India Languages, asked by yashaswini8039, 4 months ago

ಪ್ರಬಂಧ ಬರೆಯಿರಿ ರಾಷ್ಟ್ರಪತಿ ಡಾ. ಎ. ಪಿ. ಜೆ ಅಬ್ದುಲ್ ಕಲಾಂ.
(if you don't know this language don't answer,one who knows it can answer)​

Answers

Answered by vatsalaanand108
3

Answer:

ಇವರು ಹುಟ್ಟಿ ಬೆಳೆದದ್ದು ತಮಿಳುನಾಡಿನ ರಾಮೇಶ್ವರಂನಲ್ಲಿ. ಇವರು ಭೌತಶಾಸ್ತ್ರ ಮತ್ತು ಅಂತರಿಕ್ಷಯಾನ ಇಂಜಿನಿಯರಿಂಗ್ ಅಧ್ಯಯನ ಮಾಡಿದ್ದರು. ಅಧ್ಯಯನ ನಂತರ ನಾಲ್ಕು ದಶಕಗಳ ಕಾಲ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿ.ಅರ್.ಡಿ.ಓ) ಮತ್ತು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ದಲ್ಲಿ ವಿಜ್ಞಾನಿ ಮತ್ತು ವಿಜ್ಞಾನ ವ್ಯವಸ್ಥಾಪಕರಾಗಿ ಕಾರ್ಯ ನಿರ್ವಹಿಸಿದರು.ಭಾರತದ ನಾಗರಿಕ ಬಾಹ್ಯಾಕಾಶ ಕಾರ್ಯಕ್ರಮ ಮತ್ತು ಕ್ಷಿಪಣಿ ಅಭಿವೃದ್ಧಿ ಪ್ರಯತ್ನಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಕ್ಷಿಪಣಿ ಮತ್ತು ಉಡಾವಣಾ ತಂತ್ರಜ್ಞಾನದ ಅಭಿವೃದ್ಧಿಯ ಅಧ್ಯಯನದಿಂದ, ಇವರು ಭಾರತದ ಕ್ಷಿಪಣಿ ಮಾನವ ಎಂಬ ಹೆಸರಿನಿಂದ ಚಿರಪರಿಚಿತರಾಗಿದ್ದರು. ೧೯೯೮ರಲ್ಲಿ ನೆಡೆದ ಭಾರತದ ಪೋಖ್ರಾನ್-೨ ಪರಮಾಣು ಪರೀಕ್ಷೆಯಲ್ಲಿ ಸಾಂಸ್ಥಿಕವಾಗಿ, ತಾಂತ್ರಿಕವಾಗಿ ಮತ್ತು ರಾಜಕೀಯವಾಗಿ ಒಂದು ಪ್ರಮುಖ ಪಾತ್ರ ವಹಿಸಿದರು. ಇದು ೧೯೭೪ರಲ್ಲಿ ನಡೆದ ಮೂಲ ಪರಮಾಣು ಪರೀಕ್ಷೆಯ ನಂತರ ನೆಡೆದ ಮೊದಲ ಪರಮಾಣು ಪರೀಕ್ಷೆಯಾಗಿದೆ. ಕಲಾಂ ಅವರು ೨೦೦೨ ರಲ್ಲಿ, ಆಡಳಿತ ಪಕ್ಷ ಭಾರತೀಯ ಜನತಾ ಪಕ್ಷ ಮತ್ತು ವಿರೋಧ ಪಕ್ಷ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್, ಎರಡು ಪಕ್ಷಗಳ ಬೆಂಬಲದೊಂದಿಗೆ ರಾಷ್ಟ್ರಪತಿಯಾಗಿ ಆಯ್ಕೆಯಾದರು.ಐದು ವರುಷಗಳ ಅವಧಿ ಪೂರೈಸಿದ ನಂತರ, ಅವರು ಶಿಕ್ಷಣ, ಬರವಣಿಗೆ ಮತ್ತು ಸಾರ್ವಜನಿಕ ಸೇವೆಯ ಜೀವನಕ್ಕೆ ಮರಳಿದರು. ಅವರು ಭಾರತದ ಅತ್ಯುನ್ನತ ನಾಗರಿಕ ಗೌರವ ಭಾರತ ರತ್ನ ಸೇರಿದಂತೆ ಅನೇಕ ಪ್ರತಿಷ್ಠಿತ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಇವರು ಅವಿವಾಹಿತರಾಗಿದ್ದರು. ಅಬ್ದುಲ್ ಕಲಾಂ ಅವರನ್ನ ಭಾರತದ ಮಿಸೈಲ್ ಮ್ಯಾನ್ ಆಫ್ ಇಂಡಿಯ ಎಂದು ಕರೆಯುತ್ತಾರೆ

mark me as a brainliest if this answer helps u❤️❤️

Answered by saraswathishivu96
0

Answer:

I don't now please sorry

Similar questions