essay on Kudalasangama in Kannada
Answers
hey
wait I'll ans ur question...
ಕೂಡಲ ಸಂಗಮವು ಬಸವಣ್ಣನವರ ಐಕ್ಯ ಸ್ಥಳವಾಗಿದ್ದು, ಲಿಂಗಾಯತ ಪಂಗಡದವರಿಗೆ ಪ್ರಮುಖ ಪುಣ್ಯಕ್ಷೇತ್ರವಾಗಿದೆ. ಬಸವಣ್ಣನವರು ಚಿಕ್ಕ ವಯಸ್ಸಿನಲ್ಲಿ ಇಲ್ಲಿಗೆ ಬಂದು ಈಶಾನ್ಯ ಗುರುಗಳೆಂದು ಖ್ಯಾತರಾಗಿರುವ ಪರಮಪೂಜ್ಯ ಜಾತವೇದ ಮುನಿಗಳಿಂದ ಶಿಕ್ಷಣ ಮತ್ತು ಮಾರ್ಗ ದರ್ಶನ ಪಡೆದರು. ಇಲ್ಲಿ ಕೃಷ್ಣಾ ನದಿ ಮತ್ತು ಮಲಪ್ರಭಾ ನದಿ ವಿಲೀನವಾಗಿ ಪೂರ್ವ ದಿಕ್ಕಿನಲ್ಲಿ ಆಂಧ್ರ ಪ್ರದೇಶ ರಾಜ್ಯದ ಶ್ರೀಶೈಲದ(ಇನ್ನೊಂದು ಪುಣ್ಯ ಕ್ಷೇತ್ರ) ಕಡೆಗೆ ಹರಿಯುತ್ತದೆ. ಕರ್ನಾಟಕ ಸರಕಾರವು ಇದನ್ನು ಪ್ರೇಕ್ಷಣೀಯ ಸ್ಥಳವನ್ನಾಗಿ ಅಭಿವೃದ್ಧಿಗೊಳಿಸಿದೆ. ಕೂಡಲಸಂಗಮ ಅಭಿವೃದ್ಧಿ ಪ್ರಾಧಿಕಾರವು ಈ ಪುಣ್ಯಸ್ಥಳದ ನಿರ್ವಹಣೆಯನ್ನು ನೋಡಿಕೊಳ್ಳುತ್ತದೆ....
ಇಲ್ಲಿನ ಪ್ರಮುಖ ಪ್ರವಾಸ ಸ್ಥಳಗಳು ಇಂತಿವೆ:
ಚಾಲುಕ್ಯ ಶೈಲಿಯಲ್ಲಿರುವ ಸಂಗಮನಾಥ ದೇವಾಲಯ
ಬಸವೇಶ್ವರನ ಐಕ್ಯ ಲಿಂಗ
ಬಸವ ಧರ್ಮ ಪೀಠದ ಮಹಾಮನೆ ಆವರಣ
ಪೂಜಾವನ
ಬಸವ ಗೋಪುರ/ಬಸವ ಅಂತರರಾಷ್ಟ್ರೀಯ ಕೇಂದ್ರ
ಸಭಾಭವನ. ೬೦೦೦ ಜನರಿಗೆ ಸ್ಥಳಾವಕಾಶ ಇರುವ ಈ ಸಭಾಂಗಣದ ೪ ದ್ವಾರಗಳನ್ನು ಗಂಗಾಂಬಿಕೆ, ನೀಲಾಂಬಿಕೆ, ಚನ್ನಬಸವಣ್ಣ ಮತ್ತು ಅಕ್ಕ ನಾಗಮ್ಮ ಎಂದು ಹೆಸರಿಸಲಾಗಿದೆ.
ವಸ್ತು ಸಂಗ್ರಹಾಲಯ - ಬಸವಾದಿ ಶರಣರ ಕಾಲದ ಶಿಲ್ಪಗಳು ಮತ್ತು ಕರ್ನಾಟಕದ ಇತಿಹಾಸಕ್ಕೆ ಸಂಬಂಧಪಟ್ಟ ವಸ್ತುಗಳ ಸಂಗ್ರಹ.
