India Languages, asked by purdipmatis, 1 year ago

Essay on environment in kannada

Answers

Answered by Anonymous
14
ನಮ್ಮ ಪರಿಸರ ನಮ್ಮ ಜೀವನದ ಅವಶ್ಯಕ ಭಾಗವಾಗಿದೆ. ಇದು ನಮಗೆ ವಾಸಿಸಲು ಮತ್ತು,,,,, ಆಡುವ ಕೆಲಸ ಕಳೆಯುತ್ತಿದ್ದಾರೆ ವಾಕಿಂಗ್ ಉಸಿರಾಟದ ಕೇಳಿದ ಕುಡಿಯುತ್ತಾ ಇಂತಹ ತಿನ್ನುವುದು ನಮ್ಮ ಕ್ರಮಗಳು ಯಾವುದೇ ಮಾಡಲು ಮೂಲವಾಗಿದೆ. ಪರಿಸರ ನಮ್ಮ ಸುತ್ತಮುತ್ತಲಿನ ಆಗಿದೆ.
ನಮ್ಮ ಜೀವನದ ಗುಣಮಟ್ಟವನ್ನು ಗುಣಮಟ್ಟದ ನಮ್ಮ ಪರಿಸರದ ಸರಿಯಾದ ಅಸ್ತಿತ್ವದ ಮೇಲೆ ಅವಲಂಬಿತವಾಗಿರುತ್ತದೆ. ಪರಿಸರ ಭೌಗೋಳಿಕ ಪ್ರದೇಶ, ನೈಸರ್ಗಿಕ ಮೂಲಗಳ ಸುತ್ತಲಿನ ವಾತಾವರಣ ಒಳಗೊಂಡಿದೆ
ಬಹಳ ಹಿಂದೆ, ಜನರು ಪರಿಸರಕ್ಕೆ ಹಾನಿಕಾರಕವಲ್ಲ ರೀತಿಯಲ್ಲಿ ಪರಿಸರ ಅಪ್ಪಣೆಯಂತೆ ತತ್ವಗಳ ಪ್ರಕಾರ ಇರಲು ಸಾಧ್ಯವಾಯಿತು. ಈ ದಿನಗಳಲ್ಲಿ ನಾವು ಹಾನಿಯಾಗದಂತೆ ಮತ್ತು ಪರಿಸರ ಅವಮಾನಕರ ಮತ್ತು ಪರೋಕ್ಷವಾಗಿ ನಾವೇ ಹಾನಿಯಾಗದಂತೆ - ದೈಹಿಕವಾಗಿ ಮತ್ತು ಜೈವಿಕವಾಗಿ. ಆದ್ದರಿಂದ ಪರಿಸರ ವ್ಯವಸ್ಥೆ ಪರಿಸರ ವ್ಯವಸ್ಥೆಯ ಪ್ರಭಾವಿತವಾಗಿರುತ್ತದೆ. ತನ್ನ ಸಮತೋಲನವನ್ನು ಪರಿಣಾಮ ಮತ್ತು ಪರಿಸರ ಮರುಬಳಕೆ ವಿದ್ಯಮಾನಗಳ ತಿದ್ದುಪಡಿ ಮಾಡಲಾಗಿರುತ್ತದೆ.
ತಂತ್ರಜ್ಞಾನದ ಪವರ್ ಮತ್ತು ವಿಜ್ಞಾನ ಸ್ವಾರ್ಥಿ ಮತ್ತು ಸ್ವಚ್ಛಂದ ಬಳಕೆಗೆ ವಾತಾವರಣದ ಬಳಕೆಯನ್ನು ಬಳಸಿಕೊಳ್ಳುವ ಮತ್ತು ಎಲ್ಲರಿಗೂ ಒಂದು ಸಮಸ್ಯೆ ರಚಿಸಲು ಮನುಷ್ಯ ನೆರವಾಗಿದೆ.
Answered by meghanabhat
6

ಪರಿಸರ
ಪ್ರಕೃತಿ ಮನುಷ್ಯನ ಜೀವನಕ್ಕೆ ಏನ್ನೆಲ್ಲ ಕೊಟ್ಟಿಲ್ಲ. ಅಂತಹದರಲ್ಲಿ ಮನುಷ್ಯ ತನ್ನ ವೈಯಕ್ತಿಕ ಪ್ರಯೋಜನಕ್ಕಾಗಿ ಪರಿಸರದ ಮೇಲೆ ನಿರಂತರ ದಾಳಿ ನಡೆಸಿದ್ದಾನೆ. ಇಂತ ಪರಿಸ್ಥಿತಿ ಹೀಗೆ ಮುಂದುವರೆದರೆ ನಮ್ಮ ಸರ್ವನಾಶ ನಮ್ಮ ಕಣ್ಣೇದುರೆ ನಡೆಯಲಿದೆ. ಇದು ನಡೆಯಬಾರದೆಂದರೆ ಇಂದಿನಿಂದಲೆ ಪರಿಸರದ ಸಂರಕ್ಷಣೆ ಬಗ್ಗೆ ಕಾಳಜಿ ವಹಿಸುವುದು ಮುಖ್ಯ. ಪರಿಸರದ ಸಂರಕ್ಷಣೆಗಾಗಿ ನಮ್ಮ ಕೆಲಸ ಕಾರ್ಯಗಳನ್ನು ಬದಿಗೊತ್ತುವ ಅವಶ್ಯಕತೆ ಇಲ್ಲ. ನಮ್ಮ ದೈನಂದಿನ ಜೀವನದಲ್ಲಿ ಕೆಲವೊಂದು ಕ್ರಮಗಳನ್ನು ಅನುಸರಿಸಿದರೆ ಅದೇ ಪರಿಸರ ಉಳಿವಿಗೆ ಸಹಾಯಕವಾಗುತ್ತದೆ.ನಿಸರ್ಗದ ಜೊತೆ ಬೆರೆತು ಬಾಳಿದರೆ ಪರಿಸರದ ಮೇಲೆ ದುಷ್ಪರಿಣಾಮ ಬೀರುವ, ಪರಿಸರದ ಉಳಿವಿಗೆ ಪೂರಕವಾಗುವ ವಿಷಯಗಳ ಬಗ್ಗೆ ನಮ್ಮ ಸಾಮಾನ್ಯ ಜ್ಞಾನ ತಾನಾಗಿಯೇ ಬೆಳೆಯುತ್ತದೆ. ಆದರೆ ಅದು ಅಷ್ಟು ಸುಲಭವಲ್ಲ, ಆಧುನಿಕ ಜಗತ್ತಿನಲ್ಲಿ ತಂತ್ರಜ್ಞಾನದ ಆವಿಷ್ಕರದಿಂದ ಇಂದಿನ ಮಾನವನ ಜೀವನ ಹಾಗೂ ಚಟುವಟಿಕೆಗಳು ಅತ್ಯಂತ ಸಂಕೀರ್ಣವಾಗಿವೆ. ಇದರಿಂದ ಹೆಚ್ಚಿನ ಮನುಷ್ಯರು ಪ್ರಕೃತಿಯಿಂದ ದೂರಾಗಿ ವಿವಿಧ ಅನೈಸರ್ಗಿಕ ಚಟುವಟಿಕೆಗಳಲ್ಲಿ ಕಾಲಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ,ಮನುಷ್ಯನ ಉದಾಸೀನತೆ, ತಿಳಿಗೇಡಿತನದಿಂದ ನಿಸರ್ಗ ಬಸವಳಿಯುತ್ತಾ ಸಾಗುತ್ತಿದೆ, ಈ ಪ್ರಕ್ರಿಯೆಯಲ್ಲಿ ನಾವೆಲ್ಲರೂ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಭಾಗೀದಾರರು ಎಂಬುದು ಕೂಡ ನಮಗೆಲ್ಲರಿಗೂ ಈಗ ಚೆನ್ನಾಗಿ ಗೊತ್ತಾಗಿರುವ ಸತ್ಯ. ಈ ಬಗ್ಗೆ ಕಾಳಜಿ, ಚಿಂತೆ ಇರುವವರನ್ನೂ ಗಾಢವಾಗಿ ಕಾಡುತ್ತಿರುವ ಪ್ರಶ್ನೆ ಎಂದರೆ – ಈ ನಿಟ್ಟಿನಲ್ಲಿ ನಾವೇನು ಮಾಡಬಹುದು?

