History, asked by gg1668070, 2 months ago

explain about sangolli rayanna( answer in Kannada)​

Answers

Answered by ramroopbharati
3

ಸಂಗೊಳ್ಳಿ ರಾಯಣ್ಣ (15 ಆಗಸ್ಟ್ 1796 - 26 ಜನವರಿ 1831) ಕರ್ನಾಟಕ, ಭಾರತದ ಪ್ರಮುಖ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು - ಬ್ರಿಟಿಷರ ವಿರುದ್ಧ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರಲ್ಲೊಬ್ಬರು. ಕಿತ್ತೂರು ಚೆನ್ನಮ್ಮಳ ಬಲಗೈ ಬಂಟರಾಗಿದ್ದರು.[೧]ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಯ ವಿರುದ್ಧ ಅವರ ಸಾವಿನವರೆಗೂ ಹೋರಾಡಿದರು.

PLEASE MARK BRANLIEST AND LIKE THE ANSWER

Answered by prajwalxoxo17
3

Neevu Karnataka dalli yelli??

ಸಂಗೊಳ್ಳಿ ರಾಯಣ್ಣ (15 ಆಗಸ್ಟ್ 1796 - 26 ಜನವರಿ 1831) ಕರ್ನಾಟಕ, ಭಾರತದ ಪ್ರಮುಖ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು - ಬ್ರಿಟಿಷರ ವಿರುದ್ಧ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರಲ್ಲೊಬ್ಬರು. ಕಿತ್ತೂರು ಚೆನ್ನಮ್ಮಳ ಬಲಗೈ ಬಂಟರಾಗಿದ್ದರು.[೧]ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಯ ವಿರುದ್ಧ ಅವರ ಸಾವಿನವರೆಗೂ ಹೋರಾಡಿದರು.

ಜನನ ಆಗಸ್ಟ್ ೧೫, ೧೭೯೬

ಜನ್ಮ ಸ್ಥಳ ಸಂಗೊಳ್ಳಿ, ಕಿತ್ತೂರು ಸಾಮ್ರಾಜ್ಯ (ಇಂದಿನ ಬೆಳಗಾವಿ, ಕರ್ನಾಟಕ, ಭಾರತ)

ಮರಣ ಜನವರಿ ೨೬, ೧೮೩೧

ಮರಣ ಸ್ಥಳ ನಂದಗಡ. (ಇಂದಿನ ಕರ್ನಾಟಕ, ಭಾರತ)

ತಂದೆ ಭರಮಪ್ಪ ರೋಗಣ್ಣವರ

ತಾಯಿ ಕೆಂಚವ್ವ ರೋಗಣ್ಣವರ

ಧಾರ್ಮಿಕ ನಂಬಿಕೆಗಳು ಹಿಂದೂ ಧರ್ಮ, ಕುರುಬ

ಸಂಗೊಳ್ಳಿ ರಾಯಣ್ಣ ಹುಟ್ಟಿದ್ದು ಆಗಸ್ಟ್‌ ೧೫ ನೆಯ ದಿನ ೧೭೯೬.ಆಗಸ್ಟ ಹದಿನೈದು ಭಾರತೀಯರಿಗೆ ಸ್ವಾತಂತ್ರ್ಯ ದೊರಕಿದ ದಿನವಾಗಿದೆ. ಭಾರತೀಯರಿಗೆ ರಾಷ್ಟ್ರೀಯ ಹಬ್ಬ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ (ಸಂಪಗಾವಿ)ತಾಲೂಕಿನ ಸಂಗೊಳ್ಳಿ ಗ್ರಾಮದಲ್ಲಿ ತಂದೆ ಭರಮಪ್ಪ ತಾಯಿ ಕೆಂಚಮ್ಮಾಜಿಯ ಪುತ್ರನಾಗಿ ಜನಿಸಿದನು,ಈತನ ಸಹೋದರಿ ಮಾಯವ್ವ.

ರಾಯಣ್ಣನಿಗೆ, ವೀರ ರಾಯ , ವೀರ ಸಂಗೊಳ್ಳಿ ರಾಯಣ್ಣ, ಶೂರ ರಾಯಣ್ಣ ಧೀರ ರಾಯಣ್ಣ, ಕ್ರಾಂತಿವೀರ ರಾಯಣ್ಣ ಇತ್ಯಾದಿ ದಾಖಲೆಗಳು ಜನಮನದಾಳದಿಂದ, ಜನಪದರಿಂದ ನಾಟಕಕಾರರಿಂದ, ಇತಿಹಾಸಕಾರರಿಂದ ರಾಯಣ್ಣನಿಗೆ ಹೆಸರಿಸಲ್ಪಟ್ಟಿವೆ.

