Essay on pravasa in Kannada
Answers
Answer:
ಕನ್ನಡ ಪ್ರವಾಸ ಸಾಹಿತ್ಯ 19ನೆಯ ಶತಮಾನದಲ್ಲಿಯೇ ಆರಂಭವಾಯಿತು.
ಜವಹರಲಾಲ್ ನೆಹರೂರವರು ಕೆ.ಪಿ.ಎಸ್.ಮೆನೆನ್ ರವರ ಗ್ರಂಥಕ್ಕೆ ಮುನ್ನುಡಿ ಬರೆಯುತ್ತ ಹೀಗೆ ಹೇಳಿದ್ದಾರೆ: ‘ಪ್ರವಾಸ ಮಾಡುವುದು ಒಳ್ಳೆಯದು; ಹಾಗೆ ಪ್ರವಾಸ ಮಾಡಲಾರದೇ ಹೋದಾಗ ಪ್ರವಾಸದ ಬಗೆಗೆ ಬಂದಿರುವ ಸಾಹಿತ್ಯವನ್ನಾದರೂ ಓದುವುದು ಉತ್ತಮ ಹವ್ಯಾಸ’. ಕನ್ನಡಿಗರು ಈ ಹವ್ಯಾಸ ಬೆಳೆಸಿಕೊಳ್ಳಲು ಸಾಕಷ್ಟು ಸರಕಿದೆ.
ಪ್ರವಾಸ ಸಾಹಿತ್ಯದ ಬೆಳೆ 80 ಮತ್ತು 90ರ ದಶಕದಲ್ಲಿ ಅಪೂರ್ವವೂ ಸಾಹಿತ್ಯ ಶ್ರೀಮಂತವೂ ಆಗಿದೆಯೆಂದು ಅಭಿಮಾನದಿಂದಲೇ ಹೇಳಬಹುದಾದಷ್ಟು ವಿಪುಲ ಸಂಖ್ಯೆ, ಭಿನ್ನ ವಿಭಿನ್ನ ದೃಷ್ಟಿಕೋನ ಹಾಗೂ ಅನುಭವದ ಪ್ರವಾಸ ಕೃತಿಗಳು ಪ್ರಕಟವಾಗಿರುವುದನ್ನು ನೋಡಬಹುದಾಗಿದೆ. ಪ್ರತಿಯೊಬ್ಬ ಲೇಖಕನೂ ತನ್ನದೇ ಆದ ವಿಶಿಷ್ಟ ರೀತಿಯಲ್ಲಿ ಹೊಸ ನಾಡಿನ ಹೊಸ ಕತೆಯೊಂದನ್ನು ಕೊಟ್ಟಿದ್ದಾನೆ. ಕೆಲವೊಂದು ಕಥನಗಳಂತೂ ಜಾಗತಿಕ ಪ್ರವಾಸ ಸಾಹಿತ್ಯ ಕೃತಿಗಳ ಮಟ್ಟಕ್ಕೆ ನಿಲ್ಲುವಷ್ಟು ಚೆನ್ನಾಗಿವೆ. ಶೈಕ್ಷಣಿಕ ಮಹತ್ವ ಹಾಗೂ ವಿಭಿನ್ನ ಅನುಭವದ ನೆಲೆಗಳು ಇಂದು ಪ್ರವಾಸ ಸಾಹಿತ್ಯದ ಒಳಸೂತ್ರವಾಗಿ ನಿಂತಿವೆ. ಪ್ರವಾಸಾನುಭವ ಕಥನ, ಸಾಂಸ್ಕೃತಿಕ, ಶೈಕ್ಷಣಿಕ, ಆರ್ಥಿಕ, ಸಾಮಾಜಿಕ - ಹೀಗೆ ಭಿನ್ನ ಕೋನಗಳಿಂದ ಅನ್ಯ ಸಂಸ್ಕೃತಿಯನ್ನು ಸಾಂದ್ರವಾಗಿ ತಾಗುವ ದಿಕ್ಕಿನಲ್ಲಿ ಸಾಗಿದೆ.
ಈ ಪ್ರಯತ್ನದ ಹಾದಿಯಲ್ಲಿ ಪ್ರವಾಸ ಸಾಹಿತ್ಯದ ಸಂಖ್ಯೆಯೂ ಮಹಿಳಾ ಬರೆಹಗಾರ್ತಿಯರ ಸಂಖ್ಯೆಯೂ ವೃದ್ಧಿಸಿದೆ. ಸ್ವಾತಂತ್ರ್ಯೋತ್ತರ ಕಾಲದಿಂದ ಇಲ್ಲಿಯವರೆಗೆ 50ಕ್ಕೂ ಹೆಚ್ಚು ಮಹಿಳಾ ಪ್ರವಾಸ ಕಥನಗಳು ದೊರಕುತ್ತವೆ.
ಪ್ರವಾಸಕ್ಕಾಗಿ ಒದಗುತ್ತಿರುವ ಕಾರಣಗಳೂ ಗಮನಾರ್ಹವಾಗಿ ಹೆಚ್ಚಾಗಿವೆ. ಯುನೆಸ್ಕೋ ಸೇವೆಗಾಗಿಯೋ ವಿವಿಧ ಸಾಹಿತ್ಯ ಸಂಘಗಳ ಮೂಲಕವೋ ಸಾಂಸ್ಕೃತಿಕ ತಂಡಗಳ ಪರವಾಗಿಯೋ ಅಕಾಡೆಮಿಗಳ ನೆರವಿನಿಂದಲೋ ಕೆಲಮೊಮ್ಮೆ ಸ್ವಂತ ಖರ್ಚಿನಿಂದಲೋ ದೇಶೀಯ ಹಾಗೂ ವಿದೇಶೀಯ ಸ್ಥಳಗಳ ಪ್ರವಾಸ ಸಮೃದ್ಧವಾಗಿದೆ.
Answer:hi
Explanation:good bye