Harishvarana ವರಸುತ ಎಂದು ತನ್ನನ್ನು ಗುರುತಿಸಿಕೊಂಡ ಕವಿ
Answers
Answer:
ರಾಘವಾಂಕ :-ಕವಿಯು ಕ್ರಿ.ಶ.೧೨ನೆಯ ಶತಮಾನದ ಉತ್ತರಾರ್ಧದಲ್ಲಿ ಹಾಗೂ ೧೩ನೆಯ ಶತಮಾನದ ಪೂರ್ವಾರ್ಧದಲ್ಲಿ ಜೀವಿಸಿದ್ದ ಕವಿ
ಹರಿಹರನ ವರಸುತ ಎಂದು ಈತ ಹೇಳಿಕೊಂಡಿದ್ದಾನೆ.
ಈತನು ಹರಿಹರನ ಸೋದರಳಿಯ.ಹರಿಹರನೂ,ರಾಘವಾಂಕನೂ ಕನ್ನಡ ಸಾಹಿತ್ಯಚರಿತ್ರೆಯಲ್ಲಿ ನೂತನ ಯುಗಪ್ರವರ್ತಕರೆಂದು ಹೆಸರಾಗಿದ್ದಾರೆ.ಕನ್ನಡ ಸಾಹಿತ್ಯದಲ್ಲಿ ಷಟ್ಪದೀ ಪ್ರಕಾರವನ್ನು ಪ್ರವರ್ತನಗೊಳಿಸಿದ ಕೀರ್ತಿ ರಾಘವಾಂಕನಿಗೆ ಸಲ್ಲುತ್ತದೆ. ಕನ್ನಡದ ಅತ್ಯಂತ ಸ್ವತಂತ್ರ ಮನೋಧರ್ಮದ ಪ್ರಯೋಗಶೀಲನಾದ ವೀರಶೈವ ಕವಿ. ಹರಿಶ್ಚಂದ್ರಕಾವ್ಯ ಎಂಬ ಕಾವ್ಯದ ಕರ್ತೃ. ಈತನ ಜೀವನ ಹಾಗೂ ಕೃತಿಗಳು ಇವನ ಅನಂತರದ ಕೆಲವು ಕವಿಗಳಿಗೆ ಕುತೂಹಲದ, ಗೌರವದ ವಿಷಯಗಳಾಗಿದ್ದವು.
ಕನ್ನಡ ಸಾಹಿತ್ಯದಲ್ಲಿ ರಾಘವಾಂಕ ಪ್ರಧಾನವಾಗಿ ಪ್ರಯೋಗಶೀಲನಾದ ಸ್ವತಂತ್ರ ಮನೋಧರ್ಮದ ಕವಿ.' ಜನ ಬದುಕಬೇಕೆಂದು ಕಾವ್ಯಮುಖದಿಂಪೇಳ್ದನನಪೇಕ್ಶೆಯಿಂದ' ಎಂಬುದು ಇವನ ಕಾವ್ಯೋದ್ದೇಶವಾಗಿತ್ತು. ಮಹಾಕವಿ ಹರಿಹರನ ಸಮಕಾಲೀನನೂ , ವರಸುತನೂ ಆದ ಈತ ಹರಿಹರನ ಪ್ರಭಾವದ ಸೆಳೆತಕ್ಕೆ ಪ್ರತಿಯಾಗಿ ನಿಂತು ತನ್ನದೇ ಆದೊಂದು ಪರಂಪರೆಯನ್ನು ನಿರ್ಮಿಸಿಕೊಂಡವ.ತನಗೆ ಹಿನ್ನೆಲೆಯಲ್ಲಿದ್ದ ಹರಿಹರನ ರಗಳೆಯ ರೀತಿಯನ್ನು ಅನುಸರಿಸದೆ ಮೊತ್ತಮೊದಲಿಗೆ ಷಟ್ಪದಿ ರೂಪವನ್ನು ಪಳಗಿಸಿ ದೀರ್ಘ ಕಥಾನಿರೂಪಣೆಗೆ ಸೊಗಸಾಗಿ ಅಳವಡಿಸಿಕೊಂಡದ್ದು ಇವನ ಮಹತ್ವದ ಸಾಧನೆ.ಕನ್ನಡ ಸಾಹಿತ್ಯದಲ್ಲಿ ಕವಿ ರನ್ನನನ್ನು ಬಿಟ್ಟರೆ ಅಷ್ಟೇ ನಾಟ್ಯ ಪ್ರತಿಭೆಯನ್ನು ಪ್ರಕಟಿಸಿದ ಮತೊಬ್ಬ ಕವಿ ರಾಘವಾಂಕ