essay on jogfalls in kannada
Answers
Answer:
ಜೋಗ ಅಥವಾ 'ಗೇರುಸೊಪ್ಪಿನ ಜಲಪಾತ' ಪ್ರಪಂಚದ ಪ್ರಸಿದ್ಧ ಜಲಪಾತಗಳಲ್ಲೊಂದು. ಇದು ಭಾರತದ ಎರಡನೆಯ ಅತಿ ಎತ್ತರದ ಜಲಪಾತ.[೧][೨] ಇದು ಕರ್ನಾಟಕ ರಾಜ್ಯದ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ದಟ್ಟವಾದ ಕಾಡು ಹಾಗು ಗುಡ್ಡಗಳಿಂದ ಆವೃತ್ತವಾದ ಸ್ಥಳದಲ್ಲಿದೆ. ಜೋಗ ಜಲಪಾತವನ್ನು ವೀಕ್ಷಿಸುವ ತಾಣ ಜೋಗವು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿದೆ. ಇದು ಒಂದು ಪ್ರಮುಖ ಪ್ರವಾಸಿ ತಾಣ. ಜೋಗ ಜಲಪಾತವು ಸುಮಾರು ೨೯೨ ಮೀ ಎತ್ತರದಿಂದ ಭೋರ್ಗರೆಯುತ್ತಾ ಶರಾವತಿ ನದಿಯು ನಾಲ್ಕು ಸೀಳಾಗಿ ಧುಮುಕುತ್ತದೆ. ವೈಭವದಿಂದ ಅವ್ಯಾಹತವಾಗಿ ಧುಮಕುವ ರಾಜ, ಜೋರಾಗಿ ಆರ್ಭಟಿಸುತ್ತ ಹಲವಾರು ಭಾರಿ ಚಿಮ್ಮುತ್ತ ಧುಮಕುವ ರೋರರ್, ಬಳಕುತ್ತಾ ಜಾರುವ ರಾಣಿ(ಲೇಡಿ) ಮತ್ತು ರಭಸದಿಂದ ಹಲವಾರು ಬಂಡೆಗಳನ್ನು ಚಿಮ್ಮುತ್ತಾ ನುಗ್ಗುವ ರಾಕೆಟ್ ಈ ನಾಲ್ಕು ಜಲ ಭಾಗಗಳಾಗಿವೆ. ಮಳೆಗಾಲದಲ್ಲಿ ಅತ್ಯ೦ತ ರಮಣೀಯರೂಪ ತೊಡುವ ಈ ಜಲಪಾತ ಬಿಳಿ ಮೋಡಗಳ ಹಿಂದೆ ಕಣ್ಣಾಮುಚ್ಚಾಲೆ ಆಡುತ್ತ ನೋಡುಗರ ಕಣ್ಮನ ಸೆಳೆಯುವುದು. ಲಿಂಗನಮಕ್ಕಿ ಜಲಾಶಯದ ನಿರ್ಮಾಣದ ನಂತರ ಜೋಗ ತನ್ನ ಮೊದಲಿನ ಸೌಂದರ್ಯ ಹಾಗು ವೈಭವವನ್ನು ಕಳೆದುಕೊಂಡಿದೆ ಎಂದು ಅನೇಕರು ಹೇಳುತ್ತಾರೆ.
Answer:
Explanಜೋಗ ಅಥವಾ 'ಗೇರುಸೊಪ್ಪಿನ ಜಲಪಾತ' ಪ್ರಪಂಚದ ಪ್ರಸಿದ್ಧ ಜಲಪಾತಗಳಲ್ಲೊಂದು. ಇದು ಭಾರತದ ಎರಡನೆಯ ಅತಿ ಎತ್ತರದ ಜಲಪಾತ.[೧][೨] ಇದು ಕರ್ನಾಟಕ ರಾಜ್ಯದ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ದಟ್ಟವಾದ ಕಾಡು ಹಾಗು ಗುಡ್ಡಗಳಿಂದ ಆವೃತ್ತವಾದ ಸ್ಥಳದಲ್ಲಿದೆ. ಜೋಗ ಜಲಪಾತವನ್ನು ವೀಕ್ಷಿಸುವ ತಾಣ ಜೋಗವು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿದೆ. ಇದು ಒಂದು ಪ್ರಮುಖ ಪ್ರವಾಸಿ ತಾಣ. ಜೋಗ ಜಲಪಾತವು ಸುಮಾರು ೨೯೨ ಮೀ ಎತ್ತರದಿಂದ ಭೋರ್ಗರೆಯುತ್ತಾ ಶರಾವತಿ ನದಿಯು ನಾಲ್ಕು ಸೀಳಾಗಿ ಧುಮುಕುತ್ತದೆ. ವೈಭವದಿಂದ ಅವ್ಯಾಹತವಾಗಿ ಧುಮಕುವ ರಾಜ, ಜೋರಾಗಿ ಆರ್ಭಟಿಸುತ್ತ ಹಲವಾರು ಭಾರಿ ಚಿಮ್ಮುತ್ತ ಧುಮಕುವ ರೋರರ್, ಬಳಕುತ್ತಾ ಜಾರುವ ರಾಣಿ(ಲೇಡಿ) ಮತ್ತು ರಭಸದಿಂದ ಹಲವಾರು ಬಂಡೆಗಳನ್ನು ಚಿಮ್ಮುತ್ತಾ ನುಗ್ಗುವ ರಾಕೆಟ್ ಈ ನಾಲ್ಕು ಜಲ ಭಾಗಗಳಾಗಿವೆ. ಮಳೆಗಾಲದಲ್ಲಿ ಅತ್ಯ೦ತ ರಮಣೀಯರೂಪ ತೊಡುವ ಈ ಜಲಪಾತ ಬಿಳಿ ಮೋಡಗಳ ಹಿಂದೆ ಕಣ್ಣಾಮುಚ್ಚಾಲೆ ಆಡುತ್ತ ನೋಡುಗರ ಕಣ್ಮನ ಸೆಳೆಯುವುದು. ಲಿಂಗನಮಕ್ಕಿ ಜಲಾಶಯದ ನಿರ್ಮಾಣದ ನಂತರ ಜೋಗ ತನ್ನ ಮೊದಲಿನ ಸೌಂದರ್ಯ ಹಾಗು ವೈಭವವನ್ನು ಕಳೆದುಕೊಂಡಿದೆ ಎಂದು ಅನೇಕರು ಹೇಳುತ್ತಾರೆ.ation: