಲಿ ಈಗಾಗಲೇ ಹಳ್ಳಿಗಳಲ್ಲಿ ನಗರಗಳಲ್ಲಿ ತಾವು ವಾಸಿಸುವ ಪ್ರದೇಶಗಳಲ್ಲಿ ಕೆಲಸ ಮಾಡುವ ಸ್ಥಳಗಳಲ್ಲಿ ಸ್ವಚ್ಛತಾ ಆಂದೋಲನವನ್ನು ಕೈಗೆತ್ತಿಕೊಳ್ಳಲಾಗಿದೆ.ಇದರಿಂದ ಉತ್ತಮ ಪರಿಸರ ನಿರ್ಮಾಣವಾಗುತ್ತಿದೆ.

\bigstar ತ್ಯಾಜ್ಯ ವಸ್ತುಗಳ ಸಮರ್ಪಕ ವಿಲೇವಾರಿಯಾಗುತ್ತಿದ್ದು ಇನ್ನೂ ಉತ್ತಮಗೊಳ್ಳಬೇಕಿದೆ ಜನರಲ್ಲಿ ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿದೆ. ಸಮೂಹ ಮಾಧ್ಯಮಗಳು ಇದನ್ನು ಯಶಸ್ವಿಗೊಳಿಸುವಲ್ಲಿ ಪೂರ್ಣ ಸಹಕಾರ ನೀಡುತ್ತಿವೆ. ದೇಶದಾದ್ಯಂತ ಈ ಅಭಿಯಾನವು ಉತ್ತಮವಾಗಿ ಅನುಷ್ಠಾನಗೊಳ್ಳುತ್ತಿರುವುದು ಸಂತೋಷದ ವಿಷಯ.

\bigstar ಸ್ವಚ್ಛ ಭಾರತ ನಿರ್ಮಾಣದ ಕನಸನ್ನು ನನಸು ಮಾಡೋಣ ಈ ಯೋಜನೆಯನ್ನು ಸಾಕಾರಗೊಳಿಸುವಲ್ಲಿ.

\bigstar ಪ್ರತಿವಾರ ಕೇವಲ ಎರಡು ಗಂಟೆಗಳ ಅವಧಿಯನ್ನು ಮೀಸಲಿಡೋಣ ಈ ಮೂಲಕ ಪ್ರಧಾನ ಮಂತ್ರಿಗಳ ಕನಸನ್ನು ನನಸಾಗಿಸುವುದರ ಮೂಲಕ ಅಭಿಯಾನವನ್ನು ಯಶಸ್ವಿಗೊಳಿಸೋಣ.

Answered by Anonymous
1

Answer:

ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ೨೦೧೫-೨೦೧೬ನೇ ಸಾಲಿನಲ್ಲಿ.ಈ ಅಭಿಯಾನವು ಅಧಿ ಕೃತವಾಗಿ ೨ ಅಕ್ಟೋಬರ್ ೨೦೧೪ ನವದೆಹಲಿಯಲ್ಲಿ ಪ್ರಧಾನಮಂತ್ರಿ [ನರೇಂದ್ರ ಮೋದಿ|ನರೇಂದ್ರ ಮೋದಿಯವರು] ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭವಾಗಿತ್ತು

  • ಸ್ವಚ್ಛ ಭಾರತ ಅಭಿಯಾನದ ಅಕ್ಟೋಬರ್ ೨ರ ಗಾಂಧಿ ಜಯಂತಿ­ಯಂದು ದೇಶದ ಪ್ರಧಾನಿ ನರೇಂದ್ರ ಮೋದಿ­ಯವರು ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛ­ಗೊಳಿಸಿ, ಸ್ವಚ್ಛ ಭಾರತ ಅಭಿಯಾನ­ಕ್ಕೆ ಚಾಲನೆ­ ನೀಡುವ ಮೂಲಕ ದೇಶದ ಜನ­ರಲ್ಲಿ ರೋಮಾಂಚನವುಂಟು ಮಾಡಿದ್ದಾರೆ. ಹೆಚ್ಚಿನ ಸಾರ್ವ­­ಜನಿಕ ಪ್ರದೇಶಗಳಲ್ಲಿ ಕೊಳೆ, ಕಸ­ಗಳನ್ನು ನೋಡಿ ತಾವೇನೂ ಮಾಡ­ಲಾ­ಗದೇ, ಅವು­ಗಳಿಗೆ ಅನಿವಾರ್ಯವಾಗಿ ಹೊಂದಿ­ಕೊಂಡಂತಿದ್ದ ಬಹ­ಳಷ್ಟು ಜನರಲ್ಲಿ ಆಶಾ­ಭಾವನೆಗಳು ಚಿಗುರೊಡೆದಿವೆ.

  • ಮೋದಿಯವರು ಸಾರ್ವ­ಜನಿಕರಿಗೆ ತಮ್ಮ ಪ್ರದೇಶ­­ಗಳನ್ನು ಸ್ವಚ್ಛವಾಗಿ­ಟ್ಟುಕೊಳ್ಳಲು ಕರೆ ಜೊತೆ ಅಂಬಾನಿ, ಸಚಿನ್‌ ತೆಂಡೂಲ್ಕರ್‌­ರಂತಹ ಪ್ರಭಾವಿ ವ್ಯಕ್ತಿಗಳಿಗೆ ಒಂದು ಪ್ರದೇಶ­ವನ್ನು ಸ್ವಚ್ಛ­ಗೊಳಿ­ಸುವುದು ಹಾಗೂ ಇನ್ನಿತ­ರ­ರಿಗೂ ಅದೇ ರೀತಿ ಮಾಡು­ವಂತೆ ಕರೆ ನೀಡುವ ಮೂಲಕ ಅಭಿ­ಯಾನಕ್ಕೆ ಕೈಜೋಡಿಸಲು ಆಹ್ವಾನಿ­ಸಿದ್ದು, ಇದಕ್ಕೆ ಹಲವು ದಿಗ್ಗಜರ ಬೆಂಬಲ ಹಾಗೂ ಪೂರಕ ಸ್ಪಂದನೆಗಳಿಂದ ಈ ಅಭಿಯಾನವು ಇನ್ನಷ್ಟು ಚುರುಕುಗೊಂಡಿದೆ.

ಹೆಚ್ಚಿನವರು ಸಾರ್ವ­ಜನಿಕ­­ವಾಗಿಯೂ ಈ ಅಭಿಯಾನಕ್ಕೆ ಮೆಚ್ಚುಗೆ ವ್ಯಕ್ತ­ಪಡಿ­ಸುತ್ತಿದ್ದಾರೆ. ಸ್ವತಃ ಪ್ರಧಾನಿ­ಯವರ ಒತ್ತಾಸೆ, ಇತರ ಪ್ರಮುಖರ ಹಾಗೂ ಸರ್ಕಾ­ರೇತರ ಸಂಸ್ಥೆ­ಗಳ ಬೆಂಬಲ, ಸಾರ್ವಜನಿಕರ ಸಹ­ಭಾಗಿತ್ವ, ಜಾಲತಾಣ, ಮಾಧ್ಯಮಗಳ ಮೂಲಕ ಸ್ವಚ್ಛ­ತೆಯ ವಿಷಯದ ಕುರಿತ ಪ್ರಚಾರ.

Similar questions