India Languages, asked by OMSHAKTHIgowda, 6 months ago

in kannada write about kannada rajouthsava in about 400 to 500 words.(IN KANNADA )​

Answers

Answered by prakashk99
1

Answer:

ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) ೧೯೫೬ರ ನವೆಂಬರ್ ೧ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ.[೩] ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ. ರಾಜ್ಯೋತ್ಸವ ದಿನವನ್ನು ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ರಜಾದಿನವೆಂದು ಪಟ್ಟಿ ಮಾಡಲಾಗಿದೆ ಮತ್ತು ವಿಶ್ವದಾದ್ಯಂತ ಕನ್ನಡಿಗರು ಇದನ್ನು ಆಚರಿಸುತ್ತಾರೆ. ಕರ್ನಾಟಕ ಸರ್ಕಾರದಿಂದ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ.

ನಮ್ಮ ಕರ್ನಾಟಕ ರಾಜ್ಯೋತ್ಸವ

Karnataka Rajyotsava

Explanation:

ರಾಜಯೋತ್ಸವದ ಭಾಗವಾಗಿ ಡೊಳ್ಳು

ಕುಣಿತ ಸಾಂಪ್ರದಾಯಿಕ ನೃತ್ಯ

ಪರ್ಯಾಯ ಹೆಸರುಗಳು

ಕರ್ನಾಟಕ ರಾಜ್ಯೋತ್ಸವ, ಕರ್ನಾಟಕ ರಚನೆ ದಿನ

ಆಚರಿಸಲಾಗುತ್ತದೆ

ಕನ್ನಡಿಗರು ಭಾರತದಲ್ಲಿ ವಿದೇಶಗಳಲ್ಲಿ [೧]

ರೀತಿ

ರಾಜ್ಯ

ಮಹತ್ವ

ಕರ್ನಾಟಕ ರಾಜ್ಯದ ದಕ್ಷಿಣ ಭಾರತದ ಕನ್ನಡ-ಮಾತನಾಡುವ ಪ್ರದೇಶಗಳಆಚರಣೆಗಳು

ಕರ್ನಾಟಕ ಧ್ವಜಾರೋಹಣ , ಮೆರವಣಿಗೆಗಳು,

ಸಾಂಸ್ಕೃತಿಕ ಕಾರ್ಯಕ್ರಮಗಳು ,ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ [೨]

ದಿನಾಂಕ

ನವೆಂಬರ್ ೧ಕನ್ನಡ ರಾಜ್ಯೋತ್ಸವ ಇತಿಹಾಸ

ಸ್ವಾತಂತ್ರದ ನಂತರ, ಒಡೆಯರ್ ಮಹಾರಾಜ ಭಾರತದ ಭಾಗವಾಗಲು ಸಮ್ಮತಿಸಿದರು. 1950ರಲ್ಲಿ , ಮೈಸೂರು ಭಾರತದ ರಾಜ್ಯವಾಯಿತು, ಹಾಗು ಪೂರ್ವ ಮಹಾರಾಜ 1957ರ ವರಗೆ ರಾಜ್ಯಪಾಲರಾದರು.

''ಏಕೀಕರಣ'' ಚಳುವಳಿ 19ನೆಯ ಶತಮಾನಡ ಎರಡನೇ ಭಾಗದಲ್ಲಿ ಪ್ರಾರಂಭವಾಗಿ 1956 ರಾಜ್ಯ ಪುನಸ್ಸಂಘಟನೆ ಕಾಯಿದೆ ಯೊಂದಿಗೆ ಮುಕ್ತಾಯವಾಯಿತು, ಇದರಿಂದ ಕೂರ್ಗ್, ಮದ್ರಾಸ್, ಹೈದರಾಬಾದ್, ಹಾಗು ಬಾಂಬೆ ರಾಜ್ಯದ ಭಾಗಗಳನ್ನು ಮೈಸೂರು ರಾಜ್ಯಕ್ಕೆ ಸೇರ್ಪಡಿಸಲಾಯಿತು. ಮೈಸೂರು ರಾಜ್ಯವನ್ನು ಕರ್ನಾಟಕ ಎಂದು ಪುನರ್ನಾಮಕರಣ ಮಾಡಲಾಯಿತು.

ಕರ್ನಾಟಕ ರಾಜ್ಯ ರೂಪುಗೊಂಡಾಗ ಒಟ್ಟು 19 ಜಿಲ್ಲೆಗಳನ್ನು ಒಳಗೊಂಡಿತ್ತು. ಅಂದಿನಿಂದ ನವೆಂಬರ್ 1 ನ್ನು ಕನ್ನಡ ರಾಜ್ಯೋತ್ಸವ / ಕರ್ನಾಟಕ ರಾಜ್ಯೋತ್ಸವವಾಗಿ ಆಚರಿಸಲಾಗುತ್ತದೆ.

