India Languages, asked by bebrainlyindia74, 3 months ago

ಸ್ವಚ್ಛಭಾರತ ಅಭಿಯಾನ ಪ್ರಬಂಧ​

If you know this language than only answer.

Answers

Answered by BrainlyUnnati
9

ಪ್ರಸ್ತಾವನೆ :

ನಮ್ಮ ಆರೋಗ್ಯದ ದೃಷ್ಟಿಯಿಂದ ನಾವು ವಾಸಿಸುವ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ನಮ್ಮ ಆದ್ಯ ಕರ್ತವ್ಯವಾಗಿದೆ. ಈ ದಿಸೆಯಲ್ಲಿ ಪ್ರತಿಯೊಬ್ಬರೂ ಸ್ವಯಂ ಪ್ರೇರಿತರಾಗಿ ಸ್ವಚ್ಛತೆಯ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು.ಇದು ನಮ್ಮ ಮನೆ ಪರಿಸರದಿಂದಲೇ ಪ್ರಾರಂಭಿಸಬೇಕು.

ವಿಷಯ ನಿರೂಪಣೆ :

'ಆರೋಗ್ಯವೇ ಭಾಗ್ಯ' ಎಂಬ ನಾಣ್ಣುಡಿ ನಮ್ಮಲ್ಲಿದೆ ಉತ್ತಮ ಆರೋಗ್ಯಕ್ಕೆ ಉತ್ತಮ ಹಾಗೂ ಸ್ವಚ್ಛವಾದ ಪರಿಸರ ಅಗತ್ಯ. ಇದಕ್ಕಾಗಿಯೇ ನಮ್ಮ ಇಂದಿನ ಪ್ರಧಾನ ಮಂತ್ರಿಗಳು ಗಾಂಧೀಜಿಯವರ ಜನ್ಮದಿನವಾದ 2.10.2014ರಂದು ಸ್ವಚ್ಛ ಭಾರತ ಅಭಿಯಾನವನ್ನು ಪ್ರಾರಂಭಿಸಿದರು. ಗಾಂಧೀಜಿಯವರು ಹುಟ್ಟಿ 150 ವರ್ಷ ಪೂರ್ಣಗೊಳ್ಳುವ 2.10.2019ಕ್ಕೆ ಈ ಯೋಜನೆಯ ಗುರಿಯನ್ನು ಇಟ್ಟುಕೊಳ್ಳಲಾಗಿದೆ.ಈ ಅವಧಿಯಲ್ಲಿ ಸಂಪೂರ್ಣವಾಗಿ ಸ್ವಚ್ಛಭಾರತ ನಿರ್ಮಾಣವಾಗಬೇಕು ಈ ದಿಸೆಯಲ್ಲಿ ಈಗಾಗಲೇ ಹಳ್ಳಿಗಳಲ್ಲಿ ನಗರಗಳಲ್ಲಿ ತಾವು ವಾಸಿಸುವ ಪ್ರದೇಶಗಳಲ್ಲಿ ಕೆಲಸ ಮಾಡುವ ಸ್ಥಳಗಳಲ್ಲಿ ಸ್ವಚ್ಛತಾ ಆಂದೋಲನವನ್ನು ಕೈಗೆತ್ತಿಕೊಳ್ಳಲಾಗಿದೆ.ಇದರಿಂದ ಉತ್ತಮ ಪರಿಸರ ನಿರ್ಮಾಣವಾಗುತ್ತಿದೆ.ತ್ಯಾಜ್ಯ ವಸ್ತುಗಳ ಸಮರ್ಪಕ ವಿಲೇವಾರಿಯಾಗುತ್ತಿದ್ದು ಇನ್ನೂ ಉತ್ತಮಗೊಳ್ಳಬೇಕಿದೆ ಜನರಲ್ಲಿ ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿದೆ. ಸಮೂಹ ಮಾಧ್ಯಮಗಳು ಇದನ್ನು ಯಶಸ್ವಿಗೊಳಿಸುವಲ್ಲಿ ಪೂರ್ಣ ಸಹಕಾರ ನೀಡುತ್ತಿವೆ. ದೇಶದಾದ್ಯಂತ ಈ ಅಭಿಯಾನವು ಉತ್ತಮವಾಗಿ ಅನುಷ್ಠಾನಗೊಳ್ಳುತ್ತಿರುವುದು ಸಂತೋಷದ ವಿಷಯ.

ಉಪಸಂಹಾರ :

ಸ್ವಚ್ಛ ಭಾರತ ನಿರ್ಮಾಣದ ಕನಸನ್ನು ನನಸು ಮಾಡೋಣ ಈ ಯೋಜನೆಯನ್ನು ಸಾಕಾರಗೊಳಿಸುವಲ್ಲಿbಪ್ರತಿವಾರ ಕೇವಲ ಎರಡು ಗಂಟೆಗಳ ಅವಧಿಯನ್ನು ಮೀಸಲಿಡೋಣ ಈ ಮೂಲಕ ಪ್ರಧಾನ ಮಂತ್ರಿಗಳ ಕನಸನ್ನು ನನಸಾಗಿಸುವುದರ ಮೂಲಕ ಅಭಿಯಾನವನ್ನು ಯಶಸ್ವಿಗೊಳಿಸೋಣ.

Similar questions