Essay on ' ಪರಿಸರ ಮಾಲಿನ್ಯ '
(KANNADA)
Answers
Answer:
ನಮ್ಮ ಸುತ್ತಮುತ್ತಲಿನ ಪ್ರದೇಶವೇ ಪರಿಸರ. ಈ ಪರಿಸರವ ಮರ ಗಿಡಗಳು ಹಾಗೂ ಪ್ರಾಣಿ ಪಕ್ಷಿಗಳಿಂದ ಕೂಡಿದೆ.ಇದರೊಂದಿಗೆ ಮಾನವನು ಅನ್ಯೋನ್ಯತೆಯಿಂದ ಜೀವಿಸುತಿದ್ದಾನೆ.ಇವೆಲ್ಲದರ ನಡುವೆ ಮಾನವನು ತನ್ನನ ಸ್ವಾರ್ಥತೆಯನ್ನು ತೋರಿಸುತ್ತಾನೆ.ಇದರಿಂದಾಗಿ ಪರಿಸರವು ಹಲವಾರು ತೊಂದರೆಗೆ ಒಳಗಾಗಿದೆ.ಇದರಲ್ಲಿ ಪರಿಸರವೂ ಎದುರಿಸುವ ಮೂರು ಮುಖ್ಯವಾದ ತೊಂದರೆಗಳೆಂದರೆ ವಾಯು ಮಾಲಿನ್ಯ , ಜಲ ಮಾಲಿನ್ಯ ಮತ್ತು ಶಬ್ದ ಮಾಲಿನ್ಯ.
ಇದರ ಮುಖ್ಯ ಕಾರಣವೆಂದರೆ ಹೆಚ್ಚಾಗುತ್ತಿರುವ ಜನಸಂಖ್ಯೆ.ಜನರು ಬಳಸುವ ವಾಹನಗಳಿಂದ ಕೆಟ್ಟ ಹೊಗೆ ಹೊರಬರುತ್ತದೆ.ಕಾರ್ಖಾನೆಗಳಿಂದ ಹೊರಬರುವ ರಾಸಾಯನಿಕ ಹೊಗೆ ವಾಯು ಮಾಲಿನ್ಯಕ್ಕೆ ಕಾರಣವಾಗುತ್ತದೆ.ಮಾನವನ ಇಂದಿನ ದಿನಚರಿಕೆಯಿಂದ ಹಾಗೂ ಕಾರ್ಖಾನೆಗಳಿಂದ ಹೊರ ಬಿಡುವ ಕಸಗಳು, ನೀರನ್ನು
Explanation:
ಪರಿಸರವನ್ನು ಕಲುಷಿತಗೊಳಿಸುವ,ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ ಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು.ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು. ಮಾಲಿನ್ಯವನ್ನು ಪ್ರತ್ಯಕ್ಷ ಮಾಲಿನ್ಯ ಹಾಗೂ ಪರೋಕ್ಷ ಮಾಲಿನ್ಯ ಎಂದು ಎರಡು ವಿಭಾಗಗಳಾಗಿ ವಿಂಗಡಿಸಬಹುದಾಗಿದೆ. ಬ್ಲಾಕ್‌ಸ್ಮಿತ್ ಇನ್ಸ್ಟಿಟ್ಯೂಟ್ಎಂಬ ಸಂಸ್ಥೆಯು ಪ್ರತಿ ವರ್ಷ ಪ್ರಪಂಚದ ಅತಿಹೆಚ್ಚು ಮಾಲಿನ್ಯಕ್ಕೊಳಗಾದ ಪ್ರದೇಶಗಳ ಪಟ್ಟಿ ಪ್ರಕಟಿಸುತ್ತದೆ. 2007ರ ಪ್ರಕಟಣೆಯಲ್ಲಿ ಪ್ರಕಟವಾದ ಪಟ್ಟಿಯಲ್ಲಿದ್ದ ಟಾಪ್ 10 ಮಾಲಿನ್ಯ ಪ್ರದೇಶಗಳು ಅಜರ‍್‌ಬೈಜಾನ್, ಚೀನಾ, ಭಾರತ, ಪೆರು, ರಷ್ಯಾ, ಉಕ್ರೇನ್ ಮತ್ತು ಜಾಂಬಿಯಾ ಪ್ರದೇಶದಲ್ಲಿವೆ.
Thank you......❣️