ಮಾನವನ ಸ್ವಾರ್ಥ ಹಾಗೂ ದುರಾಸೆಯ ಫಲವಾಗಿ ಕಾಡು ನಾಶವಾಗುತ್ತಿದ್ದು ಕಾಲ ಕಾಲಕ್ಕೆ ಮಳೆಯಾಗದೇ ಹವಾಮಾನ ವೈಪರೀತ್ಯವುಂಟಾಗಿ ಹಲವಾರು ಸಮಸ್ಯೆಗಳಿಗೆ ಸಿಕ್ಕಿ ಬಳಲುತ್ತಿರುವ ನಾವು ಈಗಲಾದರೂ ಎಚ್ಚೆತ್ತುಕೊಂಡು ಪರಿಸರ ಸಂರಕ್ಷಣೆಗೆ ಮುಂದಾಗದಿದ್ದರೆ ಮುಂದೆ ಭಾರೀ ಬೆಲೆಯನ್ನು ತೆರಬೇಕಾಗುತ್ತದೆ. ನಾವು ಉಸಿರಾಡುವ ಗಾಳಿ, ಕುಡಿಯುವ ನೀರು, ತಿನ್ನುವ ಆಹಾರ ಪದಾರ್ಥಗಳು ನಗರೀಕರಣ ಹಾಗೂ ಕೈಗಾರೀಕರಣದ ಫಲವಾಗಿ ಕಲುಷಿತವಾಗುತ್ತಿದ್ದು ನಮ್ಮ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಹವಾಮಾನ ವೈಪರೀತ್ಯದಿಂದ ವಾತಾವರಣವು ಏರುಪೇರಾಗಿ ಹಿಮ ಪರ್ವತಗಳು ಕರಗಿ ಹಲವಾರು ದ್ವೀಪ ರಾಷ್ಟ್ರಗಳು ಮುಳುಗಿ ಹೋಗುವ ಭೀತಿಯನ್ನು ಎದುರಿಸುತ್ತಿವೆ. ಅದ್ದರಿಂದ ಪರಿಸರದ ಸಂರಕ್ಷಣೆ ನಮ್ಮ ಆಧ್ಯ ಕರ್ತವ್ಯವಾಗಬೇಕು. ಮನೆಗೆರಡು ಮರ,

