India Languages, asked by farzanaroni4586, 11 months ago

Essay on kannada matha in kannada

Answers

Answered by Anonymous
12

ಮತದಾನವು ಜನತೆಯು ಯಾವುದಾದರೂ ವಿಷಯ, ಅಥವಾ ಅಭ್ಯರ್ಥಿಗಳ ಬಗ್ಗೆ ತಮ್ಮ ನಿರ್ಣಯಗಳನ್ನು ಸೂಚಿಸಲು ಅನುವು ಮಾಡಿಕೊಡುವ ಒಂದು ಪ್ರಕ್ರಿಯೆ. ಜನತಂತ್ರಗಳ ಚುನಾವಣೆಗಳಲ್ಲಿ ಮತದಾನ ಪ್ರಮುಖ ಅಂಗ. ಮತದಾನ ಮಾಡುವುದು ಪ್ರತಿಯೊಬ್ಬ ಭಾರತೀಯರ ಹಕ್ಕು ಮತ್ತು ಕರ್ತವ್ಯ. ಮತದಾನ ಮಾಡಲು ಭಾರತೀಯ ಪ್ರಜೆ ಹದಿನೆಂಟು ವಯಸ್ಸಿನವನಾಗಿರಬೇಕು ಅಥವಾ ಹದಿನೆಂಟಕ್ಕು ಹೆಚ್ಚಿನ ವಯಸ್ಸಾಗಿರಬೇಕು.ಮತದಾನವನ್ನು ನಾಲ್ಕು ರೀತಿಯಲ್ಲಿ ವಿಂಗಡಿಸಬಹುದು, ಅವುಗಳು, ಫೈರ್ ಮತದಾನ, ನೆಗಟೀವ್ ಮತದಾನ, ಪ್ರಾಕ್ಸಿ ಮತದಾನ, ಆಂಟಿ ಮತದಾನ. ಮತದಾನದ ಸಮಯದಲ್ಲಿ ಪಕ್ಷಪಾತ ನಡೆಯಲು ಅವಕಾಶ ನೀಡಬಾರದು. ಜಾತಿ, ಧರ್ಮ, ಹಣ, ಅಂತಸ್ತು ಇವುಗಳು ಯಾವುದೂ ಜನರ ಮನಸ್ಸಿಗೆ ಬರಕೂಡದು. [೧] ಪ್ರಜಾಪ್ರಭುತ್ವದಲ್ಲಿ ಮತದಾನ ಹಾಗೂ ಚುನಾವಣೆ ಒoದೇ ನಾಣ್ಯದ ಎರಡು ಮುಖಗಳಿದ್ದಂತೆ.

Answered by psupriya789
5

ANSWER

ಕರ್ನಾಟಕ ರಾಜ್ಯೋತ್ಸವ :-

ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ.ಮೈಸೂರು ರಾಜ್ಯವು(ಈಗಿನ ಕರ್ನಾಟಕ) 1956ರ ನವೆಂಬರ್ 1ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ.

ಕರ್ನಾಟಕ ಏಕೀಕರಣ ಚಳುವಳಿಯನ್ನು1905ರಲ್ಲಿ ಪ್ರಾರಂಭಿಸಿದರು. 1950ರಲ್ಲಿ, ಭಾರತವು ಗಣರಾಜ್ಯವಾದ ನಂತರ ಭಾರತದ ವಿವಿಧ ಪ್ರಾಂತ್ಯಗಳು, ಭಾಷೆಗಳ ಆಧಾರದ ಮೇಲೆ ರಾಜ್ಯಗಳಾಗಿ ರೂಪು ಗೊಂಡವು. ಈ ಹಿಂದೆ ರಾಜರ ಆಳ್ವಿಕೆಯಲ್ಲಿ ದಕ್ಷಿಣ ಭಾರತದಲ್ಲಿ ಹಲವಾರು ಸಂಸ್ಥಾನಗಳನ್ನು ಒಳಗೊಂಡಂತೆ ರಾಜ್ಯಗಳು ರೂಪುಗೊಂಡಿದ್ದವು. ಕನ್ನಡ ಮಾತನಾಡುವ ಪ್ರಾಂತ್ಯಗಳು ಸೇರಿ, ಮೈಸೂರು ರಾಜ್ಯವು ಉದಯವಾಯಿತು.

1956 ರ ನವೆಂಬರ್ 1 ರಂದು, ಮದ್ರಾಸ್, ಬಾಂಬೆ, ಹೈದರಬಾದ್ ಪ್ರಾಂತ್ಯದ ಕನ್ನಡ ಮಾತನಾಡುವ ಪ್ರದೇಶಗಳು ವಿಲೀನಗೊಂಡು ಮೈಸೂರು ರಾಜ್ಯ ಉದಯವಾಯಿತು ಹಾಗೂ ಉತ್ತರ ಕರ್ನಾಟಕ, ಮಲೆನಾಡು ಮತ್ತು ಹಳೆಯ ಮೈಸೂರು ಎಂಬುದಾಗಿ ಹೊಸದಾಗಿ ರೂಪು ಗೊಂಡ ಮೈಸೂರು ರಾಜ್ಯವನ್ನು ಮೂರು ಪ್ರದೇಶಗಳಲ್ಲಿ ಗುರುತಿಸಲಾಯಿತು.

ಹೊಸದಾಗಿ ಏಕೀಕೃತಗೊಂಡ ರಾಜ್ಯದ ಆರಂಭದಲ್ಲಿ ಹೊಸ ಘಟಕದ ಕೋರ್ ರೂಪುಗೊಂಡು ಮುಂಚಿನ ರಾಜ್ಯದ ಹೆಸರು ಇರಲೆಂದು "ಮೈಸೂರು" ಹೆಸರನ್ನು ಉಳಿಸಿಕೊಂಡರು.

