I want an essay on basavanna in kannada
Answers
ಬಸವನ ಬಾಗೇವಾಡಿ ವಿಜಯಪುರ ಜಿಲ್ಲೆ, ಕರ್ನಾಟಕ, ಭಾರತಮರಣ೧೧೯೬ CE
ಕೂಡಲಸಂಗಮ, ಕರ್ನಾಟಕ, ಭಾರತತತ್ವಶಾಸ್ತ್ರಶರಣ ಶರಣೆಯರ ಲಿಂಗಾಯತ ದರ್ಶನ",ಸಾಹಿತ್ಯದ ಕೆಲಸಗಳುವಚನ ಸಾಹಿತ್ಯ ವಚನಗಳುನುಡಿಅರಿತಡೆ ಶರಣ-ಮರೆತಡೆ ಮಾನವ , ಕಾಯಕ ದಾಸೋಹ , ಜಂಗಮಅಧ್ಯಾತ್ಮಜ್ಞಾನೀ ಅರ್ಥಶಾಸ್ತ್ರಜ್ಞ
ಶ್ರೀ ಬಸವೇಶ್ವರ (ಶ್ರೀ ಬಸವ ಅಥವಾ ಬಸವಣ್ಣನವರು) ಶರಣ ಶರಣೆಯರ ಲಿಂಗಾಯತ ದರ್ಶನ ಪ್ರತಿಪಾದಕರು. ಬಸವಣ್ಣನವರು ೧೨ ನೆಯ ಶತಮಾನದ ಭಕ್ತಿ ಪಂಥದ ಪ್ರಮುಖರಲ್ಲಿ ಒಬ್ಬರು. ಬಸವಣ್ಣನವರು ಮತ್ತು ಶರಣ ಶರಣೆಯರಾದ ಅಲ್ಲಮಪ್ರಭು, ಅಕ್ಕಮಹಾದೇವಿ, ಚೆನ್ನಬಸವಣ್ಣ ವೊದಲಾದ ನೂರಾರು ಶರಣ ಶರಣೆಯರು ವಚನಗಳ ಮೂಲಕ ಭಕ್ತಿಪಥ ಮತ್ತು ಜೀವನದ ಬಗ್ಗೆ ಹೊಸ ದೃಷ್ಟಿ ಬೀರಿದರು.
ಜನನ/ಜೀವನಸಂಪಾದಿಸಿ
ಬಸವಣ್ಣನವರು ೧೧೩೪ ರಲ್ಲಿ ಈಗಿನ ಬಿಜಾಪುರ ಜಿಲ್ಲೆಯಲ್ಲಿರುವ ಬಸವನ ಬಾಗೇವಾಡಿ ಗ್ರಾಮದಲ್ಲಿ (ಬಸವಣ್ಣನವರ ತಾಯಿಯ ತವರು ಮನೆಯಾದ ಇಂಗಳೇಶ್ವರ ಗ್ರಾಮದಲ್ಲಿ ಜನಿಸಿದರು ಎಂಬ ಪ್ರತೀತಿ ಇದೆ.), ಶ್ರೀ ಮಾದರಸ ಮತ್ತು ಮಾದಲಾಂಬಿಕೆ ದಂಪತಿಗಳಿಗೆ ಜನಿಸಿದರು. ಬಸವಣ್ಣ ಚಿಕ್ಕಂದಿನಿಂದಲೂ ವೈದಿಕ ಸಂಸ್ಕೃತಿಯ ಕರ್ಮಾಚರಣೆಗಳ ವಿರೋಧಿಯಾಗಿದ್ದರು. ಅಕ್ಕ ನಾಗಮ್ಮ ಮತ್ತು ಭಾವ ಶಿವಸ್ವಾಮಿಯ ಜೊತೆಯಲ್ಲಿ ಬಾಲ್ಯವನ್ನು ಕಳೆದರು. ಅವರ ೮ನೇ ವಯಸ್ಸಿನಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಬಸವಣ್ಣನವರಿಗೆ ಜನಿವಾರ ಹಾಕಲು ಬಂದಾಗ, ಬಸವಣ್ಣನವರು ತನಗಿಂತ ಹಿರಿಯಳಾದ ಅಕ್ಕ ನಾಗಮ್ಮನಿಗೆ ಕೊಡಲು ಕೇಳುತ್ತಾನೆ, ಆಗ ಇದು ಪುರುಷರಿಗೆ ಮಾತ್ರ ಕೊಡುವಂತಹುದು ಆದ್ದರಿಂದ ಅಕ್ಕನಿಗೆ ಕೊಡಲು ಬರುವುದಿಲ್ಲ ಅಂತ ನುಡಿದಾಗ, ಬಸವಣ್ಣ ಪುರುಷ/ಮಹಿಳೆ ಅಸಮಾನತೆಯನ್ನು ವಿರೋಧಿಸಿ ಮನೆಯಿಂದ ನಿರ್ಗಮಿಸಿ ಕೂಡಲಸಂಗಮಕ್ಕೆ ಹೊರಡುತ್ತಾರೆ.