ಊರಿಗೊಂದು ತೋಪು ಎಂಬ ಹಿರಿಯರ ಧ್ಯೇಯವಾಕ್ಯವನ್ನು ಪ್ರಾಮಾಣಿಕವಾಗಿ ಅನುಷ್ಠಾನಗೊಳಿಸುವ ದಿಕ್ಕಿನಲ್ಲಿ ಧೃಡವಾದ ಹೆಜ್ಜೆಯನ್ನು ಹಾಕಬೇಕಾದ ಸಂದರ್ಭ ಎದುರಾಗಿದೆ. ಒಂದು ಮರವನ್ನು ಕಡಿದ ಜಾಗದಲ್ಲಿ 10 ಸಸಿಗಳನ್ನು ನೆಟ್ಟು ನೀರೆರೆದು ಪೋಷಿಸಿ ಬೆಳೆಸಿದರೆ ಮಾತ್ರ ಹವಾಮಾನ ವೈಪರೀತ್ಯವನ್ನು ತಡೆಯಬಹುದು. ಇಲ್ಲದಿದ್ದರೆ ಮನುಕುಲಕ್ಕೆ ಗಂಡಾಂತರ ತಪ್ಪಿದ್ದಲ್ಲ ಎಂದು ಎಚ್ಚರಿಸಿದ ಪ್ರೇಮಕುಮಾರಿ ಸಮಾಜದಲ್ಲಿ ವಾಸಿಸುವ ಪ್ರತಿಯೊಬ್ಬರೂ ಪರಿಸರ ಪ್ರೇಮವನ್ನು ಬೆಳೆಸಿಕೊಂಡು, ಮರಗಿಡಗಳನ್ನು ನೆಟ್ಟು ಬೆಳೆಸುವ ಪ್ರತಿಜ್ಞೆಯನ್ನು ಮಾಡುವ ಮೂಲಕ ಜೀವಸಂಕುಲಗಳ ಸಂರಕ್ಷಣೆಗೆ ಮುಂದಾಗಬೇಕು ಪರಿಸರ ಪ್ರೇಮಿ ಸಾಲು ಮರದ ತಿಮ್ಮಕ್ಕನ ಆದರ್ಶವನ್ನು ಇಂದಿ9ನ ಯುವಜನರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಪರಿಸರ ಪ್ರೇಮವನ್ನು ಮೆರೆಯಬೇಕು. ಗಿಡಮರಗಳು ಹಾಗೂ ಪರಿಸರದ ಸಂರಕ್ಷಣೆಯಿಂದ ಪರಿಸರ ಸಮತೋಲನವನ್ನು ಕಾಪಾಡುವ ಜೊತೆಗೆ ಕಾಲಕಾಲಕ್ಕೆ ಮಳೆಬೆಳೆಯಾಗಿ ನೆಮ್ಮದಿಯಿಂದ ಜೀವನ ನಡೆಸಲು ಸಾಧ್ಯವಿದೆ. ಕಾಡಿದ್ದರೆ ನಾಡು, ಕಾಲಕಾಲಕ್ಕೆ ಮಳೆಯಾಗುವುದರಿಂದ ರೈತನ ಬದುಕು ಹಸನಾಗುವ ಜೊತೆಗೆ, ಜೀವ ಸಂಕುಲದ ಸಂರಕ್ಷಣೆಯು ಸಾಧ್ಯವಾಗುತ್ತದೆ.

ಹೂವು ಮತ್ತು ಹಣ್ಣಿನ ಗಿಡ-ಮರಗಳನ್ನು ಬೆಳೆಸುವ ಜೊತೆಗೆ ಪಶು-ಪಕ್ಷಿ ಸಂಕುಲಕ್ಕೆ ಆಹಾರ ದೊರೆಯಲಿದೆ. ಕಾಡಿನ ನಾಶದಿಂದ ಆಹಾರದ ಕೊರತೆಯುಂಟಾಗಿ ನಾಡಿಗೆ ನುಗ್ಗಿ ದಾಂಧಲೆ ನಡೆಸುತ್ತಿರುವ ಕಾಡು ಪ್ರಾಣಿಗಳ ವಲಸೆಯನ್ನು ತಪ್ಪಿಸಿ ಜನಸಾಮಾನ್ಯರು ಯಾವುದೇ ಭಯ-ಭೀತಿಯಿಲ್ಲದಂತೆ ನೆಮ್ಮದಿಯ ಜೀವನವನ್ನು ನಡೆಸಬಹುದಾಗಿದೆ.