ಕಿತ್ತೂರಿನಿಂದ ಕೆಲವೇ ದೂರದಲ್ಲಿರುವ ಸಂಗೊಳ್ಳಿ ಗ್ರಾಮದಲ್ಲಿ ಭರಮಪ್ಪ ಮತ್ತು ಕೆಂಚವ್ವ ದಂಪತಿಯ ಪುತ್ರನಾಗಿ ರಾಯಣ್ಣ ಜನಿಸುತ್ತಾನೆ. ಇವರದು ಪ್ರಸಿದ್ಧ ಕುಟುಂಬ. ಇವರ ತಾತ ರೋಗಪ್ಪ ವೀರಪ್ಪ ದೇಸಾಯಿ ಯುದ್ಧದಲ್ಲಿ ತೋರಿದಂತಹ ಶೌರ್ಯಕ್ಕಾಗಿ ‘‘ಸಾವಿರ ಒಂಟೆ ಸರದಾರ’’ ಎಂಬ ಬಿರುದು ನೀಡಿ ರಕ್ತಮಾನ್ಯ ಭೂಮಿಯನ್ನು ಬಳುವಳಿಯಾಗಿ ನೀಡಿದನು

ರೋಗಪ್ಪ ಆಯುರ್ವೇದ ಪಂಡಿತರಾಗಿದ್ದರು. ರಾಯಣ್ಣನ ತಂದೆ ಭರಮಣ್ಣ ಮಹಾನ್ ಸಾಹಸಿ.ಕಿತ್ತೂರ ಸಂಸ್ಥಾನದ ಜನರಿಗೆ ಕಾಟ ಕೊಡುತ್ತಿದ್ದ ಹೆಬ್ಬುಲಿಯನ್ನು ಕೊಂದ ಕೀರ್ತಿ ಇವರದ್ದು. ಈ ಸಾಹಸಕ್ಕಾಗಿ ಕಿತ್ತೂರು ಮಲ್ಲಸರ್ಜ ದೇಸಾಯಿ ನೀಡಿದ ಹೊಲವೇ ರಕ್ತಮಾನ್ಯದ ಹೊಲ. ಸಂಗೊಳ್ಳಿಯಲ್ಲಿನ ಗರಡಿ ಮನೆ ಅತ್ಯಂತ ಪ್ರಸಿದ್ಧಿಯಿರುವ ಗರಡಿ.

ರಾಯಣ್ಣನಿಗೆ ಮರಣದಂಡನೆಯಾಗಿ ಗಲ್ಲುಗಂಬಕ್ಕೇರಿದ ದಿನ ಜನವರಿ ೨೬ನೆಯ ದಿನ ೧೮೩೧; ಜನವರಿ ಇಪ್ಪತ್ತಾರು ಭಾರತೀಯರ ನಿಜವಾದ ಸ್ವಾತಂತ್ರ್ಯ ದಿನವಾಗಿದೆ ಹಾಗೂ ಗಣರಾಜ್ಯವ ದಿನವೂ ಹೌದು, ಪ್ರಜಾಸತ್ತಾತ್ಮಕ ದಿನ, ಭಾರತೀಯರಿಗೆ ರಾಷ್ಟ್ರೀಯ ಹಬ್ಬ. ಇವೆರಡು ದಿನಗಳು ಜನನ ಮರಣದವುಗಳು ರಾಯಣ್ಣನಿಗೆ ಮಾತ್ರವಲ್ಲ, ಭಾರತೀಯರಿಗೆ ರಾಷ್ಟ್ರೀಯ ಉತ್ಸವದ ದಿನಗಳಾಗಿವೆ. ಇಡೀ ಜೀವಮಾನ ಆಂಗ್ಲರನ್ನು ನಾಡಿನಿಂದ-ದೇಶದಿಂದ ಹೊರಹಾಕಲು ಮಾಡಿದ ಹೋರಾಟ (ಲಡಾಯಿ)ಗಳು ಸ್ಮರಣೀಯವಾಗಿವೆ.

ಜನ್ಮದಾರಭ್ಯದಿಂದ ಮೂವತ್ತೈದು ವರುಷಗಳ ಕಾಲ ಅಂದರೆ ಸ್ವರ್ಗವಾಸಿಯಾಗುವವರೆಗೆ, ತನ್ನ ಸರ್ವಸ್ವವನ್ನು ಕಿತ್ತೂರ ನಾಡಿನ ಸ್ವಾತಂತ್ಯ್ರಕ್ಕಾಗಿ ಅರ್ಪಣೆ ಮಾಡಿದವನು ಸಂಗೊಳ್ಳಿ ರಾಯಣ್ಣ. ಬ್ರಿಟಿಷರು ಸಂಗೊಳ್ಳಿ ರಾಯಣ್ಣನ ವಿಚಾರಣೆ ನಡೆಸಿ ಮರಣದಂಡನೆ ನೀಡಿದರು. ಆತನ ಜೊತೆ ಇತರ ಏಳು ಜನ ಅನುಯಾಯಿಗಳು ವಿಚಾರಣೆ ನಡೆಸಿ ಮರಣ ದಂಡನೆ ನೀಡಿದರು. ಆರು ಜನರಿಗೆ ಜೀವಾವಧಿ ಶಿಕ್ಷೆ ನೀಡಿ, ಸಮುದ್ರದಾಚೆಗೆ ಕಳಿಸಿದರು. ಅವರ ವಿವರ ಕೆಳಗಿನಂತಿದೆ.

Similar questions