ಧಾರ್ಮಿಕ ಬೆಳವಣಿಗೆಸಂಪಾದಿಸಿ
ಬಸವೇಶ್ವರರು ಹನ್ನೆರಡು ವರ್ಷಗಳ ಕಾಲ ಕೂಡಲ ಸಂಗಮದಲ್ಲಿ ಅಧ್ಯಯನ ಮಾಡುತ್ತಾ ಕಳೆದರು.ಅವರ ದೃಷ್ಟಿಯಲ್ಲಿ ದೇವನು ಒಬ್ಬ ಮತ್ತು ಅವನು ಮಾನವನಲ್ಲಿದ್ದಾನೆಯೇ ಹೊರತು ಗುಡಿ-ಗುಂಡಾರಗಳಲ್ಲಿ ಅಲ್ಲ. ಕೆಲಸ ಮಾಡಿ ಜೀವನ ನಡೆಸಬೇಕು, ಆಲಸಿ ಜೀವನ ಸಲ್ಲ. ಸುಳ್ಳು ಹೇಳುವುದು, ವಂಚಿಸುವುದು, ಕೊಲೆ-ಸುಲಿಗೆ ಮಾಡುವುದು, ಪ್ರಾಣಿಬಲಿ ನೀಡುವುದು, ಪರಧನ ಹರಣ, ಪರಸ್ತ್ರೀ ವ್ಯಾವೋಹ ಹೊಂದುವುದು ಘೋರ ಅಪರಾಧ.ಕೆಲಸದಲ್ಲಿ ಮೇಲು ಅಥವಾ ಕೀಳು ಎಂಬುದಿಲ್ಲ. ಪುರುಷನಂತೆ ಮಹಿಳೆಗೂ ವಿದ್ಯಾಭ್ಯಾಸದ ಮತ್ತು ತನ್ನ ಜೀವನವನ್ನು ರೂಪಿಸಿಕೊಳ್ಳುವ ಹಕ್ಕಿದೆ. ಹೀಗೆ ಸಮಾನತೆ, ಕಾಯಕ, ದಾಸೋಹ ತತ್ವಗಳನ್ನು ಸ್ವೀಕರಿಸುವ ಮತ್ತು ಆಚರಿಸುವ ಯಾರು ಬೇಕಾದರೂ ಶಿವಶರಣರಾಗ ಬಹುದು ಎಂದು ಬಸವಣ್ಣವರು ಸಾರಿದರು. ಪೊಳ್ಳು ದೇವರುಗಳನ್ನು ಸ್ತುತಿಸುತ್ತಿದ್ದ ಮತ್ತು ಪುರೋಹಿತಶಾಹಿಯಿಂದ ನಿರಂತರವಾಗಿ ವಂಚನೆಗೊಳಗಾಗುತ್ತಿದ್ದ ಜನತೆಗೆ ಬಸವಣ್ಣನವರು ಹೊಸ ಜೀವನ ನೀಡಿದರು.ಜಾತಿ, ಮತ, ಲಿಂಗಗಳ ಭೇದವನ್ನು ತಿರಸ್ಕರಿಸಿದ ಬಸವಣ್ಣನವರು ಸಾಮಾಜಿಕ ಕ್ರಾಂತಿಗೆ ಕಾರಣವಾದರು. ಬಸವಣ್ಣನವರನ್ನು ಜಗಜ್ಯೋತಿ ಬಸವೇಶ್ವರ, ಕ್ರಾಂತಿಯೋಗಿ ಬಸವಣ್ಣ, ಭಕ್ತಿ ಭಂಡಾರಿ ಬಸವಣ್ಣ, ಮಹಾ ಮಾನವತಾ ವಾದಿ ಎಂದೂ ಕರೆಯಲಾಗುತ್ತದೆ. ಮಾನವಿಯತೆ. ಕಾಯಕ ನಿಷ್ಠೆ ಧರ್ಮದ ಬುನಾದಿಯಾಗಬೇಕು ಎಂದು ಬಲವಾಗಿ ನಂಬಿದ್ದರು.