Explain this gaade 1)ತಾಳಿದವನು ಬಾಳಿಯನು
Answers
Answered by
0
pls ask it in Hindi or English
Answered by
5
Answer:
ತಾಳಿದವನು ಬಾಳಿಯಾನು:
ಗಾದೆಗಳು ವೇದಗಳಿಗೆ ಸಮ, ಗಾದೆಗಳು ಹಿರಿಯರ ಅನುಭವದ ಮಾತುಗಳಾಗಿವೆ.
ಇದು ಒಂದು ಜನಪ್ರಿಯ ಗಾದೆ ಮಾತಾಗಿದ್ದು; ಅತಿಯಾಗಿ ಕೋಪಮಾಡಿಕೊಳ್ಳದೆ ಸಮಾಧಾನದಿಂದ ಇರಬೇಕು. ಕೋಪ ಅನಾಹುತಕ್ಕೆ ಕಾರಣವಾಗುತ್ತದೆ ಎಂಬುದನ್ನು ತಿಳಿಸುತ್ತದೆ.
* ಕೋಪಂ ಅನರ್ಥ ಸಾಧನಂ ಎಂಬ ಮಾತಿನಂತೆ ಕೋಪವು ಕೆಡುಕನ್ನು ಉಂಟುಮಾಡುತ್ತದೆ. ಕ್ಷಣಕಾಲ ಕೋಪದ ಕೈಗೆ ಬುದ್ಧಿ ಕೊಟ್ಟರೆ ಅದು ನಮ್ಮನ್ನು ಮಾತ್ರವಲ್ಲದೆ ಅದಕ್ಕೆ ಗುರಿಯಾದವರನ್ನೂ ಅಪಾಯಕ್ಕೆ ನೂಕುತ್ತದೆ. ’ಒಬ್ಬ ವ್ಯಕ್ತಿಯನ್ನು ನಾಶ ಪಡಸಬೇಕೆಂದರೆ ಆತನು ಕೋಪಗೊಳ್ಳಿವಂತೆ ಮಾಡಬೇಕು’ ಎಂಬ ಮಾತಿದೆ. ಕುಂಬಾರನು ಹಲವು ದಿನಗಳು ಶ್ರಮ ಪಟ್ಟು ತಯಾರಿಸಿದ ಮಡಕೆಯನ್ನು ಒಂದು ದೊಣ್ಣೆಯಿಂದ ನಾಶ ಮಾಡಿದಂತೆ, ಕ್ಷಣಿಕ ಕೋಪವು ಅನಾಹುತವನ್ನು ಉಂಟುಮಾಡುತ್ತದೆ. ಆದರೆ ಅದನ್ನು ಸರಿಪಡಿಸಲಾಗುತ್ತದೆಯೇ? ಕೋಪದಲ್ಲಿ ಕುಯ್ದುಕೊಂಡ ಮೂಗು ಶಾಂತವಾದ ನಂತರ ಚಿಂತಿಸಿದರೆ ಮತ್ತೆ ಸರರಿಂiಗುತ್ತದೆಯೇ? ಆದ್ದರಿಂದ ’ತಾಳ್ಮೆಯಿಂದ ಆಲೋಚಿಸಿ, ಕೋಪವನ್ನು ಹಿಂದಿಕ್ಕಿ ಮುನ್ನಡೆದವರೇ ಜೀವನದಲ್ಲಿ ವಿಜಯಶಾಲಿಗಳಾಗಲು ಸಾಧ್ಯ.’ ಎಂಬುದು ಈ ಗಾದೆಯ ಆಶಯವಾಗಿದೆ.
Be Brainly!
Similar questions