India Languages, asked by premvasanth783, 1 year ago

Essay writing about Ambedkar jauanti in Kannada in Kannada

Answers

Answered by Anonymous
6

Answer:

ಡಾ. ಬಿ.ಆರ್. ಅಂಬೇಡ್ಕರ್ ಭೀಮರಾವ್ ರಾಮ್‌ಜೀ ಅಂಬೇಡ್ಕರ್, ಸಾಮಾಜಿಕ ಸಮಾನತೆ, ಅಸ್ಪೃಶ್ಯತಾ ನಿವಾರಣೆಗಾಗಿ ಹೋರಾಡಿದ ಮಹಾನ್ ಭಾರತೀಯ ನಾಯಕರಲ್ಲೊಬ್ಬರು. ಭಾರತದ ಸಂವಿಧಾನವನ್ನು ರಚಿಸಿದ ಇವರನ್ನು ಸಂವಿಧಾನ ಶಿಲ್ಪಿ ಎಂದು ಕರೆಯುತ್ತಾರೆ.ಡಾ ಬಿ. ಆರ್ ಅಂಬೇಡ್ಕರ್ ರವರು 14ನೇ ಏಪ್ರಿಲ್, 1891 ಮಧ್ಯಪ್ರದೇಶದ ಮಾಹೋ ಎಂಬ ಮಿಲಿಟರಿ ಕ್ಯಾಂಪ್ ನಲ್ಲಿ ಹುಟ್ಟಿದರು. ಅಂಬೇಡ್ಕರ್ ರವರು ಮೂಲತಃ ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಖೇಡಾ ತಾಲ್ಲೂಕಿನ ಅಂಬೆವಾಡ ಗ್ರಾಮದವರು. ಇವರು ಮಹಾರ‍ ಜಾತಿಯಲ್ಲಿ ಹುಟ್ಟಿದರು. ಈ ಜಾತಿಯವರು ಹೆಚ್ಚಿನ ಜನ ಬ್ರಿಟಿಷ್ ಸರ್ಕಾರದ ಮಿಲಿಟರಿ ಸೇವೆಯಲ್ಲಿ ಉದ್ಯೋಗಕ್ಕಾಗಿ ಸೇರುತ್ತಿದ್ದರು.

ಇವರ ಅಜ್ಜ ಮಾಲೋಜಿ ಸಕ್ಪಾಲ್ ಅವರು ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿ ಬಾಂಬೆ ಸೇನೆಯಲ್ಲಿ ಸೇರಿ, ಹವಾಲ್ದಾರರಾಗಿ ನಿವೃತ್ತಿ ಹೊಂದಿದ್ದರು. ಇವರು ಆ ಕಾಲಕ್ಕೆ 19 ಮೆಡಲ್ ಗಳನ್ನು ಗಳಿಸಿದ್ದರು. ಇವರಿಗೆ ಇಬ್ಬರು ಮಕ್ಕಳು ರಾಮಜಿ ಸಕ್ಪಾಲ್, ಮೀರಾ ಸಕ್ಪಾಲ್. ರಾಮಜಿ ಸಕ್ಪಾಲ್ ಅವರ ಹೆಂಡತಿ ಭೀಮಬಾಯಿ. ಇವರು ಠಾಣೆ ಜಿಲ್ಲೆಯ ಮುರಬಾದಕರ್ ಎಂಬ ಅಸ್ಪೃಶ್ಯ ಕುಟುಂಬದವರು.

ಇವರ ತಂದೆ ಹಾಗೂ ಆರು ಜನ ಚಿಕ್ಕಪ್ಪಂದಿರು, ಸೈನ್ಯದಲ್ಲಿ ಸುಬೇ೧೯೨೭ರಿಂದ ೧೯೩೨ರವರೆಗೆ, ಅಹಿಂಸಾತ್ಮಕ ಆಂದೋಲನಗಳ ಮುಂದಾಳತ್ವ ವಹಿಸಿ ಅಸ್ಪೃಶ್ಯರಿಗೆ ದೇವಾಲಯ ಪ್ರವೇಶದ ಹಕ್ಕು, ಸಾರ್ವಜನಿಕ ಕೆರೆ, ಬಾವಿಗಳಿಂದ ನೀರು ಸೇದುವ ಹಕ್ಕು ಇತ್ಯಾದಿಗಳಿಗಾಗಿ ಹೋರಾಡಿದರು. ಇವುಗಳಲ್ಲಿ ನಾಸಿಕದಲ್ಲಿಯ ಕಾಳ ರಾಮನ ದೇವಸ್ಥಾನ ಮತ್ತು ಮಹಾಡದ ಚೌಡಾರ್ ಕೆರೆಯ ವಿಷಯವಾಗಿ ಅಸ್ಪೃಶ್ಯರನ್ನು ಹೊರಗಿಟ್ಟಿರುವರ ವಿರುದ್ಧ ಮಾಡಿದ ಆಂದೋಲನಗಳು ಗಮನಾರ್ಹವಾಗಿವೆ.