ಬಸವಣ್ಣ ತಮ್ಮ ವಚನಗಳ ಮೂಲಕ ಕಾಯಕವೇ ಕೈಲಾಸ, ದಯವೇ ಧರ್ಮದ ಮೂಲವಯ್ಯ, ಅಯ್ಯ ಎಂದರೆ ಸ್ವರ್ಗ ಎಲವೂ ಎಂದರೆ ನರಕ ಎಂದು ಸಾರುವ ಮೂಲಕ ತಮ್ಮ ಮಾನವಾತಾ ವಾದಕ್ಕೆ ಸಾಹಿತ್ಯದ ಸ್ಪರ್ಶ ನೀಡಿದರು. ಕನ್ನಡ ಸಾಹಿತ್ಯಕ್ಕೆ ವಚನಗಳ ಮೂಲಕ ಅಪೂರ್ವ ಕೊಡುಗೆ ಅಪಾರ ಇದುವರೆಗೆ ಸುಮಾರು 1500 ವಚನಗಳನ್ನು ಸಂಗ್ರಹಿಸಿಡಲಾಗಿದೆ.ಬಸವಣ್ಣನವರ ಪ್ರೇರಣೆಯಿಂದ ಹರಿಜನ ಮತ್ತು ಬ್ರಾಹ್ಮಣ ಕುಟುಂಬಗಳ ನಡುವೆ ನಡೆದ ಅನುಲೋಮ ವಿವಾಹ ಕಲ್ಯಾಣದ ಕ್ರಾಂತಿಗೆ ಮುನ್ನುಡಿಯಾಯಿತು. ಇವರು ಷಟ್ ಸ್ಥಲ ವಚನ, ಕಾಲಜ್ಞಾನ ವಚನ, ಮಂತ್ರಗೋಪ್ಯ, ಶಿಖಾರತ್ನ ವಚನ ಎಂಬ ಗ್ರಂಥಗಳನ್ನು ಬರೆದಿದ್ದಾರೆ. ಇವರನ್ನು ಕುರಿತಂತೆ ಕನ್ನಡ, ತೆಲುಗು, ಸಂಸ್ಕೃತ, ತಮಿಳು, ಮರಾಠಿ ಮತ್ತು ಹಿಂದಿ ಭಾಷೆಗಳಲ್ಲಿ ಪುರಾಣಗಳು ರಚನೆಯಾಗಿವೆ. ಬಾಗೇವಾಡಿ ಕಪ್ಪಡಿಸಂಗಮ, ಕಲ್ಯಾಣ ಪಟ್ಟಣಗಳಲ್ಲಿ ಇವರ ಸ್ಮಾರಕಗಳಿವೆ.ಬೆಳಗಾವಿ ಜಿಲ್ಲೆಯ ಅರ್ಜುನವಾಡದ ಶಿಲಾಶಾಸನದಲ್ಲಿ ಉಲ್ಲೇಖಿತವಾಗಿರುವ ಸಂಗಣಬಸವ ಎಂಬ ಹೆಸರು ವಚನಕಾರ ಬಸವಣ್ಣನವರದ್ದೇ ಎಂದು ವಿದ್ವಾಂಸರು ಊಹಿಸಿದ್ದಾರೆ. "ನಮನ" ( ಪ್ರೊ.ಚಿದಾನಂದ ಮೂರ್ತಿಯವರಂಥ ಹಿರಿಯರೂ ಕೆಲವು ಗೌರವಾನ್ವಿತ ಸಂಪ್ರದಾಯ ಪರಾಯಣ ಮಠಾಧಿಪತಿಗಳೂ ವೀರಶೈವ ಧರ್ಮದ ಪ್ರತ್ಯೇಕ ಅಸ್ತಿತ್ವವನ್ನೊಪ್ಪದೆ ಅದು ಹಿಂದೂ ಧರ್ಮದ ಒಂದು ಭಾಗವೆಂದು ಘಂಟಾಘೋಷವಾಗಿ ಸಾರಿದ್ದಾರೆ.
ಸಾಮಾಜಿಕ ಸಮಾನತೆಸಂಪಾದಿಸಿ

ಅಣ್ಣ ಬಸವಣ್ಣ
ಇವನಾರವ ಇವನಾರವ ಇವನಾರವ ನೆಂದಿನಸದಿರಯ್ಯಾ
ಇವ ನಮ್ಮವ ಇವ ನಮ್ಮವ ಇವ ನಮ್ಮವ ನೆಂದಿನಸಯ್ಯಾ
ಕೂಡಲಸಂಗಮದೇವಾ ನಿಮ್ಮ ಮಹಾಮನೆಯ ಮಗನೆಂದೆನಿಸಯ್ಯ.
