Social Sciences, asked by pigirl143, 4 months ago

essay on the topic kannadadha abhimaan in kannada language​

Answers

Answered by s15017
3

Answer:

ಕರ್ನಾಟಕ

ಕರ್ನಾಟಕ ಭಾರತದ ನಾಲ್ಕು ಪ್ರಮುಖ ದಾಕ್ಷಿಣಾತ್ಯ ರಾಜ್ಯಗಳಲ್ಲಿ ಒಂದು. ೧೯೭೩ ಕ್ಕೆ ಮೊದಲು ಕರ್ನಾಟಕದ ಹೆಸರು "ಮೈಸೂರು ರಾಜ್ಯ" ಎಂದಿದ್ದಿತು. ಇದಕ್ಕೆ ಕಾರಣ ಕರ್ನಾಟಕದ ಮೊದಲ ಸೃಷ್ಟಿ ಮೈಸೂರು ಸಂಸ್ಥಾನವನ್ನು ಆಧರಿಸಿದ್ದು (೧೯೫೦ ರಲ್ಲಿ). ೧೯೫೬ ರಲ್ಲಿ ಸುತ್ತಮುತ್ತಲ ರಾಜ್ಯಗಳ ಕನ್ನಡ ಪ್ರಧಾನ ಪ್ರದೇಶಗಳನ್ನು ಸೇರಿಸಲಾಯಿತು.

"ಕರ್ನಾಟಕ" ಎಂಬ ಹೆಸರಿಗೆ ಅನೇಕ ವ್ಯುತ್ಪತ್ತಿಗಳು ಪ್ರತಿಪಾದಿಸಲ್ಪಟ್ಟಿವೆ. ಎಲ್ಲಕ್ಕಿಂತ ಹೆಚ್ಚಾಗಿ ಒಪ್ಪಲ್ಪಟ್ಟಿರುವ ವ್ಯುತ್ಪತ್ತಿ ಎಂದರೆ ಕರ್ನಾಟಕ ಎಂಬುದು "ಕರು+ನಾಡು" ಎಂಬುದರಿಂದ ವ್ಯುತ್ಪತ್ತಿಯನ್ನು ಪಡೆದಿದೆ. ಕರು ನಾಡು ಎಂದರೆ "ಎತ್ತರದ ಪ್ರದೇಶ" ಎಂದು ಅರ್ಥ. ಕರ್ನಾಟಕ ರಾಜ್ಯದ ಸಮುದ್ರ ಮಟ್ಟದಿಂದ ಸರಾಸರಿ ಎತ್ತರ ೧೫೦೦ ಅಡಿ ಇದ್ದು ಇದು ಭಾರತದಲ್ಲಿ ಅತಿ ಹೆಚ್ಚಿನ ಸರಾಸರಿ ಎತ್ತರವುಳ್ಳ ರಾಜ್ಯಗಳಲ್ಲಿ ಒಂದು.

ಕರ್ನಾಟಕವು ಪಶ್ಚಿಮದಲ್ಲಿ ಅರಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳನಾಡುವಿನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.

ಪೂರ್ವ ಶಿಲಾಯುಗದಷ್ಟು ಪ್ರಾಚೀನತೆಯಿರುವ ಕರ್ನಾಟಕವು ಭಾರತದ ಅನೇಕ ಪ್ರಬಲ ಸಾಮ್ರಾಜ್ಯಗಳಿಗೆ ನೆಲೆಬೀಡಾಗಿದೆ. ಈ ಸಾಮ್ರಾಜ್ಯಗಳಿಂದ ಆಶ್ರಯ ಪಡೆದಿರುವ ಅನೇಕ ತತ್ವಜ್ಞಾನಿಗಳು ಮತ್ತು ಕವಿಗಳಿಂದ ಆರಂಭಿಸಲ್ಪಟ್ಟಿರುವ ಸಾಮಾಜಿಕ, ಧಾರ್ಮಿಕ ಹಾಗು ಸಾಹಿತ್ಯಕ ಚಳವಳಿಗಳು ಇಂದಿನವರೆಗೂ ನಡೆದುಕೊಂಡು ಬಂದಿವೆ. ಕನ್ನಡ ಭಾಷೆಯ ಸಾಹಿತಿಗಳು ಭಾರತದಲ್ಲಿ ಅತಿ ಹೆಚ್ಚು ಜ್ಞಾನಪಪೀಠ ಪ್ರಶಸ್ತಿ ಪಡೆದಿದ್ದಾರೆ. ಕರ್ನಾಟಕವು ಭಾರತದ ಶಾಸ್ತ್ರೀಯ ಸಂಗೀತ ಪರಂಪರೆಗಳಾದ ಕರ್ನಾಟಕ ಸಂಗೀತ ಶೈಲಿಗೆ ಹಾಗು ಹಿಂದೂಸ್ಥಾನಿ ಸಂಗೀತ ಶೈಲಿಗೆ ಮಹತ್ತರವಾದ ಕೊಡುಗೆ ನೀಡಿದೆ.

HOpe this helps you  !!!

Similar questions