ಕೂಡಲ ಸಂಗಮ ಬಾಗಲಕೋಟೆ ಜಿಲ್ಲೆಯ ಆಲಮಟ್ಟಿ ಅಣೆಕಟ್ಟಿನಿಂದ ಸುಮಾರು ೩೫ ಕಿ.ಮಿ.ದೂರದಲ್ಲಿದೆ. ಇದು ಬಸವಣ್ಣನವರ ಐಕ್ಯ ಸ್ಥಳವಾಗಿದ್ದು, ಲಿಂಗಾಯತ ಧರ್ಮದ ಪ್ರಮುಖ ಕ್ಷೇತ್ರವಾಗಿದೆ. ಬಸವಣ್ಣನವರು ಚಿಕ್ಕ ವಯಸ್ಸಿನಲ್ಲಿ ಇಲ್ಲಿಗೆ ಬಂದು ಈಶಾನ್ಯ ಗುರುಗಳೆಂದು ಖ್ಯಾತರಾಗಿರುವ ಪರಮಪೂಜ್ಯ ಜಾತವೇದ ಮುನಿಗಳಿಂದ ಶಿಕ್ಷಣ ಮತ್ತು ಮಾರ್ಗ ದರ್ಶನ ಪಡೆದರು. ಇಲ್ಲಿ ಕೃಷ್ಣ ನದಿ ಮತ್ತು ಮಲಪ್ರಭಾ ನದಿ ವಿಲೀನವಾಗಿ ಪೂರ್ವ ದಿಕ್ಕಿನಲ್ಲಿ ಆಂಧ್ರ ಪ್ರದೇಶ ರಾಜ್ಯದ ಶ್ರೀಶೈಲದ (ಇನ್ನೊಂದು ಕ್ಷೇತ್ರ) ಕಡೆಗೆ ಹರಿಯುತ್ತದೆ.
ಕೂಡಲ ಸಂಗಮ ಸುಕ್ಷೇತ್ರಸಂಪಾದಿಸಿ
ಓಂ ಶ್ರೀ ಗುರು ಬಸವ ಲಿಂಗಾಯ ನಮ: ಕೂಡಲ ಸಂಗಮ ಸುಕ್ಷೇತ್ರವು ಹಿನ್ನೆಲೆಯನ್ನೊಳಗೊಂಡ ಸುಪ್ರಸಿದ್ಧ ಸಂಗಮೇಶ್ವರ ದೇವಾಲಯವನ್ನು ಹೊಂದಿದ ಧಾರ್ಮಿಕ ಸ್ಥಾನ, ಕೃಷ್ಣಾ-ಮಲಪ್ರಭಾ ನದಿಗಳ ಸಂಗಮದಿಂದಾಗಿ ಇದೀಗ ಬಸವ ಸಾಗರ ಜಲಾಶಯದ ನಿರ್ಮಾಣದಿಂದಾಗಿ ಪ್ರಾಕೃತಿಕ ಚೆಲುವಿನಿಂದ ಶೋಭಿಸುತ್ತಿರುವ ಸುಂದರ ತಾಣ. ಚಿನ್ನಕ್ಕೆ ಸುವಾಸನೆ ಬಂದಂತೆ ಇಂತಹ ಕ್ಷೇತ್ರದ ಮಹಿಮೆ ವಿಶ್ವವಿಖ್ಯಾತಿಯನ್ನು ಹೊಂದುವಂತಾಗಿರುವು ವಿಶ್ವಗುರು ಬಸವಣ್ಣನವರ ಪಾದ ಸ್ಪರ್ಶದಿಂದಾಗಿ
"ಮಹಾಮಹಿಮ ಸಂಗನ ಬಸವಣ್ಣನು ಪಾದವಿಟ್ಟ ಅವಿಮುಕ್ತ ಕ್ಷೇತ್ರ" ಎಂದು ಜಗನ್ಮಾತೆ ಅಕ್ಕ ಮಹಾದೇವಿ ನುಡಿದ ಪ್ರಕಾರ ಕೂಡಲ ಸಂಗಮವು ಬಸವಣ್ಣನವರ ವಿದ್ಯಾಭೂಮಿ, ತಪೋಸ್ಥಾನ, ಐಕ್ಯಕ್ಷೇತ್ರವಾಗಿ ಇಂದು ಪುಣ್ಯಭೂಮಿಯಾಗಿ ಕಂಗೊಳಿಸುತ್ತಿದೆ. ಮುಸಲ್ಮಾನರಿಗೆ ಮೆಕ್ಕಾ, ಸಿಖ್ಖರಿಗೆ ಅಮೃತಸರ, ಬೌದ್ಧರಿಗೆ ಬುದ್ಧಗಯೆ ಮಹತ್ವದ ಧರ್ಮಕ್ಷೇತ್ರಗಳಾದಂತೆ ಬಸವ ಧರ್ಮೀಯರಾದ ಲಿಂಗಾಯತರಿಗೆ ಕೂಡಲ ಸಂಗಮವೇ ಧರ್ಮಕ್ಷೇತ್ರ.