ಶೂದ್ರರಾದ ರೈತಾಪಿ ಜನರು, ಕಾಯಕಜೀವಿಗಳು, ಮಹಿಳೆಯರು ಮತ್ತು ಪಂಚಮರು ಈ ದೇಶದಲ್ಲಿ ಸಹಸ್ರಾರು ವರ್ಷಗಳಿಂದ ಮನುಧರ್ಮದ ಪುರುಷ ಪ್ರಧಾನವಾದ ವರ್ಣ ವ್ಯವಸ್ಥೆಯಿಂದಾಗಿ ಪಡಬಾರದ ಕಷ್ಟಪಟ್ಟಿದ್ದಾರೆ. ಮೇಲ್ವರ್ಗ ಮತ್ತು ಮೇಲ್ಜಾತಿಯ ಅನುತ್ಪಾದಕ ಪುರುಷರಿಗಾಗಿಯೇ ಬದುಕಿನ ಎಲ್ಲ ಸುಖಭೋಗಗಳು ಮೀಸಲಾಗಿದ್ದವು. ಇವರು ಮಾತ್ರ ಜನಿವಾರ ಧರಿಸುವ ಹಕ್ಕನ್ನು ಪಡೆದಿದ್ದರು.ಜನಿವಾರ ಧರಿಸುವ ಬ್ರಾಹಣ ಓದಿರಬಹುದು, ಬರೆದಿರಬಹುದು ಆದರೆ ಕಾಯಕಜೀವಿಯಾಗಿ ಉತ್ಪಾದನೆಯಲ್ಲಿ ತೊಡಗಿಲ್ಲ. ಉತ್ಪಾದನೆಯ ಅನುಭವದಿಂದ ಬರುವ ಜ್ಞಾನವನ್ನು ಹಿಂದಿನ ಕಾಲದಲ್ಲಿ ಅವನೆಂದೂ ಪಡೆಯಲಿಲ್ಲ. ಕ್ಷತ್ರಿಯ ಕಾದಿರಬಹುದು ಆದರೆ ಉತ್ಪಾದನೆಯಲ್ಲಿ ತೊಡಗಲಿಲ್ಲ. ವೈಶ್ಯ ವಸ್ತುಗಳ ಮಾರಾಟ ಮಾಡಿರಬಹುದು, ಕೃಷಿಭೂಮಿಯ ಒಡೆಯನೂ ಆಗಿರಬಹುದು ಆದರೆ ಸ್ವತಃ ಉತ್ಪಾದನೆ ಮಾಡಲಿಲ್ಲ. ಈ ಮೂರೂ ವರ್ಣದವರಿಗೂ ಜನಿವಾರ ಇದೆ.ಆದರೆ ಉತ್ಪಾದನೆಯಲ್ಲಿ ತೊಡಗಿದ ಕಾಯಕ ಜೀವಿಗಳಿಗೆ ಮತ್ತು ಪಂಚಮರಿಗೆ ಜನಿವಾರ ಇಲ್ಲ. ಯಾರಿಗೆ ಜನಿವಾರ ಇತ್ತೋ ಅವರು ದುಡಿಯದೆ ಸುಖ ಜೀವನವನ್ನು ಅನುಭವಿಸಿದರು. ಯಾರಿಗೆ ಜನಿವಾರ ಇದ್ದಿದ್ದಿಲ್ಲವೂ ಅವರು ದುಡಿದೂ ಕಷ್ಟ ಜೀವನವನ್ನು ಅನುಭವಿಸಿದರು. ಅಂತೆಯೆ ಬಸವಣ್ಣನವರು ಕಟ್ಟ ಕಡೆಗೆ ಮನುಷ್ಯನ ಕಡೆಗೆ ಬಂದರು ಈ ಅನ್ಯಾಯದ ವಿರುದ್ಧ ಸಿಡಿದೆದ್ದರು."ಜಾತಿ ಸಂಕರವಾದ ಬಳಿಕ ಕುಲವನರಸುವರೆ ?" ಎಂದು ಪ್ರಶ್ನಿಸಿ ಕಾಯಕಜೀವಿಗಳ ಕೇಂದ್ರಿತ ಶರಣ ಸಂಕುಲವನ್ನು ಸೃಷ್ಟಿಸಿದರು. ವಿವಿಧ ಕಾಯಕಗಳ ಶೂದ್ರರಿಗೆ, ಮಹಿಳೆಯರಿಗೆ ಮತ್ತು ಪಂಚಮರಿಗೆ ವೊದಲ ಬಾರಿಗೆ ಶಿಕ್ಷಣ ನೀಡುವ ವ್ಯವಸ್ಥೆ ಮಾಡಿದರು. ಅವರೆಲ್ಲ ಅನುಭವ ಮಂಟಪದಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಂಡರು.ಭಾರತದಲ್ಲಿ ವಿವಿಧ ಜಾತಿಗಳ ಕಾಯಕಜೀವಿಗಳು ಮೊದಲ ಬಾರಿಗೆ ಜಾತಿಯನ್ನು ಮೀರಿ ಒಂದು ವರ್ಗವಾಗಿದ್ದು ಶರಣ ಸಂಕುಲದಲ್ಲಿ ಎಂಬುದು ಹೆಮ್ಮೆಯ ವಿಚಾರವಾಗಿದೆ. ಅವರೆಲ್ಲ ತಮ್ಮ ಕಾಯಕಗಳ ಹೆಸರುಗಳನ್ನು ಅಭಿಮಾನದಿಂದ ಉಳಿಸಿಕೊಂಡರು. ಆದರೆ ಆ ಕಾಯಕಗಳ ಒಳಗೆ ಇದ್ದ ಜಾತಿ ವಿಷವನ್ನು ಹೊರ ಹಾಕಿದರು. ಹೀಗೆ ಶರಣರಲ್ಲಿ ಸಮಗಾರ, ಮಾದಾರ, ಮೇದಾರ, ಡೋಹರ, ಅಂಬಿಗ ಮುಂತಾದ ಪದಗಳು ಜಾತಿ ಸೂತಕವನ್ನು ಕಳೆದುಕೊಂಡು ಕಾಯಕ ಸೂಚಕಗಳಾಗಿ ಉಳಿದವು.