ಪರಿಸರದ ಸಂರಕ್ಷಣೆ ಬಗ್ಗೆ ಗಮನಿಸಬೇಕಾದ ಅಂಶಗಳು:-

ಜನಸಂಖ್ಯೆ - ಹೆಚ್ಚಳ-ಕಡಿತ ಹಾಗೂ ಅವರ ಒಟ್ಟಾರೆ ಬೇಡಿಕೆಯ ಮೇಲಿನ ಪರಿಣಾಮ
* ಆಹಾರ, ಕೃಷಿ - ಕೀಟನಾಶಕಗಳ ಬಳಕೆ, ಸಾವಯವ ಕೃಷಿಯ ಬೆಳವಣಿಗೆ, ಪ್ರಾಣಿಮೂಲ ಆಹಾರದಿಂದ ಪರಿಸರಕ್ಕೆ ಆಗುವ ಆಘಾತ * ಜನರು, ಸಂಘ-ಸಂಸ್ಥೆಗಳು – ಪರಿಸರಕ್ಕೆ ಅವರ ಕೊಡುಗೆಗಳು, ಪಾತ್ರ ಹಾಗೂ ಅವರ ನೈಜ ಉದ್ದೇಶಗಳು * ತ್ಯಾಜ್ಯ – ಉತ್ಪಾದನೆ, ಸಂಸ್ಕರಣೆ ಹಾಗೂ ವಿಲೇವಾರಿ

* ನೀರು – ಬಳಕೆಯ ಪ್ರಮಾಣ, ಮಳೆನೀರಿನ ಇಂಗುವಿಕೆಯ ಪ್ರಮಾಣ, ವಿವಿಧ ಮೂಲಗಳ ಸ್ಥಿತಿಗತಿ


* ಸ್ಥಳೀಯ ಸಂಸ್ಕೃತಿ, ಹಿರಿಯರ ಜೀವನಕ್ರಮ - ಅದರಲ್ಲಿರುವ ಒಳಿತು-ಕೆಡುಕುಗಳು (ಪರಿಸರದ ದೃಷ್ಟಿಯಿಂದ)
* ಇಂಧನ-ಶಕ್ತಿ – ಬಳಕೆಯ ಪ್ರಮಾಣ, ನವೀಕರಣಗೊಳ್ಳುವ ಮೂಲಗಳ ಶೇಕಡಾವಾರು ಕೊಡುಗೆ  ನೆಲ - ಬಳಕೆಯಲ್ಲಿ ಆಗುತ್ತಿರುವ ವ್ಯತ್ಯಾಸಗಳು – ಕಾಡು ಕೃಷಿಭೂಮಿಯಾಗುವುದು, ಕೃಷಿಭೂಮಿ ನಿವೇಶನಗಳಾಗುವುದು.

* ಆರ್ಥಿಕತೆ - ಏರಿಳಿತದಿಂದ ಜನರ ಜೀವನಶೈಲಿ, ಅವರ ಬೇಡಿಕೆಗಳು ಹಾಗೂ ಪರಿಸರದ ಮೇಲೆ ಆಗುವ ಪರಿಣಾಮ. * ಸ್ಥಳೀಯ ಪ್ರಾಣಿ-ಪಕ್ಷಿ-ಜಲಚರಗಳು – ಅವುಗಳ ಜೀವನಕ್ರಮ, ಅವುಗಳ ಉಳಿವಿಗೆ ಅವಶ್ಯವಾದ ಪರಿಸರ ಪರಿಸರ
 ರಕ್ಷಣೆಗಾಗಿ ನಾವು ಮಾಡಲೇಬೇಕಾದ ಸಂಗತಿಗಳು ಪುನರ್ ಬಳಕೆಯಂತ ವಸ್ತುಗಳನ್ನು ಸುಮ್ಮನೆ ಬಿಸಾಡಬೇಡಿ, ಮರುಬಳಕೆ ಮಾಡಿ. ನಿಮಗೆ ಬೇಡದಿದ್ದರೆ ಇತರರಿಗಾದರೂ ದಾನ ಮಾಡಿ. ತಿದಿನದ ಜೀವನದಲ್ಲಿ ಅಥವಾ ಸಮಾರಂಭಗಳ ಸಂದರ್ಭದಲ್ಲಿ ಸುಲಭದಲ್ಲಿ ಮಣ್ಣಾಗಿ ಹೋಗುವ ಪರಿಸರ ಸ್ನೇಹೀ ಉತ್ಪನ್ನಗಳನ್ನು ಬಳಸುವುದು.

