India Languages, asked by SURAJ0840, 6 months ago

essay on ur favourite festival in Kannada​

Answers

Answered by tejeswarr323
5

Answer:

ಸಂಕ್ರಾಂತಿ ಹಬ್ಬ ಬಂದಿದೆ. ಎಲ್ಲೆಡೆ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಲಾಗುತ್ತದೆ. ಎಳ್ಳುಬೆಲ್ಲವನ್ನು ಮನೆಮನೆಗೆ ನೀಡುವುದು ಹಬ್ಬದ ವಿಶೇಷತೆಯಾಗಿದೆ. "ಎಳ್ಳು ಬೆಲ್ಲ ತಿಂದು ಒಳ್ಳೆಯ ಮಾತಾಡು" ಎಂಬುವುದು ಹಬ್ಬದ ಸಂದರ್ಭದಲ್ಲಿ ಕೇಳಿ ಬರುವ ಘೋಷ ವಾಕ್ಯ

ಹಾಗೆ ನೋಡಿದರೆ ಸಂಕ್ರಾಂತಿಯನ್ನು ಮುಖ್ಯವಾಗಿ ದಕ್ಷಿಣ ಭಾರತದ ಕರ್ನಾಟಕ, ಆಂಧ್ರ ಪ್ರದೇಶ ಮತ್ತು ತಮಿಳುನಾಡು, ಕೇರಳಗಳಲ್ಲಿ ಆಚರಿಸಲಾಗುತ್ತದೆ. ಧಾನ್ಯ ಲಕ್ಷ್ಮಿ ಮನೆಗೆ ಬರುವ (ಸುಗ್ಗಿ) ಸಂದರ್ಭ ಆಚರಿಸಲಾಗುವ ಸಂಕ್ರಾಂತಿ ಹಬ್ಬ ಸಮೃದ್ಧಿಯ ಸಂಕೇತ. ಸಂಕ್ರಾಂತಿಯನ್ನು ಧಾರ್ಮಿಕ ತತ್ವಗಳಿಂದ ಸ್ವತಂತ್ರವಾಗಿ ಆಚರಿಸಲಾಗುತ್ತಿದ್ದರೂ ವೇದಾಂಗ ಜ್ಯೋತಿಷ್ಯ ಶಾಸ್ತ್ರದ ತಳಹದಿ ಇದಕ್ಕೆ ಇರುವುದನ್ನು ನಾವು ಕಾಣಬಹುದು.

ಸನಾತನ ಹಿಂದೂ ಧರ್ಮದ ಬುನಾದಿಯಾಗಿರುವ ವೇದಗಳ ಅಂಗಗಳೆಂದೇ ಪ್ರಸಿದ್ಧವಾಗಿರುವ ಆರು ವೇದಾಂಗಗಳಲ್ಲಿ ಒಂದಾದ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಸೂರ್ಯನು ನಿರಯಣ ಮಕರ ರಾಶಿಯನ್ನು ಪ್ರವೇಶಿಸಿದಾಗ, "ಮಕರ ಸಂಕ್ರಾಂತಿ"ಯಾಗುತ್ತದೆ. ಈ ಕಾಲವು ಪ್ರತಿವರ್ಷ ಗ್ರೆಗೋರಿಯನ್ ಪಂಚಾಂಗದ ಜನವರಿ 14ರ ಸುಮಾರಿಗೆ ಬರುತ್ತದೆ.[ಸುಗ್ಗಿ ಹಿಗ್ಗಿನ ಸಂಕೇತ ಮಕರ ಸಂಕ್ರಾಂತಿ]

Answered by Anonymous
1

Answer:

same answer of above and I am also from Karnataka

Similar questions