ಸಂಕ್ಷಿಪ್ತ ಪರಿಚಯಸಂಪಾದಿಸಿ
ವಿಶ್ವಗುರು ಬಸವಣ್ಣನವರು ಪರಮಾತ್ಮನ ಕರುಣೆಯ ಕಂದರಾಗಿ ಅವತರಿಸಿ, ಲೋಕಕ್ಕೆ ಹೊಸ ಧರ್ಮವೊಂದನ್ನು ಕೊಟ್ಟರು. ಇಂಗಳೇಶ್ವರ ಬಾಗೇ ವಾಡಿಯಲ್ಲಿ ಶೈವ ಬ್ರಾಹ್ಮಣ ದಂಪತಿಗಳಾದ ಮಾದರಸ-ಮಾದಲಾಂಬಿಕೆಯರ ಮಗನಾಗಿ ಆನಂದನಾಮ ಸಂವತ್ಸರದಲ್ಲಿ ವೈಶಾಖಮಾಸದ ಅಕ್ಷಯ ತೃತೀಯದಂದು (ದಿ. ಎಪ್ರಿಲ್ ೩೦ ೧೧೩೪) ರೋಹಿಣಿ ನಕ್ಷತ್ರದಲ್ಲಿ ಜನಿಸಿದರು ಎಪ್ರಿಲ್ ೨೦೦೩ರಲ್ಲಿ ಅನಾವರಣಗೊಳಿಸಲಾಯತು
ಶ್ರೀ ಬಸವ ಅಥವಾ ಬಸವಣ್ಣನವರು ಶರಣ ಶರಣೆಯರ ಲಿಂಗಾಯತ ದರ್ಶನ ಪ್ರತಿಪಾದಕರು. ಬಸವಣ್ಣನವರು ೧೨ ನೆಯ ಶತಮಾನದ ಭಕ್ತಿ ಪಂಥದ ಪ್ರಮುಖರಲ್ಲಿ ಒಬ್ಬರು. ಬಸವಣ್ಣನವರು ಮತ್ತು ಶರಣ ಶರಣೆಯರಾದ ಅಲ್ಲಮಪ್ರಭು, ಅಕ್ಕಮಹಾದೇವಿ, ಚೆನ್ನಬಸವಣ್ಣ ವೊದಲಾದ ನೂರಾರು ಶರಣ ಶರಣೆಯರು ವಚನಗಳ ಮೂಲಕ ಭಕ್ತಿಪಥ ಮತ್ತು ಜೀವನದ ಬಗ್ಗೆ ಹೊಸ ದೃಷ್ಟಿ ಬೀರಿದರು.
ಬಸವಣ್ಣನವರು ೧೧೩೪ ರಲ್ಲಿ ಈಗಿನ ಬಿಜಾಪುರ ಜಿಲ್ಲೆಯಲ್ಲಿರುವ ಬಸವನ ಬಾಗೇವಾಡಿ ಗ್ರಾಮದಲ್ಲಿ (ಬಸವಣ್ಣನವರ ತಾಯಿಯ ತವರು ಮನೆಯಾದ ಇಂಗಳೇಶ್ವರ ಗ್ರಾಮದಲ್ಲಿ ಜನಿಸಿದರು ಎಂಬ ಪ್ರತೀತಿ ಇದೆ.), ಶ್ರೀ ಮಾದರಸ ಮತ್ತು ಮಾದಲಾಂಬಿಕೆ ದಂಪತಿಗಳಿಗೆ ಜನಿಸಿದರು. ಬಸವಣ್ಣ ಚಿಕ್ಕಂದಿನಿಂದಲೂ ವೈದಿಕ ಸಂಸ್ಕೃತಿಯ ಕರ್ಮಾಚರಣೆಗಳ ವಿರೋಧಿಯಾಗಿದ್ದರು. ಅಕ್ಕ ನಾಗಮ್ಮ ಮತ್ತು ಭಾವ ಶಿವಸ್ವಾಮಿಯ ಜೊತೆಯಲ್ಲಿ ಬಾಲ್ಯವನ್ನು ಕಳೆದರು. ಅವರ ೮ನೇ ವಯಸ್ಸಿನಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಬಸವಣ್ಣನವರಿಗೆ ಜನಿವಾರ ಹಾಕಲು ಬಂದಾಗ, ಬಸವಣ್ಣನವರು ತನಗಿಂತ ಹಿರಿಯಳಾದ ಅಕ್ಕ ನಾಗಮ್ಮನಿಗೆ ಕೊಡಲು ಕೇಳುತ್ತಾನೆ, ಆಗ ಇದು ಪುರುಷರಿಗೆ ಮಾತ್ರ ಕೊಡುವಂತಹುದು ಆದ್ದರಿಂದ ಅಕ್ಕನಿಗೆ ಕೊಡಲು ಬರುವುದಿಲ್ಲ ಅಂತ ನುಡಿದಾಗ, ಬಸವಣ್ಣ ಪುರುಷ/ಮಹಿಳೆ ಅಸಮಾನತೆಯನ್ನು ವಿರೋಧಿಸಿ ಮನೆಯಿಂದ ನಿರ್ಗಮಿಸಿ ಕೂಡಲಸಂಗಮಕ್ಕೆ ಹೊರಡುತ್ತಾರೆ.