 ಉದಾ: ಪ್ಲಾಸ್ಟಿಕ್ ಚೀಲದ ಬದಲು ಕಾಗದ ಅಥವಾ ಬಟ್ಟೆಯ ಚೀಲ, ಪ್ಲಾಸ್ಟರ್ ಆಫ್ ಪ್ಯಾರಿಸ್ ಬದಲು ಮಣ್ಣಿನ ಗಣೇಶ, ಪ್ಲಾಸ್ಟಿಕ್ ಗೋಣಿಗಳ ಬದಲು ಸೆಣಬಿನ ನಾರಿನ ಗೋಣಿ. ಎಸೆಯುವ ಸಂಸ್ಕೃತಿ’ಯ ಬದಲು ’ರಿಪೇರಿ ಸಂಸ್ಕೃತಿ’ಯನ್ನು ಅಳವಡಿಸಲು ಸಾಧ್ಯವೋ ಎಂಬುದನ್ನು ನೋಡಿ. ನೆಯಲ್ಲಿಯೇ ಜೈವಿಕ, ಹಸಿ ತ್ಯಾಜ್ಯಗಳ ಸಂಸ್ಕರಣೆ ಮಾಡಿ (ಉದಾ: ಅಡುಗೆಮನೆಯ ಆಹಾರ ತ್ಯಾಜ್ಯ, ಉದ್ಯಾನವನದ ಹಸಿರು ತ್ಯಾಜ್ಯ).

 ಇದರಿಂದ ನೀವು ಮನೆಯಲ್ಲಿಯೇ ಪರ್ಯಾಯ ಇಂಧನ ಅಥವಾ ಗೊಬ್ಬರ ತಯಾರಿಸಬಹುದು, ಬೀದಿಯಲ್ಲಿರುವ ದನಗಳು, ನಾಯಿಗಳು ಪ್ಲಾಸ್ಟಿಕ್ ತಿನ್ನುವುದನ್ನೂ ತಪ್ಪಿಸಬಹುದು. ಇದನ್ನು ಅಪಾರ್ಟ್‍ಮೆಂಟಿನಲ್ಲಿರುವವರೂ ಮಾಡಬಹುದು.ಅಪಾಯಕಾರಿ ತ್ಯಾಜ್ಯಗಳನ್ನು ಮಕ್ಕಳ ಕೈಗೆ ಸಿಗದಂತೆ ಸಂಗ್ರಹಿಸಿ ಜಾಗ್ರತೆಯಾಗಿ ವಿಲೇವಾರಿ ಮಾಡಿ. ಉದಾ: ಟ್ಯೂಬ್‍ಲೈಟುಗಳು, ಸಿ.ಎಫ್.ಎಲ್. ಬಲ್ಬುಗಳು, ಇಲೆಕ್ಟ್ರಾನಿಕ್ ಉಪಕರಣಗಳು ಅಥವಾ ಬಿಡಿಭಾಗಗಳು.

ವಿಂಗಡನೆ ಮಾಡಿ ವಿಲೇವಾರಿ ಮಾಡುವ ಪ್ರಬುದ್ಧ ವ್ಯವಸ್ಥೆ ಇಲ್ಲದಿದ್ದಲ್ಲಿ ಅದಕ್ಕೋಸ್ಕರ ಒತ್ತಾಯಿಸಿ, ವಿಂಗಡನೆ ಮಾಡುವುದು ನಿಮ್ಮ ಜವಾಬ್ದಾರಿ, ಆದರೆ ಅದರ ಮುಂದಿನ ವ್ಯವಸ್ಥೆಯನ್ನು ಕೇಳುವುದು ನಿಮ್ಮ ಹಕ್ಕು.
ಸಾಧ್ಯವಾದಾಗಲೆಲ್ಲಾ ರಾಸಾಯನಿಕ ಮುಕ್ತ, ಸಾವಯವ ಹಾಗೂ ಸಸ್ಯಮೂಲದ ಆಹಾರ ಪದಾರ್ಥಗಳನ್ನೇ ಖರೀದಿಸಿರಿ. ಇದರಿಂದ ಪರಿಸರಕ್ಕೂ ನಿರಾಳ, ನಿಮ್ಮ ಆರೋಗ್ಯಕ್ಕೂ ವರದಾನ

 







Attachments:
Similar questions