Environmental Sciences, asked by PawanSharma4435, 1 year ago

Information about sun in Kannada

Answers

Answered by Anonymous
0
ಭಾಷಿಕ ಚರಿತ್ರೆ

ಕನ್ನಡವು ಒಂದು ದ್ರಾವಿಡ ಭಾಷೆಯಾಗಿದೆ. ಕನ್ನಡ ಲಿಪಿ ಸುಮಾರು ೧೫೦೦-೧೬೦೦ ವರ್ಷಗಳಿಗಿಂತಲೂ ಹಿಂದಿನದು. ಐದನೆಯ ಶತಮಾನದ ಹಲ್ಮಿಡಿ ಶಾಸನದ ಸಮಯಕ್ಕಾಗಲೇ ಕನ್ನಡವು ಸಾಕಷ್ಟು ಅಭಿವೃದ್ಧಿ ಹೊಂದಿತ್ತು. ದ್ರಾವಿಡ ಭಾಷಾತಜ್ಞ ಸ್ಟಾನ್‍ಫೋರ್ಡ್ ಸ್ಟೀವರ್ ಅವರ ಅಭಿಪ್ರಾಯದಂತೆ, ಕನ್ನಡದ ಭಾಷಿಕ ಚರಿತ್ರೆಯನ್ನು ಮೂರು ವಿಧವಾಗಿ ವಿಂಗಡಿಸಬಹುದು;

ಹಳಗನ್ನಡ ಕ್ರಿ.ಶ. ೪೫೦ರಿಂದ ಕ್ರಿ.ಶ. ೧೨೦೦ರವರೆಗೆ,

ನಡುಗನ್ನಡ ಕ್ರಿ. ಶ. ೧೨೦೦ರಿಂದ ಕ್ರಿ.ಶ. ೧೭೦೦ರವರೆಗೆ ಮತ್ತು

ಹೊಸಗನ್ನಡ ಕ್ರಿ. ಶ. ೧೭೦೦ರಿಂದ ಪ್ರಸ್ತುತ ಕಾಲಘಟ್ಟದವರೆಗೆ.[೧೬]

ಕನ್ನಡ ಭಾಷಾ ಪರಿಣತರು ಕನ್ನಡ ಸಾಹಿತ್ಯದ ಬೆಳವಣಿಗೆಯನ್ನು ಅಭ್ಯಾಸ ಮಾಡಬಹುದಾದ ಕಾಲಮಾನಗಳನ್ನು ಈ ಕೆಳಗಿನಂತೆಯೂ ನಿಷ್ಕರ್ಷಿಸಿದ್ದಾರೆ.

ಪೂರ್ವದ ಹಳಗನ್ನಡ – ಅನಿಶ್ಚಿತ ಕಾಲಘಟ್ಟದಿಂದ ೭ನೇಯ ಶತಮಾನದವರೆಗೆ;

ಹಳಗನ್ನಡ – ೭ರಿಂದ ೧೨ನೆಯ ಶತಮಾನದವರೆಗೆ;

ನಡುಗನ್ನಡ – ೧೨ನೆಯ ಶತಮಾನದ ಪ್ರಾರಂಭದಿಂದ ೧೮ನೆಯ ಶತಮಾನದವರೆಗೆ;

ಹೊಸಗನ್ನಡ – ೧೮ನೆಯ ಶತಮಾನದ ಆದಿಯಿಂದ ಈಚೆಗೆ.

ಕಳೆದ ಶತಮಾನದಲ್ಲಿ ಎಂದರೆ ೨೦ನೆಯ ಶತಮಾನದಲ್ಲಿ ಕನ್ನಡ ಭಾಷೆಯ ಅಭಿವೃದ್ಧಿ ಬಹಳ ವ್ಯಾಪಕವಾಗಿ ನಡೆಯಿತು. ಕನ್ನಡ ಭಾಷೆಯು ಅಭಿಜಾತ ಭಾಷೆಯೆಂಬ ಸ್ಥಾನಮಾನವನ್ನು ಕೇಂದ್ರ ಸರಕಾರದಿಂದ ಪಡೆದಿದೆ. ಅಂತರಜಾಲದಲ್ಲಿ ಕನ್ನಡ ಭಾಷೆಯ ಬಳಕೆ ಯಥೇಚ್ಛವಾಗಿದೆ. ಕನ್ನಡ ಭಾಷೆ ವಾಣಿಜ್ಯ ಕ್ಷೇತ್ರದಲ್ಲಿಯೂ ಮುಂಚೂಣಿಯ ಭಾಷೆಯಾಗಿ ಬೆಳೆಯತೊಡಗಿದೆ.

ಕನ್ನಡದಲ್ಲಿ ಸಂಸ್ಕೃತದ ಪ್ರಭಾವ ಅಸಾಧಾರಣವಾದುದು. ಪ್ರಾಕೃತ, ಪಾಳಿ ಮುಂತಾದ ಭಾಷೆಗಳ ಪ್ರಭಾವವೂ ಕನ್ನಡಕ್ಕಿದೆ. ಕ್ರಿ.ಪೂ ಮೂರನೆಯ ಶತಮಾನಕ್ಕೂ ಮುನ್ನವೇ ಕನ್ನಡ ಮೌಖಿಕ ಪರಂಪರೆಯ ಭಾಷೆಯಾಗಿ ರೂಪುಗೊಂಡಿತ್ತೆಂಬುದಕ್ಕೂ ಪ್ರಾಕೃತ ಭಾಷೆಯಲ್ಲಿಯೂ ತಮಿಳು ಭಾಷೆಯಲ್ಲಿಯೂ ಬರೆಯಲ್ಪಟ್ಟ ಶಾಸನಗಳಲ್ಲಿ ಕನ್ನಡದ ಶಬ್ದಗಳು ಬಳಕೆಯಾಗಿವೆಯೆಂದೂ ಇತಿಹಾಸ ತಜ್ಞ ಐರಾವತಂ ಮಹಾದೇವನ್ ಸಾಬೀತುಪಡಿಸಿದ್ದಾರೆ. ಆ ಸಂಶೋಧನೆಯ ಪ್ರಕಾರ ಕನ್ನಡ ಅಗಾಧ ಪ್ರಮಾಣದ ಜನತೆ ಮಾತನಾಡುತ್ತಿದ್ದ ಭಾಷೆಯಾಗಿದ್ದಿತೆಂದೂ ತಿಳಿದುಬಂದಿದೆ.[೧೭][೧೮][೧೯][೨೦][೨೧] ಕೆ.ವಿ. ನಾರಾಯಣರು ಹೇಳುವಂತೆ, ಇಂದಿಗೆ ಕನ್ನಡದ ಉಪಭಾಷೆಗಳೆಂದು ಗುರುತಿಸಲ್ಪಡುವ ಭಾಷೆಗಳಲ್ಲಿ ಹೆಚ್ಚಿನವು ಕನ್ನಡದ ಹಳೆಯ ರೂಪವನ್ನು ಹೋಲುವಂಥದ್ದಾಗಿರಬಹುದು. ಅಲ್ಲದೆ ಅನ್ಯ ಭಾಷೆಗಳ ಪ್ರಭಾವ ವ್ಯಾಪಕವಾಗಿ ಒಳಗಾಗದ ಭಾಷೆಗಳು ಇವೆಂದೂ ಅಭಿಪ್ರಾಯಪಡುತ್ತಾರೆ.

Similar questions