ಬಸವೇಶ್ವರರು ಹನ್ನೆರಡು ವರ್ಷಗಳ ಕಾಲ ಕೂಡಲ ಸಂಗಮದಲ್ಲಿ ಅಧ್ಯಯನ ಮಾಡುತ್ತಾ ಕಳೆದರು.ಅವರ ದೃಷ್ಟಿಯಲ್ಲಿ ದೇವನು ಒಬ್ಬ ಮತ್ತು ಅವನು ಮಾನವನಲ್ಲಿದ್ದಾನೆಯೇ ಹೊರತು ಗುಡಿ-ಗುಂಡಾರಗಳಲ್ಲಿ ಅಲ್ಲ. ಕೆಲಸ ಮಾಡಿ ಜೀವನ ನಡೆಸಬೇಕು, ಆಲಸಿ ಜೀವನ ಸಲ್ಲ. ಸುಳ್ಳು ಹೇಳುವುದು, ವಂಚಿಸುವುದು, ಕೊಲೆ-ಸುಲಿಗೆ ಮಾಡುವುದು, ಪ್ರಾಣಿಬಲಿ ನೀಡುವುದು, ಪರಧನ ಹರಣ, ಪರಸ್ತ್ರೀ ವ್ಯಾವೋಹ ಹೊಂದುವುದು ಘೋರ ಅಪರಾಧ. ಜಾತಿ, ಮತ, ಲಿಂಗಗಳ ಭೇದವನ್ನು ತಿರಸ್ಕರಿಸಿದ ಬಸವಣ್ಣನವರು ಸಾಮಾಜಿಕ ಕ್ರಾಂತಿಗೆ ಕಾರಣವಾದರು. ಬಸವಣ್ಣನವರನ್ನು ಜಗಜ್ಯೋತಿ ಬಸವೇಶ್ವರ, ಕ್ರಾಂತಿಯೋಗಿ ಬಸವಣ್ಣ, ಭಕ್ತಿ ಭಂಡಾರಿ ಬಸವಣ್ಣ, ಮಹಾ ಮಾನವತಾ ವಾದಿ ಎಂದೂ ಕರೆಯಲಾಗುತ್ತದೆ. ಮಾನವಿಯತೆ. ಕಾಯಕ ನಿಷ್ಠೆ ಧರ್ಮದ ಬುನಾದಿಯಾಗಬೇಕು ಎಂದು ಬಲವಾಗಿ ನಂಬಿದ್ದರು.
ಬಸವಣ್ಣ ತಮ್ಮ ವಚನಗಳ ಮೂಲಕ ಕಾಯಕವೇ ಕೈಲಾಸ, ದಯವೇ ಧರ್ಮದ ಮೂಲವಯ್ಯ, ಅಯ್ಯ ಎಂದರೆ ಸ್ವರ್ಗ ಎಲವೂ ಎಂದರೆ ನರಕ ಎಂದು ಸಾರುವ ಮೂಲಕ ತಮ್ಮ ಮಾನವಾತಾ ವಾದಕ್ಕೆ ಸಾಹಿತ್ಯದ ಸ್ಪರ್ಶ ನೀಡಿದರು. ಕನ್ನಡ ಸಾಹಿತ್ಯಕ್ಕೆ ವಚನಗಳ ಮೂಲಕ ಅಪೂರ್ವ ಕೊಡುಗೆ ಅಪಾರ ಇದುವರೆಗೆ ಸುಮಾರು 1500 ವಚನಗಳನ್ನು ಸಂಗ್ರಹಿಸಿಡಲಾಗಿದೆ.ಬಸವಣ್ಣನವರ ಪ್ರೇರಣೆಯಿಂದ ಹರಿಜನ ಮತ್ತು ಬ್ರಾಹ್ಮಣ ಕುಟುಂಬಗಳ ನಡುವೆ ನಡೆದ ಅನುಲೋಮ ವಿವಾಹ ಕಲ್ಯಾಣದ ಕ್ರಾಂತಿಗೆ ಮುನ್ನುಡಿಯಾಯಿತು. ಇವರು ಷಟ್ ಸ್ಥಲ ವಚನ, ಕಾಲಜ್ಞಾನ ವಚನ, ಮಂತ್ರಗೋಪ್ಯ, ಶಿಖಾರತ್ನ ವಚನ ಎಂಬ ಗ್ರಂಥಗಳನ್ನು ಬರೆದಿದ್ದಾರೆ. ಇವರನ್ನು ಕುರಿತಂತೆ ಕನ್ನಡ, ತೆಲುಗು, ಸಂಸ್ಕೃತ, ತಮಿಳು, ಮರಾಠಿ ಮತ್ತು ಹಿಂದಿ ಭಾಷೆಗಳಲ್ಲಿ ಪುರಾಣಗಳು ರಚನೆಯಾಗಿವೆ. ಬಾಗೇವಾಡಿ ಕಪ್ಪಡಿಸಂಗಮ, ಕಲ್ಯಾಣ ಪಟ್ಟಣಗಳಲ್ಲಿ ಇವರ ಸ್ಮಾರಕಗಳಿವೆ.
