India Languages, asked by mansitewatia1784, 11 months ago

Essay on abhyas in Kannada language

Answers

Answered by Anonymous
5

Answer:

ಯೋಗ (ಸಂಸ್ಕೃತ, ಪಾಲಿ: योग yóga ) ಎಂದರೆ ಭಾರತದಲ್ಲಿ ಆರಂಭವಾದ ಸಾಂಪ್ರದಾಯಿಕ ದೈಹಿಕ ಹಾಗೂ ಮಾನಸಿಕ ಆಚರಣೆಗಳ ಬೋಧನಶಾಖೆ.[೧] ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳಲ್ಲಿ ಈ ಪದವನ್ನು ಧ್ಯಾನದ ಆಚರಣೆಗಳೊಂದಿಗೆ ಬಳಸಲಾಗುತ್ತದೆ.[೨][೩][೪] ಹಿಂದೂ ಧರ್ಮದಲ್ಲಿ, ಹಿಂದೂ ತತ್ವಶಾಸ್ತ್ರದ ಆರು ಸಂಪ್ರದಾಯಬದ್ಧ(ಆಸ್ತಿಕ) ಶಾಖೆ/ಪಂಥಗಳಲ್ಲಿ ಒಂದಕ್ಕೆ ಈ ಪದವನ್ನು ಬಳಸುತ್ತಾರಲ್ಲದೆ, ಆ ಪಂಥವು ತನ್ನ ಆಚರಣೆಗಳಿಂದ ತಲುಪಲು ಬಯಸುವ ಗುರಿಗೂ ಇದೇ ಪದವನ್ನು ಬಳಸುತ್ತಾರೆ.[೫][೬] ಜೈನ ಧರ್ಮದಲ್ಲಿ —ಮಾನಸಿಕ,ಮೌಖಿಕ ಮತ್ತು ದೈಹಿಕ ಎಲ್ಲಾ ಚಟುವಟಿಕೆಗಳಿಗೆ ಇಡಿಯಾಗಿ ಈ ಪದವನ್ನು ಬಳಸುತ್ತಾರೆ.

ಹಿಂದೂ ತತ್ವಶಾಸ್ತ್ರದಲ್ಲಿ ಪ್ರಸ್ತಾಪವಾಗುವ ಯೋಗದ ಪ್ರಮುಖ ಶಾಖೆಗಳೆಂದರೆ ರಾಜ ಯೋಗ, ಕರ್ಮ ಯೋಗ, ಜ್ಞಾನ ಯೋಗ, ಭಕ್ತಿ ಯೋಗ, ಮತ್ತು ಹಠ ಯೋಗ.[೭][೮][೯] ಪತಂಜಲಿಯ ಯೋಗಸೂತ್ರ ಗಳಲ್ಲಿ ಪ್ರಸ್ತಾಪವಾಗಿರುವ ಹಾಗೂ ಹಿಂದೂ ತತ್ವಶಾಸ್ತ್ರದ ಸಂದರ್ಭದಲ್ಲಿ ಸರಳವಾಗಿ ಯೋಗ ಎಂದೆನಿಸಿಕೊಳ್ಳುವ ರಾಜ ಯೋಗವು ಸಾಂಖ್ಯ ಸಂಪ್ರದಾಯಕ್ಕೆ ಸೇರಿದ್ದು.[೧೦] ಅನೇಕ ಇತರ ಹಿಂದೂ ಗ್ರಂಥಗಳು ಉಪನಿಷತ್ತುಗಳು, ಭಗವದ್ಗೀತೆ, ಹಠಯೋಗ ಪ್ರದೀಪಿಕಾ, ಶಿವಸಂಹಿತೆ ಮತ್ತು ಅನೇಕ ತಂತ್ರಗಳು ಸೇರಿದಂತೆ ಯೋಗದ ವಿವಿಧ ಮುಖ/ಮಗ್ಗಲುಗಳನ್ನು ಚರ್ಚಿಸುತ್ತವೆ.

Similar questions