ಸಹಸ್ರಾರು ಅಸ್ಪೃಶ್ಯ ಸತ್ಯಾಗ್ರಹಿಗಳು ಭಾಗವಹಿಸಿದ ಈ ಅಹಿಂಸಾತ್ಮಕ ಚಳುವಳಿಗಳಿಗೆ ಸವರ್ಣೀಯರು ಹಿಂಸಾತ್ಮಕವಾಗಿ ಪ್ರತಿಕ್ರಿಯಿಸಿದರು. ನ್ಯಾಯಾಲಯದ ಕಟ್ಟೆ ಹತ್ತಿದ ಚೌಡಾರ್ ಕೆರೆಯ ಚಳುವಳಿಯು, ಅನೇಕ ವರ್ಷಗಳ ನಂತರ, ಕೆಳವರ್ಗಗಳ ಪರವಾಗಿ ವಿಜಯ ಸಾಧಿಸು ವುದರೊಂದಿಗೆ ಪರ್ಯವಸಾನ ಹೊಂದಿತು. ಅಸ್ಪೃಶ್ಯರನ್ನು ಸಮಾಜ ನಡೆಸಿಕೊಳ್ಳುತ್ತಿದ್ದ ಕ್ರೂರ ರೀತಿಗೆ ಮೂಲ ಕಾರಣ 'ಮನುಸ್ಮೃತಿ' ಎಂದು ಅಂಬೇಡ್ಕರ್ ನಂಬಿದ್ದರು.

ಮನುಸ್ಮೃತಿಯನ್ನು ಇದೇ ಚಳುವಳಿಯಲ್ಲಿ ವಿಧ್ಯುಕ್ತವಾಗಿ ದಹನ ಮಾಡಲಾಯಿತು. ಈ ಕೃತಿಯನ್ನು ಹೀಗೆ ಸಾರ್ವಜನಿಕವಾಗಿ ಅವಮರ್ಯಾದೆ ಮಾಡುವುದರ ಮೂಲಕ ಅಂಬೇಡ್ಕರರ ಅನುಯಾಯಿಗಳು ಸಮಾನತೆಯ ಹಕ್ಕು ಪ್ರತಿಪಾದನೆ ಮಾಡಬಯಸಿದ್ದರು. ಆದರೆ, ಹಿಂದೂ ಧರ್ಮದ ಅನುಯಾಯಿಗಳಲ್ಲಿ ಮನುಸ್ಮೃತಿಯ ಮಹತ್ವವೇನು ಎಂಬುದೇ ಅಸ್ಪಷ್ಟ ಹಾಗೂ ವಿವಾದಿತ ವಿಷಯವಾದ್ದರಿಂದ, ಅದರಲ್ಲಿಯೂ ಮುಖ್ಯವಾಗಿ ಮನುಸ್ಮೃತಿಯನ್ನು ಹಿಂದೂ ಧರ್ಮಶಾಸ್ತ್ರಗಳಲ್ಲಿ ಒಂದಾಗಿ ಪರಿಗಣಿಸದೇ ಇದ್ದು, ಹಳ್ಳಿಗಾಡುಗಳಿಂದ ಹೊರಗೆ ಅದಕ್ಕೆ ಧಾರ್ಮಿಕ ಮಹತ್ವವೂ ಇಲ್ಲದಿದ್ದುದರಿಂದ, ಈ ಉದ್ದೇಶ ನೆರವೇರಿತೋ ಇಲ್ಲವೂ ಎಂಬುದು ಚರ್ಚಾಸ್ಪದ ದಾರರಾಗಿದ್ದರು.ರಾಮಜಿ ಮತ್ತು ಭೀಮಬಾಯಿ ರವರು ಇಬ್ಬರು ಕಷ್ಟ ಸಹಿಷ್ಣುಗಳಾದ ಸತಿಪತಿಗಳಾಗಿದ್ದರು. ಇವರಿಗೆ 14 ಮಕ್ಕಳು ಹುಟ್ಟಿದರು. ಈ 14ನೇ ಮಗುವೇ ಅಂಬೇಡ್ಕರ್. ಅಂಬೇಡ್ಕರ್ ಅವರ ಮೊದಲ ಹೆಸರು ಭೀಮರಾವ್ ಆಗಿತ್ತು. ಡಾ. ಅಂಬೇಡ್ಕರರು ನಾನು ನನ್ನ ತಂದೆ ತಾಯಿಯರಿಗೆ 14 ನೇ ರತ್ನನಾಗಿದ್ದೇನೆ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತಿದ್ದರು.

Similar questions