ಇವರು ಯಾವುದೇ ಅಂಧಶ್ರದ್ಧೆ ಜಡ ಸಂಪ್ರದಾಯಗಳನ್ನೊಪ್ಪದ ಸತ್ಯಾನ್ವೇಷಕರಾಗಿ ಹೆತ್ತವರನ್ನು, ಬಂಧು ಬಾಂಧವರನ್ನು ತೊರೆದು ವಿದ್ಯಾಕಾಂಕ್ಷಿಯಾಗಿ ಕೂಡಲ ಸಂಗಮದ ಗುರುಕುಲಕ್ಕೆ ಬಂದರು. ಶಾಸ್ತ್ರಾಧ್ಯಯನ, ಯೋಗಾಭ್ಯಾಸಗಳಲ್ಲಿ ಬಾಲ್ಯವನ್ನು ಕಳೆದು ತಾರುಣ್ಯಕ್ಕೆ ಕಾಲಿರಿಸಿದರು. ಜನರಲ್ಲಿ ಮನೆ ಮಾಡಿಕೊಂಡಿದ್ದ ಮೌಢ್ಯತೆ, ಕಂದಾಚಾರ, ಜಾತೀಯತೆಗಳನ್ನು ಕಂಡು ಮನನೊಂದು ಪರಿಹಾರವನ್ನು ಅರಸತೊಡಗಿದರು.
ಒಂದು ದಿನ (ದಿ. ೧೪ನೇ ಜನವರಿ ೧೧೫೫) ಪರಮಾತ್ಮನ ದಿವ್ಯ ದರ್ಶನವಾಯಿತು; ಅನುಗ್ರಹಿತರಾದರು. ಬ್ರಹ್ಮ-ವಿಷ್ಣು-ಮಹೇಶ್ವರರೆಂಬ ತ್ರಿಮೂರ್ತಿಗಳನ್ನು ಮೀರಿದ ಸೃಷ್ಟಿಕರ್ತನೇ ಶ್ರೇಷ್ಠವೆಂದು ಘೋಷಿಸಿ ಆ ದೇವನನ್ನು ಲಿಂಗದೇವ ಎಂದು ಕರೆದರು. ನಿರಾಕಾರ ದೇವನಿಗೆ ಮನುಷ್ಯರ, ಪ್ರಾಣಿಗಳ ಆಕಾರ ಕೊಡುವುದು ಸರಿಯಲ್ಲ ಎಂಬ ಭಾವ ತಳೆದು, ದೇವನ ಸಾಕಾರ ಕೃತಿಯೇ ಬ್ರಹ್ಮಾಂಡ, ಇದು ಗೋಲಾಕಾರದಲ್ಲಿದೆ.
"ಇವನಾರವ, ಇವನಾರವ ಎಂದೆನ್ನದಿರಯ್ಯ
ಇವ ನಮ್ಮವ, ಇವ ನಮ್ಮವ ಎಂದೆನ್ನಿರಯ್ಯ"
ಎಂದು, ಸಮಾಜದ ಎಲ್ಲ ವರ್ಗದ ಜನರನ್ನು ಒಂದುಗೂಡಿಸಿದ ಬಸವಣ್ಣ, ಜಾತೀಯತೆಯ ವಿರುದ್ಧ ಸಮರ ಸಾರಿದರು. "ಹೊಲೆಯನೆಂಬುವವನು ಊರ ಹೊರಗಿಹನೇ? ಊರ ಒಳಗಿಲ್ಲವೆ? ಎಂದು ಪ್ರಶ್ನಿಸಿ, ಅಸ್ಪ್ರಶ್ಯತೆಯ ಹೆಸರಿನಲ್ಲಿ ಊರ ಹೊರಗೆ ಇರಿಸಲಾದ ದಲಿತರನ್ನು ಕರೆತಂದು ಸಮಾಜದ ಭಾಗವನ್ನಾಗಿ ಮಾಡಿದರು. ದೇವಾಲಯ, ಕುಡಿಯುವ ನೀರಿನ ಭಾವಿ-ಕೆರೆಗಳನ್ನು ಬಳಸಲು ಇವರಿಗೂ ಸಮಾನ ಹಕ್ಕಿದೆಯಂದು ತೋರಿಸಿದರು.