ಕೂಡಲ ಸಂಗಮವು ಕರ್ನಾಟಕದ ಪ್ರಮುಖ ಪ್ರವಾಸಿ ತಾಣ. ರಾಷ್ಟ್ರೀಯ ಹೆದ್ದಾರಿ ನಂ.13ರಿಂದ ರಸ್ತೆ ಸಂಪರ್ಕವಿದೆ. ಆದರೆ, ನೇರವಾಗಿ ರೈಲು ಸಂಪರ್ಕ ಇಲ್ಲ. ರೈಲಿನ ಮೂಲಕ ಬರಬೇಕಿದ್ದರೆ ಬಾಗಲಕೋಟೆ, ಬಾದಾಮಿ, ಆಲಮಟ್ಟಿಗೆ ಬಂದು ಅಲ್ಲಿಂದ ರಸ್ತೆ ಮಾರ್ಗವಾಗಿ ಬರಬೇಕು. ಇಲ್ಲಿ ತಂಗಲು ಯಾತ್ರಿ ನಿವಾಸದಲ್ಲಿ 50 ಕೊಠಡಿ, 15 ಡಾರ್ಮೆಟರಿ ಇವೆ. ಸರ್ಕಾರಿ, ಪ್ರಾಧಿಕಾರದ ಅತಿಥಿಗೃಹ, ಉಪಹಾರ ಗೃಹಗಳಿವೆ. ಮಧ್ಯಾಹ್ನ ಮತ್ತು ರಾತ್ರಿ ದಾಸೋಹದ ವ್ಯವಸ್ಥೆ ಇದ್ದು, ಪ್ರವಾಸಿಗರ ನೆರವಿಗಾಗಿ ಮಾಹಿತಿ ಕೇಂದ್ರ ಸಹ ಇದೆ.
ಈಗ ಕೂಡಲಸಂಗಮವು ಅಂತರರಾಷ್ಟ್ರೀಯ ಬಸವ ಕೇಂದ್ರವಾಗಿ ಹೊರಹೊಮ್ಮುತ್ತಿದ್ದು, ಕರ್ನಾಟಕ ಸರಕಾರವು ಬಸವ ಗೋಪುರ/ಬಸವ ಅಂತರರಾಷ್ಟ್ರೀಯ ಕೇಂದ್ರವನ್ನು ನಿರ್ಮಿಸಿದೆ. ಆಲಮಟ್ಟಿ ಜಲಾಶಯದ ಹಿನ್ನೀರಿನಿಂದ ಮುಳುಗಡೆಯಾಗಿರುವ ಐಕ್ಯ ಮಂಟಪವನ್ನು ವಿಶಿಷ್ಟ ರೀತಿಯ ಆಧುನಿಕ ವಾಸ್ತು ಶಿಲ್ಪ ದಲ್ಲಿ ಸಂರಕ್ಸಿಸಲಾಗಿದೆ. ಜೀವಿತದಲ್ಲಿ ಒಮ್ಮೆ ಸಂದರ್ಶಿಸಬೇಕಾದ ಸ್ಥಳವಿದು....
.
Answer:
hma toh ni atti yeh language