ಕರ್ನಾಟಕ ಹೆಸರು:

ಕರ್ನಾಟಕ ಪದದ ಮೂಲದಬಗ್ಗೆ ಹಲವು ಅಭಿಪ್ರಾಯಗಳಿದ್ದರೂ ಸಾಮಾನ್ಯವಾಗಿ "ಕರು" ಮತ್ತು "ನಾಡು" ಸೇರಿ "ಎತ್ತರದ ಭೂಮಿ" ಎಂಬರ್ಥದ ಕರುನಾಡು ಪದದಿಂದ ಉಗಮವಾಗಿದೆ ಎನ್ನಲಾಗಿದೆ. ಕರು ಎಂದರೆ ಕಪ್ಪು, ನಾಡು ಎಂದರೆ ಪ್ರದೇಶ ಎಂದು ಅರ್ಥೈಸಿಕೊಂಡರೆ ಬಯಲು ಸೀಮೆಯ ಕಂಡು ಕಪ್ಪು ಹತ್ತಿ ಮಣ್ಣಿನಿಂದಾಗಿ ಹೆಸರು ಬಂದಿದೆ ಎಂದೂ ಹೇಳಲಾಗುತ್ತದೆ. ಕೃಷ್ಣಾ ನದಿಯ ದಕ್ಷಿಣಕ್ಕೆ ಎರಡೂ ಕಡೆ ಜಲಾವೃತವಾದ ಪ್ರದೇಶವಾದ್ದರಿಂದ ಬ್ರಿಟಿಷರ ಕಾಲದಲ್ಲಿ ಕಾರ್ನಾಟಿಕ್ ಅಥವಾ ಕರ್ನಾಟಕ ಹೆಸರು ಬಳಕೆಗೆ ಬಂತು.

Advertisement

Answered by roopashekarmalali
1

Answer:

ನವೆಂಬರ್ 1 ಎಂದರೇನೇ ಅದೇನೋ ಖುಷಿ... ಅದೇನೋ ಸಡಗರ... ನಮ್ಮ ಹೆಮ್ಮೆಯ ಕರುನಾಡು ರೂಪುಗೊಂಡ ದಿನವದು. ದಕ್ಷಿಣ ಭಾರತದ ಕನ್ನಡ ಮಾತನಾಡುವ ಎಲ್ಲಾ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ಅತ್ಯಂತ ವಿಜೃಂಭಣೆಯಿಂದ ಆಚರಿಸುತ್ತಾರೆ. ಕರ್ನಾಟಕದಲ್ಲಿ ಮಾತ್ರವಲ್ಲ, ದೇಶ ವಿದೇಶದಲ್ಲಿ ನೆಲೆಸಿರುವ ಕನ್ನಡಿಗರು ಈ ದಿನವನ್ನು ಅತ್ಯಂತ ಪ್ರೀತಿ, ಹೆಮ್ಮೆಯಿಂದ ಆಚರಣೆ ಮಾಡುತ್ತಾರೆ.

ಕನ್ನಡ, ಕರ್ನಾಟಕ ಬರೀ ಭಾಷೆಯಲ್ಲ, ಬರೀ ನೆಲವಲ್ಲ ಅದೊಂದು ಭಾವನಾತ್ಮಕ ಸಂಬಂಧ, ಎಂದೂ ಬಿಡಿಸಲಾರದ ಬಾಂಧವ್ಯ. ಕರುನಾಡು ಎಂಬ ಪದವೇ ಅಮೃತಕ್ಕೆ ಸಮಾನ. ನಮ್ಮ ಹೆಮ್ಮೆ ಸರ್ವ ಜನಾಂಗದ ಈ ಶಾಂತಿಯ ತೋಟ. ಇಂತಹ ಹೆಮ್ಮೆಯ ಕರುನಾಡು ಉದಯಿಸಿದ ಈ ದಿನದಂದು ಕನ್ನಡಾಂಬೆಯ ಭಾವಚಿತ್ರದ ಮೆರವಣಿಗೆ, ಕನ್ನಡ ಬಾವುಟದ ಹಾರಾಟ, ಜೈಕಾರ, ಕರುನಾಡ ಸಂಸ್ಕೃತಿ- ಇತಿಹಾಸ ಸಾರುವ ಹಾಡಿನ ಮೂಲಕ ಕನ್ನಡದ ಸಿರಿವಂತಿಕೆಯ ಸೊಗಡು ಎಲ್ಲೆಲ್ಲೂ ಅನುರಣಿಸುತ್ತಿರುತ್ತದೆ. ಈ ಶುಭ ಸಂದರ್ಭದಲ್ಲಿ ನಿಮ್ಮ ಇಷ್ಟಪಾತ್ರರಿಗೆ ಕಳುಹಿಸುವಂತಹ ಶುಭ ಸಂದೇಶಗಳು ಇಲ್ಲಿವೆ.

ಜೈ ಜನಾನಿ

Similar questions