ಮಹಿಳಾ ಶಿಕ್ಷಣಕ್ಕೆ ನಾಂದಿಯಾದರು. ಹಲವಾರು ಶರಣೆಯರು, ಕನ್ನಡದಲ್ಲಿ ವಚನಗಳನ್ನು ರಚಿಸಿ ಪ್ರಸಿದ್ಧರಾಗಿದ್ದಾರೆ. ಆದರೆ ಬಿಜ್ಜಳನ ಆಸ್ಥಾನದ ಸಂಪ್ರದಾಯವಾದಿಗಳು ಬಸವಣ್ಣನವರ ಬಗ್ಗೆ ದೂರಿಟ್ಟಾಗ, ಮಂತ್ರಿ ಸ್ಥಾನವನ್ನು ಬಸವಣ್ಣನವರು ತ್ಯಜಿಸಿದರು.
ಶರಣರ ವಚನಗಳು ಮತ್ತು ತತ್ತ್ವ ಕೂಡ ಕಾಯಕದ ಉತ್ಪತ್ತಿಯಾಗಿವೆ ಎಂಬುದನ್ನು ಮರೆಯಬಾರದು. ವಚನಗಳು ಅನನ್ಯವಾಗಿರುವುದು ಇದೇ ಕಾರಣದಿಂದ. ಅನೇಕ ವಚನಕಾರರು ತಮ್ಮ ಕಾಯಕಗಳ ಅನುಭದ ಮೂಲಕವೇ ಅನುಭಾವಿಯಾಗಿದ್ದಾರೆ. ಅವರ ವಚನಗಳಲ್ಲಿನ ಪ್ರತಿಮೆ, ಪ್ರತೀಕ ಮತ್ತು ಸಂಕೇತಗಳು ಅವರವರ ಕಾಯಕಗಳ ಅನುಭವದ ಮೂಲಕವೇ ಸೃಷ್ಟಿಯಾಗಿವೆ. ಕಾಯಕದ ವಸ್ತುಗಳು ಹೀಗೆ ಕಾವ್ಯ ಪ್ರತಿಮೆಗಳಾಗುತ್ತಲೇ ತತ್ತ್ವವನ್ನು ಸ್ಫುರಿಸತೊಡಗುತ್ತವೆ.
ಗುರು ಬಸವಣ್ಣವರ ೮೦೦ನೇಯ ಲಿಂಗೈಕ್ಯ ದಿನಾಚರಣೆ ನಿಮಿತ್ತ ಭಾರತ ಸರಕಾರದ ಅಂಚೆ ಇಲಾಖೆಯು ೧೧ನೇ ಮೇ ೧೯೬೭ರಲ್ಲಿ ೧೫ ಪೈಸೆ ಮುಖ ಬೆಲೆಯುಳ್ಳ ಅಂಚೆ ಚೀಟಿ ಯನ್ನು ಮುದ್ರಿಸಿತು. ಮತ್ತೊಮ್ಮೆ ೧೯೯೭ರಲ್ಲಿ ೨ ರೂಪಾಯಿ ಮುಖ ಬೆಲೆಯುಳ್ಳ ಅಂಚೆ ಚೀಟಿಯನ್ನು ಮುದ್ರಿಸಿತು.ಗುರು ಬಸವಣ್ಣವರ ಭಾವಚಿತ್ರವುಳ್ಳ ೫ ರೂಪಾಯಿ ಮತ್ತು ೧೦೦ ರೂಪಾಯಿ ನಾಣ್ಯಗಳನ್ನು ಡಾ. ಮನಮೋಹನ ಸಿಂಗ್ ಅವರು ಬೆಂಗಳೂರಿನಲ್ಲಿ ಬಿಡುಗಡೆಗೊಳಿಸಿದರು. ಬಸವಣ್ಣನವರು ನಾಣ್ಯದ ಮೇಲೆ ಪ್ರಕಟಿಸಲ್ಪಟ್ಟವರಲ್ಲಿ ಪ್ರಥಮ ಕನ್ನಡಿಗ ರಾಗಿದ್ದಾರೆ.ಗುರು ಬಸವಣ್ಣವರ ಅಶ್ವಾರೂಢ ಮೂರ್ತಿಯನ್ನು ದೆಹಲಿಯಲ್ಲಿರುವ ಪಾರ್ಲಿಮೆಂಟ್ ನಲ್ಲಿ ೨೮ನೇ ಎಪ್ರಿಲ್ ೨೦೦೩ರಲ್ಲಿ ಅನಾವರಣಗೊಳಿಸಲಾಯತು.