ರಾಜ್ಯೋತ್ಸವ ದಿನ ಎಲ್ಲಾ ಕರ್ನಾಟಕ ರಾಜ್ಯದ ಮಹನ್ ಆನಂದ ಮತ್ತು ಚಟುವಟಿಕೆಯಿಂದ ಆಚರಿಸಲಾಗುತ್ತದೆ. ಕೆಂಪು ಮತ್ತು ಹಳದಿ ಕನ್ನಡ ಧ್ವಜಗಳು ರಾಜ್ಯದ ಎಲ್ಲೆಡೆ ಹಾರಿಸಲ್ಪಡುತ್ತವೆ. ಕನ್ನಡ ರಾಜ್ಯಗೀತೆ ("ಜಯ ಭಾರತ ಜನನನಿಯ ತನುಜಾತೆ")ಯನ್ನು ಹಾಡಲಾಗು ತ್ತದೆ. ಸರ್ಕರಿ ಕಚೇರಿ ಮತ್ತು ಹಲವಾರು ಪ್ರಮುಖ ಪ್ರದೇಶಗಳಲ್ಲಿ ವಾಹನಗಳ ಮೇಲೆ ಭುವನೇಶ್ವರಿ ಚಿತ್ರವನ್ನಿಟ್ಟು ಮೆರವಣಿಗೆ ನಡೆಸಲಾಗುತ್ತದೆ.

ರಾಜ್ಯೋತ್ಸವವನ್ನು ಕರ್ನಾಟಕದಲ್ಲಿರುವ ಬಹುತೇಕ ಹಿಂದೂಗಳು, ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರು ಧರ್ಮಬೇಧವಿಲ್ಲದೆ ಆಚರಿಸುತ್ತಾರೆ ಹಾಗೂ ಸರ್ಕಾರ ಮೆರವಣಿಗೆ ಆಟೋ ರಿಕ್ಷಾಗಳು ಮತ್ತು ಇತರೆ ವಾಹನಗಳು ಕನ್ನಡ ಧ್ವಜದ ಬಣ್ಣಗಳಾದ ಕೆಂಪು ಮತ್ತು ಹಳದಿ ವರ್ಣಗಳ ಬಾವುಟ ದೊಂದಿಗೆ ಅಲಂಕರಿಸಲಾಗಿರುತ್ತವೆ. ರಾಜ್ಯ ಸರ್ಕಾರ ಕರ್ನಾಟಕ ರಾಜ್ಯೋತ್ಸವದ ದಿನ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಗೆ ಪ್ರಶಸ್ತಿ ಪ್ರಕಟ ಪಡಿಸಲಾಗುತ್ತದೆ.

ರಾಜ್ಯೋತ್ಸವದ ಪ್ರಯುಕ್ತ ಕರ್ನಾಟಕ ಸರ್ಕಾರದ ವತಿಯಿಂದ ರಾಜ್ಯೋತ್ಸವ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವಿಶ್ವದಾದ್ಯಂತ ಹಮ್ಮಿಕೊಳ್ಳಲಾಗುತ್ತದೆ. ರಾಜ್ಯದ ಮುಖ್ಯಮಂತ್ರಿ ಸಾಧಕರಿಗೆ ಈ ಪ್ರಶಸ್ತಿಯನ್ನು ವಿತರಿಸುತ್ತಾರೆ.

ಕರ್ನಾಟಕದಲ್ಲಿನ ಇನ್ನಿತರ ಪ್ರದೇಶಗಳಾದ ಮುಂಬಯಿ, ದೆಹಲಿ ಮುಂತಾದ ಕಡೆಯು ಕರ್ನಾಟಕ ರಾಜ್ಯೋತ್ಸವ ಆಚರಿಸಲಾಗುತ್ತದೆ. ಇದಲ್ಲದೆ ಗುರಗಾಂವ್ ಮತ್ತು ಚೆನೈ, ಸಾಗರೋತ್ತರದಲ್ಲಿ ಕನ್ನಡ ಸಂಸ್ಥೆ, ಅಮೇರಿಕಾದ, ಸಿಂಗಾಪುರ್, ದುಬೈ , ಮಸ್ಕಟ್, ದಕ್ಷಿಣ ಕೊರಿಯಾ ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್ ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ಮೊದಲಾದ ಕಡೆಗಳಲ್ಲಿ ನೆಲೆಸಿರುವ ಕನ್ನಡಿಗರು ಕರ್ನಾಟಕ ರಾಜ್ಯೋತ್ಸವ ಆಚರಿಸುತ್ತಾರೆ.

ನವೆಂಬರ್ 11 ರಂದು ಅಧಿಕೃತವಾಗಿ ಕನ್ನಡ ರಾಜ್ಯೋತ್ಸವವು ಆಚರಣೆಯಾದರೂ, ನವೆಂಬರ್ ತಿಂಗಳ ಮೊದಲ ದಿನ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ನವೆಂಬರ್1 ಸಾರ್ವಜನಿಕ ರಜೆ ಇರುತ್ತದೆ. ಈ ದಿನಗಳಲ್ಲಿ ಕನ್ನಡ ಬಾವುಟ ಸರ್ಕಾರದ ಪ್ರಮುಖ ಕಛೇರಿಯ ಮೇಲೆ ಎಲ್ಲೆಲಿಯು ಹಾರಾಡುತ್ತಿರುತ್ತದೆ.

ಕನ್ನಡ ರಾಜ್ಯೋತ್ಸವ  ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ.

MARK AS BRAINLIEST

Similar questions